ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್

ಈ ಮೊದಲು ವಿಚಾರಣೆ ಎದುರಿಸಿದ್ದ ನಟ ಚೇತನ್​ ಅವರು, ಈ ಹೋರಾಟ ಮುಂದುವರೆಸುತ್ತೆವೆ. ವಿಚಾರಣೆ ವೇಳೆ ಪ್ರತಿಯೊಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದೇನೆ ಎಂದಿದ್ದರು. ಈ ಬೆನ್ನಲ್ಲೇ ಮತ್ತೆ ನೋಟಿಸ್​ ಬಂದಿದೆ.

ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್
ನಟ ಚೇತನ್​
Follow us
ರಾಜೇಶ್ ದುಗ್ಗುಮನೆ
|

Updated on: Jun 18, 2021 | 3:51 PM

ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ ನಟ ಚೇತನ್​ ಅವರಿಗೆ ನೋಟಿಸ್ ​ ನೀಡಿದ ಹಿನ್ನೆಲೆಯಲ್ಲಿ ಅವರು ಜೂನ್ 16ರಂದು ವಿಚಾರಣಗೆ ಹಾಜರಾಗಿದ್ದು. ಈ ವಿಚಾರಣೆ ಮುಗಿದ ಬೆನ್ನಲ್ಲೇ ಅವರಿಗೆ ಮತ್ತೊಮ್ಮೆ ನೋಟಿಸ್​ ನೀಡಲಾಗಿದೆ. ಹೀಗಾಗಿ, ಚೇತನ್ ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ. 

ಈ ಮೊದಲು ವಿಚಾರಣೆ ಎದುರಿಸಿದ್ದ ನಟ ಚೇತನ್​ ಅವರು, ಈ ಹೋರಾಟ ಮುಂದುವರೆಸುತ್ತೆವೆ. ವಿಚಾರಣೆ ವೇಳೆ ಪ್ರತಿಯೊಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದೇನೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಇದೆ’ ಎಂದು ಮಾಧ್ಯಮಗಳಿಗೆಹೇಳಿದ್ದರು. ಈಗ ಅವರಿಗೆ ಪೊಲೀಸರು ಮತ್ತೊಮ್ಮೆ ನೋಟಿಸ್​ ನೀಡಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ. ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಚೇತನ್​ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಚೇತನ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು, ನೋಟಿಸ್​ ನೀಡಿದ್ದರು. ವಿಚಾರಣೆ ಪೂರ್ಣಗೊಳ್ಳದ ಕಾರಣ ಮತ್ತೊಮ್ಮೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ಚಿತ್ರರಂಗದಲ್ಲಿರುವ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಲಿ’; ರಕ್ಷಿತ್ ಶೆಟ್ಟಿಗೆ ಚೇತನ್​ ಸವಾಲು

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್