Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?

Rishab Shetty | Ab de Villiers: ಎಲ್ಲೆಲ್ಲೂ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳಿಗೆ ಥ್ರಿಲ್​ ಆಗಿದೆ.

Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
ರಿಷಬ್ ಶೆಟ್ಟಿ, ಎಬಿ ಡಿವಿಲಿಯರ್ಸ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 04, 2022 | 7:31 AM

ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್​ ಆಟಗಾರ ಎಬಿ ಡಿವಿಲಿಯರ್ಸ್ (Ab de Villiers) ಅವರು ಮತ್ತೆ ಬೆಂಗಳೂರಿಗೆ ಮರಳಿದ್ದಾರೆ. ಅವರ ಎಂಟ್ರಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಐಪಿಎಲ್​ ಹರಾಜಿಗೂ ಮುನ್ನ ಅವರು ಬೆಂಗಳೂರಿಗೆ ಕಾಲಿಟ್ಟಿರುವುದು ಕುತೂಹಲ ಹೆಚ್ಚಿಸಿದೆ. ಅದಕ್ಕಿಂತಲೂ ಅಚ್ಚರಿ ಏನೆಂದರೆ, ಬರುಬರುತ್ತಲೇ ಅವರು ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಮಾತಾಡಿದ್ದಾರೆ. ಹೌದು, ರಿಷಬ್​ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ‘ಕಾಂತಾರ’ ಎಂದು ಕೂಗಿದ್ದಾರೆ. ಈ ವಿಡಿಯೋವನ್ನು ‘ಹೊಂಬಾಳೆ ಫಿಲ್ಮ್ಸ್​’ ಮತ್ತು ರಿಷಬ್​ ಶೆಟ್ಟಿ (Rishab Shetty) ಅವರು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಳ್ಳಲಾಗಿದೆ. ಇಬ್ಬರು ಸೆಲೆಬ್ರಿಟಿಗಳನ್ನು ಒಟ್ಟಿಗೆ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರ ದೇಶಾದ್ಯಂತ ಧೂಳೆಬ್ಬಿಸಿದೆ. ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದ್ದರೂ ಅನೇಕ ಕಡೆಗಳಲ್ಲಿ ಈಗಲೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ರಜನಿಕಾಂತ್​, ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಮಾತಾಡಿದ್ದಾಗಿದೆ. ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಚಿತ್ರದ ಹೆಸರು ಕೇಳಿ ಅಭಿಮಾನಿಗಳಿಗೆ ಥ್ರಿಲ್​ ಆಗಿದೆ.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಎಬಿ ಡಿವಿಲಿಯರ್ಸ್ ‘ಕಾಂತಾರ’ ನೋಡಿದ್ದಾರೋ ಇಲ್ಲವೋ ಎಂಬುದು ಖಚಿತ ಆಗಿಲ್ಲ. ಒಟ್ಟಿನಲ್ಲಿ ಅವರು ಪ್ರಮೋಷನ್​ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಪಂದ್ಯ. ನಿಜವಾದ 360ಯನ್ನು ಇಂದು ಭೇಟಿ ಮಾಡಿದ್ದೇನೆ. ನಮ್ಮ ಬೆಂಗಳೂರಿಗೆ ಸೂಪರ್​ ಹೀರೋ ಮರಳಿ ಬಂದಿದ್ದಾರೆ’ ಎಂದು ರಿಷಬ್​ ಶೆಟ್ಟಿ ಅವರು ಈ ವಿಡಿಯೋಗೆ ಕ್ಯಾಪ್ಷನ್​ ನೀಡಿದ್ದಾರೆ.

ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ರಿಷಬ್​ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಇಬ್ಬರೂ ಕೂಡ ಕ್ಲೈಮ್ಯಾಕ್ಸ್​ ತಜ್ಞರು. ಕೊನೆಯ 20 ನಿಮಿಷದಲ್ಲಿ ಸಖತ್​ ಥ್ರಿಲ್​ ನೀಡುತ್ತಾರೆ’ ಎಂದು ಫ್ಯಾನ್ಸ್​ ಹೊಗಳಿದ್ದಾರೆ. ಬೆಂಗಳೂರಿನಲ್ಲಿ ಎಬಿ ಡಿವಿಲಿಯರ್ಸ್ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಆರ್​ಸಿಬಿ ಪರವಾಗಿ 10 ಆವೃತ್ತಿಗಳಲ್ಲಿ ಐಪಿಎಲ್​ ಆಡಿರುವ ಅವರು, ಇಲ್ಲಿನ ಜನರ ಹೃದಯ ಗೆದ್ದಿದ್ದಾರೆ. ಆದರೆ 2021ರಲ್ಲಿ ಅವರು ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದಾಗ ಅಭಿಮಾನಿಗಳಿಗೆ ಬೇಸರ ಆಗಿತ್ತು.

ಈ ವರ್ಷದ ಐಪಿಲ್​ ಹರಾಜಿಗೂ ಮುನ್ನವೇ ಎಬಿ ಡಿವಿಲಿಯರ್ಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ‘ರಾಯಲ್​ ಚಾಲೆಂಜರ್ಸ್​ ಬೆಂಗಳೂರು’ ತಂಡ ಅದ್ದೂರಿಯಾಗಿ ಸ್ವಾಗತಿಸಿದೆ. ಆರ್​ಸಿಬಿಗೆ ಕೋಚ್​ ಆಗಿ ಅವರು ಕಾರ್ಯ ನಿರ್ವಹಿಸಬಹುದು ಎಂದು ಎಲ್ಲರೂ ಊಹಿಸಿದ್ದಾರೆ. ಈ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Fri, 4 November 22

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ