Kichcha Sudeep: ಕಿಚ್ಚ ಸುದೀಪ್-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ; ಇಲ್ಲಿದೆ ಕಾರಣ
Kichcha Sudeep: ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ವಿಧಾನಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕಾಗಿ ಸೆಲೆಬ್ರಿಟಿಗಳ ಮೊರೆ ಹೋಗುತ್ತಿದ್ದಾರೆ. ಇನ್ನೂ ಕೆಲವರು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ (Kichcha Sudeep) ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (Dk Shivakumar) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ಕಿಚ್ಚ ಸುದೀಪ್ ಅವರು ಸ್ಯಾಂಡಲ್ವುಡ್ನ ಬೇಡಿಕೆಯ ನಟ. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.
ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಸಭೆಗಳಿಗೆ ಬುರವಂತೆ ಸುದೀಪ್ಗೆ ಡಿಕೆಶಿ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಕಡೆಯಿಂದಾಗಲೀ ಸುದೀಪ್ ಕಡೆಯಿಂದಾಗಲಿ ಇನ್ನಷ್ಟೇ ಪ್ರತಿಕ್ರಿಯೆ ಸಿಗಬೇಕಿದೆ.
ಸುದೀಪ್ ಪಕ್ಷಕ್ಕೆ ಬಂದರೆ ಸ್ವಾಗತ
ಸುದೀಪ್ ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ‘ಸುದೀಪ್ ಪಕ್ಷಕ್ಕೆ ಬಂದರೆ ಸ್ವಾಗತ. ನಮ್ಮ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುವುದು ಅವರಿಗೂ ಹೈಕಮಾಂಡ್ಗೂ ಬಿಟ್ಟ ವಿಚಾರ. ಪಕ್ಷ ಸೇರ್ಪಡೆ ಆದರೆ ಪ್ರಚಾರದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳಬಹುದು. ನಾನು ಸುದೀಪ್ ಅವರನ್ನು ಸದ್ಯ ಭೇಟಿಯಾಗಿಲ್ಲ. ಈ ಕುರಿತು ಮಾತುಕತೆ ಮಾಡಿಲ್ಲ. ರಾಜ್ಯದಲ್ಲಿ ಸಿನಿಮಾ ನಟರು ರಾಜಕೀಯಕ್ಕೆ ಬರುವುದಕ್ಕೆ ಸ್ವಲ್ಪ ಯೋಚನೆ ಮಾಡುತ್ತಾರೆ. ಆಂಧ್ರ ತಮಿಳುನಾಡು ತೆಲಂಗಾಣದಲ್ಲಿ ಆದಂತೆ ನಮ್ಮಲ್ಲಿ ಆಗುವುದಿಲ್ಲ. ಆ ರಾಜ್ಯಗಳ ತರಹ, ಬೇರೆ ಪಕ್ಷದವರ ತರಹ ನಮ್ಮ ಪಕ್ಷ ಸ್ಟಾರ್ಗಳನ್ನು ಕರೆತಂದು ಯಾವತ್ತೂ ಪ್ರಚಾರ ಮಾಡಿಲ್ಲ. ಆದರೆ ಸುದೀಪ್ ಬಂದು ಪ್ರಚಾರದಲ್ಲಿ ತೊಡಗಿದರೆ ಸ್ವಾಗತ ಮಾಡ್ತೇವೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:01 pm, Fri, 3 February 23