Narendra Modi: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ಮರಿ ರೆಬಲ್ ಅಭಿಷೇಕ್

ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್ ಅವರುಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ವಿವಾಹ ಜೂನ್ ತಿಂಗಳಲ್ಲಿದ್ದು, ವಿವಾಹಕ್ಕೆ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.

Narendra Modi: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ಮರಿ ರೆಬಲ್ ಅಭಿಷೇಕ್
ಪ್ರಧಾನಿ ಮೋದಿಗೆ ಆಹ್ವಾನ ಪತ್ರಿಕೆ ನೀಡಿದ ಅಭಿಷೇಕ್
Follow us
ಮಂಜುನಾಥ ಸಿ.
|

Updated on:Apr 05, 2023 | 4:52 PM

ಅಂಬರೀಶ್ಸುಮಲತಾ (Ambareesh-Sumalatha) ಪುತ್ರ, ನಟ ಅಭಿಷೇಕ್ ಅಂಬರೀಶ್ (Abhishek Ambareesh) ವಿವಾಹ ಕೆಲವೇ ದಿನಗಳಲ್ಲಿ ನಡೆಯಲಿದ್ದು, ಇಂದು (ಏಪ್ರಿಲ್ 05) ರಂದು ಅಭಿಷೇಕ್ ಅಂಬರೀಶ್ ಅವರು ಪ್ರಧಾನಿ ಮೋದಿಯವರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಸಹ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್​ಗೆ ಜೊತೆಯಾಗಿದ್ದಾರೆ.

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ನಿಶ್ಚತಾರ್ಥವು ಕೆಲವು ತಿಂಗಳ ಹಿಂದೆ ನಡೆದಿತ್ತು. ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿಯೇ ಈ ಜೋಡಿಯ ಅದ್ಧೂರಿ ವಿವಾಹ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಹಂಚಿಕೆ ಪ್ರಾರಂಭವಾಗಿದೆ. ಇತ್ತೀಚೆಗಷ್ಟೆ ತಮ್ಮ ಬೆಂಬಲವನ್ನು ಬಿಜೆಪಿಗೆ ನೀಡಿರುವ ನಟಿ, ಸಂಸದೆ ಸುಮಲತಾ, ಮಗನೊಟ್ಟಿಗೆ ತೆರಳಿ ಪ್ರಧಾನಿ ಮೋದಿಯವರಿಗೆ ಆಮಂತ್ರಣ ಪತ್ರಿಕೆ ನೀಡಿ ವಿವಾಹಕ್ಕೆ ಆಹ್ವಾನಿಸಿದ್ದಾರೆ. ಮೊದಲ ಆಹ್ವಾನ ಪತ್ರಿಕೆಯನ್ನು ಮೋದಿಯವರಿಗೆ ನೀಡಿರುವುದು ವಿಶೇಷ.

ಪ್ರಧಾನಿ ಮೋದಿ ಮಾತ್ರವೇ ಅಲ್ಲದೆ, ಹಲವು ರಾಜಕೀಯ ಸಹವರ್ತಿಗಳಿಗೆ ಆಮಂತ್ರಣ ಪತ್ರಿಕೆಯನ್ನು ಸುಮಲತಾ ಅವರು ಪುತ್ರಿ ಅಭಿಷೇಕ್ ಜೊತೆಸೇರಿ ನೀಡಲಿದ್ದಾರೆ. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಸೇರಿದಂತೆ ಹಲವು ಪ್ರಮುಖ ಸಂಸದರು ಹಾಗೂ ಸಚಿವರುಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡುವ ಸಾಧ್ಯತೆ ಇದೆ.

ಕಳೆದ ನಾಲ್ಕು ವರ್ಷಗಳಿಂದಲೂ ಸುಮಲತಾ ಸಂಸದೆಯಾಗಿದ್ದು, ವಿವಿಧ ಪಕ್ಷಗಳ ಸಂಸದ ಗೆಳೆಯರು ಸುಮಲತಾ ಅವರಿಗಿದ್ದಾರೆ. ಸುಪ್ರಿಯಾ ಸುಲೆ, ಜಯಾ ಬಚ್ಚನ್, ಕನಮೋಳಿ ಸೇರಿದಂತೆ ಇನ್ನೂ ಹಲವು ಪ್ರಮುಖ ಮಹಿಳಾ ಸಂಸದೆಯರೊಟ್ಟಿಗೆ ಸುಮಲತಾ ಅವರಿಗೆ ಗೆಳೆತನವಿದೆ ಹಾಗಾಗಿ ಪಕ್ಷಭೇದವಿಲ್ಲದೆ ಹಲವು ಸಂಸದ ಗೆಳೆಯರಿಗೆ ಸುಮಲತಾ ಅವರು ಮಗನ ಮದುವೆ ಆಹ್ವಾನ ಪತ್ರಿಕೆ ನೀಡಲಿದ್ದಾರೆ.

ಇನ್ನು ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್ ನಿಶ್ಚಿತಾರ್ಥವು ಡಿಸೆಂಬರ್ 11 ರಂದು ನಡೆದಿತ್ತು. ನಟ ಯಶ್ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಹಾಗೂ ಕೆಲವು ರಾಜಕಾರಣಿಗಳು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನವಜೋಡಿಯ ವಿವಾಹವು ಜೂನ್ ತಿಂಗಳಲ್ಲಿ ನಡೆಯಲಿದ್ದು, ರಾಜ್ಯದ ಪ್ರಮುಖ ರಾಜಕಾರಣಿಗಳು, ರಾಷ್ಟ್ರದ ಪ್ರಮುಖ ರಾಜಕಾರಣಿಗಳು ಸೇರಿದಂತೆ ಕನ್ನಡ, ತೆಲುಗು, ತಮಿಳು ಚಿತ್ರರಂಗದ ಹಲವು ಪ್ರಮುಖ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ವಿವಾಹ ನಡೆಯಲಿದ್ದು, ಆ ಬಳಿಕ ಮಂಡ್ಯದಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ನಡೆಯಲಿದೆ.

ಇದನ್ನೂ ಓದಿ: Abhishek Ambareesh Engagement: ಮನಮೆಚ್ಚಿದ ಹುಡುಗಿ ಅವಿವಾ ಬಿದ್ದಪ್ಪ ಜತೆ ಅಭಿಷೇಕ್​ ಅಂಬರೀಷ್​ ನಿಶ್ಚಿತಾರ್ಥ; ಇಲ್ಲಿದೆ ಫೋಟೋ ಗ್ಯಾಲರಿ

ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸುಮಲತಾ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯಭೇರಿ ಭಾರಿಸಿ ಸಂಸದರಾದರು. ಇತ್ತೀಚೆಗಷ್ಟೆ ತಮ್ಮ ಪೂರ್ಣ ಬೆಂಬಲವನ್ನು ಬಿಜೆಪಿಗೆ ನೀಡಿರುವ ಸುಮಲತಾ, ಸಂಸದೆಯಾಗಿ ಅವಧಿ ಪೂರ್ಣವಾದ ಬಳಕ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Wed, 5 April 23

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!