AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh Reception: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಆರತಕ್ಷತೆಯ ಅದ್ದೂರಿ ವೇದಿಕೆ; ಈ ಡೆಕೋರೇಷನ್​ನ ವಿಶೇಷತೆ ಏನು ಗೊತ್ತಾ?

Abhishek Ambareesh Aviva Bidapa Reception: ಭಾರತದಲ್ಲೇ ಮೊದಲ ಬಾರಿಗೆ ಈ ರೀತಿ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ಈ ಪರಿಕರಗಳನ್ನು ತರಿಸಲಾಗಿದೆ. ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ ವೇದಿಕೆ ಸಖತ್​ ಆಕರ್ಷಕವಾಗಿದೆ.

Abhishek Ambareesh Reception: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಆರತಕ್ಷತೆಯ ಅದ್ದೂರಿ ವೇದಿಕೆ; ಈ ಡೆಕೋರೇಷನ್​ನ ವಿಶೇಷತೆ ಏನು ಗೊತ್ತಾ?
ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ರಿಸೆಪ್ಷನ್​ ವೇದಿಕೆ
ಮದನ್​ ಕುಮಾರ್​
|

Updated on:Jun 07, 2023 | 6:48 PM

Share

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಜೂನ್​ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳತಿ ಅವಿವಾ ಬಿಡಪ (Aviva Bidapa) ಜೊತೆ ಅವರ ವಿವಾಹ ನೆರವೇರಿತು. ಇಂದು (ಜೂನ್​ 7) ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ನೆರವೇರಿಸಲಾಗುತ್ತಿದೆ. ಸಂಜೆ 7 ಗಂಟೆಯಿಂದ ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಕಲರ್​ಫುಲ್​ ವೇದಿಕೆ ಸಿದ್ಧವಾಗಿದೆ. ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ ವೇದಿಕೆಯನ್ನು ವಿಶೇಷ ಥೀಮ್​ನಲ್ಲಿ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ತುಂಬ ದಿನಗಳಿಂದ ತಯಾರಿ ಮತ್ತು ಪ್ಲಾನಿಂಗ್​ ಮಾಡಲಾಗಿತ್ತು. ಚಿತ್ರರಂಗ, ರಾಜಕೀಯ, ಮಾಧ್ಯಮ ಲೋಕ ಸೇರಿದಂತೆ ಅನೇಕ ಕ್ಷೇತ್ರಗಳ ಅತಿಥಿಗಳು ಆರತಕ್ಷತೆಗೆ ಹಾಜರಿ ಹಾಕಲಿದ್ದಾರೆ. ಸುಮಲತಾ ಅಂಬರೀಷ್​ (Sumalatha Ambareesh) ಅವರು ಮಗನ ರಿಸೆಪ್ಷನ್​ ಅನ್ನು ವೈಭವದಿಂದ ಮಾಡುತ್ತಿದ್ದಾರೆ.

ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿದೆ. 300 ಶಾಂಡ್ಲಿಯರ್​ ಬಳಕೆ ಆಗಿದೆ. 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇದೆ. ಭಾರತದಲ್ಲೇ ಮೊದಲ ಬಾರಿಗೆ ಈ ರೀತಿ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ಈ ಪರಿಕರಗಳನ್ನು ತರಿಸಲಾಗಿದೆ. ವಿವಿಧ ಬಗೆಯ ಹೂವುಗಳನ್ನು ಕೂಡ ತರಿಸಲಾಗಿದ್ದು ಬಹಳ ಆಕರ್ಷಕವಾಗಿ ರಿಸೆಪ್ಷನ್​ ವೇದಿಕೆಯನ್ನು ಸಿಂಗರಿಸಲಾಗಿದೆ. ಸ್ವತಃ ಸುಮಲತಾ ಅಂಬರೀಷ್​ ಅವರೇ ಎಲ್ಲದರ ಉಸ್ತುವಾರಿ ವಹಿಸಿಕೊಂಡು ಈ ಡೆಕೋರೇಷನ್​ ಮಾಡಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: Prasad Bidapa: ಅಂಬರೀಷ್​ ಕುಟುಂಬದ ಜತೆ ಸಂಬಂಧ ಬೆಳೆಸಿದ್ದರ ಬಗ್ಗೆ ಮೊದಲ ಬಾರಿ ಮಾತಾಡಿದ ಅವಿವಾ ತಂದೆ ಪ್ರಸಾದ್ ಬಿಡಪ

ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ರಿಸೆಪ್ಷನ್​ಗೆ ಆಗಮಿಸುವವರಿಗಾಗಿ ಮೂರು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. 25 ಸಾವಿರ ಜನರಿಗೆ ಭೋಜನ ಸಿದ್ಧವಾಗುತ್ತಿದೆ. ವಿಐಪಿ ಮತ್ತು ವಿವಿಐಪಿ ಅತಿಥಿಗಳಿಗೆ ಪ್ರತ್ಯೇಕವಾಗಿ ಜಾಗದ ವ್ಯವಸ್ಥೆ ಇದೆ. ಆರತಕ್ಷತೆಯ ಊಟದಲ್ಲಿ ದಕ್ಷಿಣ ಭಾರತದ ಖಾದ್ಯಗಳ ಜೊತೆ 34 ಬಗೆಯ ತಿನಿಸುಗಳನ್ನು ಮಾಡಿಸಲಾಗಿದೆ. ಅಭಿಮಾನಿಗಳಿಗೆ ಮತ್ತು ಗಣ್ಯರಿಗೆ ಒಂದೇ ರೀತಿಯ ಊಟ ಇರಲಿದೆ.

ಇದನ್ನೂ ಓದಿ: Abhishek Ambareesh: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅದ್ದೂರಿ ವಿವಾಹದ ಸುಂದರ ವಿಡಿಯೋ ವೈರಲ್​

ಆರತಕ್ಷತೆಗೆ ಆಗಮಿಸುವ ಗಣ್ಯರು:

ಕಾಲಿವುಡ್​ ನಟ ಸೂರ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ , ಫಾರುಖ್ ಅಬ್ದುಲ್, ಗುಲಾಮ್ ನಬಿ‌ ಆಜಾದ್, ‘ಮೆಗಾ ಸ್ಟಾರ್​’ ಚಿರಂಜೀವಿ ಪತ್ನಿ ಸುರೇಖಾ, ರಾಮ್ ಚರಣ್, ಯಶ್ ಕುಟುಂಬದವರು, ಶಿವರಾಜ್​ಕುಮಾರ್​ ಹಾಗು ರಾಘವೇಂದ್ರ ರಾಜ್​ಕುಮಾರ್​ ಕುಟುಂಬದ ಸದಸ್ಯರು, ಮೋಹನ್ ಬಾಬು ಕುಟುಂಬದವರು, ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಸೇರಿದಂತೆ ಅನೇಕ ಗಣ್ಯರು ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅವರ ಆರತಕ್ಷತೆಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:07 pm, Wed, 7 June 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ