AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆದಿನಗಳು ಚೇತನ್​ ಕುಮಾರ್​ಗೆ ನೋಟಿಸ್​; ಬುಧವಾರ ವಿಚಾರಣೆಗೆ ಹಾಜರಾಗಲು ಸೂಚನೆ

ಚೇತನ್​ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ  ಪೊಲೀಸರು ಚೇತನ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು.

ನಟ ಆದಿನಗಳು ಚೇತನ್​ ಕುಮಾರ್​ಗೆ ನೋಟಿಸ್​; ಬುಧವಾರ ವಿಚಾರಣೆಗೆ ಹಾಜರಾಗಲು ಸೂಚನೆ
ರಾಜೇಶ್ ದುಗ್ಗುಮನೆ
|

Updated on: Jun 15, 2021 | 7:19 PM

Share

ಬ್ರಾಹ್ಮಣ ಸಮುದಾಯದ ಬಗ್ಗೆ ನಟ ಆದಿನಗಳು ಚೇತನ್​ ನೀಡಿದ ಹೇಳಿಕೆ ಸಾಕಷ್ಟು ವಿವಾದ ಹೊತ್ತಿಸಿತ್ತು. ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಬಸವನಗುಡಿ ಪೊಲೀಸರು ಚೇತನ್​ಗೆ ನೋಟಿಸ್ ನೀಡಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಚೇತನ್​ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ  ಪೊಲೀಸರು ಚೇತನ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈಗ ನಟ ಚೇತನ್ ಗೆ ಬಸವನಗುಡಿ ಪೊಲೀಸರಿಂದ ನೊಟೀಸ್ ಬಂದಿದೆ. ಅವರು ಬುಧವಾರ (ಜೂನ್​ 16) ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್‌ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೂಡ ಆಗ್ರಹಿಸಿದ್ದರು.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಒತ್ತಾಯ  

Rakshith Shetty on Chethan : ಆ ದಿನಗಳು ನಟ ಚೇತನ್ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್