ಬ್ರಾಹ್ಮಣ ಸಮುದಾಯದ ಬಗ್ಗೆ ನಟ ಆದಿನಗಳು ಚೇತನ್ ನೀಡಿದ ಹೇಳಿಕೆ ಸಾಕಷ್ಟು ವಿವಾದ ಹೊತ್ತಿಸಿತ್ತು. ಈ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಬಸವನಗುಡಿ ಪೊಲೀಸರು ಚೇತನ್ಗೆ ನೋಟಿಸ್ ನೀಡಿದ್ದಾರೆ.
‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಚೇತನ್ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಚೇತನ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈಗ ನಟ ಚೇತನ್ ಗೆ ಬಸವನಗುಡಿ ಪೊಲೀಸರಿಂದ ನೊಟೀಸ್ ಬಂದಿದೆ. ಅವರು ಬುಧವಾರ (ಜೂನ್ 16) ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಬ್ರಾಹ್ಮಣಿಕೆ ಮತ್ತು ಬ್ರಾಹ್ಮಣತ್ವ ಭಯೋತ್ಪಾದಕ ಎಂಬ ರೀತಿಯಲ್ಲಿ ನಟ ಚೇತನ್ ಅವರ ಹೇಳಿಕೆ ಇದೆ. ಈ ಹೇಳಿಕೆಗಳು ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವು ತಂದಿವೆ. ಚೇತನ್ ಬ್ರಾಹ್ಮಣ ಸಮುದಾಯದ ಬೇಷರತ್ ಕ್ಷಮೆ ಕೇಳಲಿ. ನಟ ಚೇತನ್ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಬಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೂಡ ಆಗ್ರಹಿಸಿದ್ದರು.
ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್ ಆರೋಪ; ನಟ ಚೇತನ್ ಬಂಧನಕ್ಕೆ ಶಿವರಾಮ್ ಹೆಬ್ಬಾರ್ ಒತ್ತಾಯ
Rakshith Shetty on Chethan : ಆ ದಿನಗಳು ನಟ ಚೇತನ್ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ