
ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಹಾಗೂ ನಟಿ ರಚಿತಾ ರಾಮ್ಗೆ ಇಂದು (ಅಕ್ಟೋಬರ್ 3) ಜನ್ಮದಿನದ ಸಂಭ್ರಮ. ಈ ವಿಶೇಷ ದಿನದ ಪ್ರಯುಕ್ತ ಇವರ ನಟನೆಯ ಸಿನಿಮಾ ತಂಡಗಳಿಂದ ಪೋಸ್ಟರ್ ಹಾಗೂ ಟೀಸರ್ಗಳು ಗಿಫ್ಟ್ ಆಗಿ ಸಿಗುತ್ತಿವೆ.
ಅಭಿಷೇಕ್ ಅಂಬರೀಷ್ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಇದಕ್ಕೆ ಕಾರಣ ರೆಬೆಲ್ ಸ್ಟಾರ್ ಕುಟುಂಬ. ಅಂಬರೀಷ್ ಹಾಗೂ ಸುಮಲತಾ ಪುತ್ರ ಎನ್ನುವುದು ಒಂದು ಕಾರಣವಾದರೆ, ಅಭಿಷೇಕ್ ತಮ್ಮ ನಟನೆ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಕಾಮನ್ ಡಿಪಿ ಅನಾವರಣ ಮಾಡಲಾಗಿದೆ. ನಟಿ, ಸಂಸದೆ ಸುಮಲತಾ ಅಂಬರೀಷ್ ಕಾಮನ್ ಡಿಪಿ ಅನಾವರಣ ಮಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಅಭಿಷೇಕ್ಗೆ ಶುಭಾಶಯ ಕೋರುತ್ತಿದ್ದಾರೆ.
ಅಭಿಷೇಕ್ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದ ಸಣ್ಣ ವಿಡಿಯೋ ತುಣುಕು ಇಂದು ರಿಲೀಸ್ ಆಗಲಿದೆ. ದುನಿಯಾ ಸೂರಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿ. ಈ ವಿಶೇಷ ವಿಡಿಯೋದಲ್ಲಿ ರಚಿತಾ ರಾಮ್ ಕೂಡ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಕೊವಿಡ್ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಆದಾಗ್ಯೂ ಅಭಿಷೇಕ್ ದೊಡ್ಡ ಮಟ್ಟದಲ್ಲಿ ಬರ್ತ್ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಅಭಿಮಾನಿಗಳನ್ನು ಇಂದು ಭೇಟಿ ಮಾಡುವ ಸಾಧ್ಯತೆ ಇದೆ.
ರಚಿತಾ ರಾಮ್ ಜನ್ಮದಿನಕ್ಕೂ ಎಲ್ಲ ಕಡೆಗಳಿಂದ ಶುಭಾಶಯ ಹರಿದು ಬರುತ್ತಿದೆ. ರಚಿತಾ ರಾಮ್ ಡಿಂಪಲ್ ಕ್ವೀನ್ ಎಂದೇ ಖ್ಯಾತಿ ಪಡೆದವರು. ಅವರ ಜನ್ಮದಿನಕ್ಕೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ರಚಿತಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳ ಪೋಸ್ಟರ್ ಅಥವಾ ಟೀಸರ್ಗಳು ಇಂದು ರಿಲೀಸ್ ಆಗುವ ನಿರೀಕ್ಷೆ ಇದೆ.
ಇದನ್ನೂ ಓದಿ: ಸುಮಲತಾ ಅಂಬರೀಶ್ ಮನೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ; ಸಾತ್ ನೀಡಿದ ಅಭಿಷೇಕ್
ಮೊದಲ ಅವಾರ್ಡ್ ತಂದು ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್ ಅಂಬರೀಷ್; ಸುಮಲತಾ ಮೊಗದಲ್ಲಿ ಸಂಭ್ರಮ