ಅಭಿಷೇಕ್ ಅಂಬರೀಶ್ ಮದುವೆ ದಿನಾಂಕ, ಸ್ಥಳ, ಅತಿಥಿಗಳು ಇನ್ನಿತರೆ, ಮದುವೆ ಬೆಂಗಳೂರಿನಲ್ಲಾ? ಮಂಡ್ಯದಲ್ಲಾ?

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಮದುವೆ ದಿನಾಂಕ, ಸ್ಥಳ, ಅತಿಥಿಗಳ ಪಟ್ಟಿ ಇನ್ನಿತರ ಮಾಹಿತಿಗಳು ಇಲ್ಲಿವೆ. ಮದುವೆ ಬೆಂಗಳೂರಿನಲ್ಲ? ಮಂಡ್ಯದಲ್ಲಾ?

ಅಭಿಷೇಕ್ ಅಂಬರೀಶ್ ಮದುವೆ ದಿನಾಂಕ, ಸ್ಥಳ, ಅತಿಥಿಗಳು ಇನ್ನಿತರೆ, ಮದುವೆ ಬೆಂಗಳೂರಿನಲ್ಲಾ? ಮಂಡ್ಯದಲ್ಲಾ?
ಅಭಿಷೇಕ್-ಅವಿವಾ
Follow us
ಮಂಜುನಾಥ ಸಿ.
|

Updated on: Apr 08, 2023 | 9:37 PM

ಅಭಿಷೇಕ್ ಅಂಬರೀಶ್ (Abhishek Ambareesh) ತಮ್ಮ ಬಹುಸಮಯದ ಗೆಳತಿ ಅವಿವಾ ಬಿದಪ್ಪ ಅವರೊಟ್ಟಿಗೆ ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೆಲವೇ ದಿನದಲ್ಲಿ ಈ ಯುವಜೋಡಿ ವಿವಾಹ ಬಂಧಕ್ಕೆ ಒಳಗಾಗಲಿದೆ. ಈಗಾಗಲೇ ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ (Sumalatha Ambareesh) ಅವರುಗಳು ಮದುವೆ ಆಮಂತ್ರಣ ಪತ್ರಿಕೆ ವಿತರಣೆ ಆರಂಭಿಸಿದ್ದು, ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇನ್ನಿತರೆ ದೆಹಲಿಯ ಗಣ್ಯ ರಾಜಕಾರಣಿಗಳಿಗೆ ಆಹ್ವಾನ ಪತ್ರಿಕೆ ವಿತರಿಸಿ ಮದುವೆಗೆ ಆಹ್ವಾನಿಸಿದ್ದಾರೆ.

ಅಭಿಷೇಕ್ ಹಾಗೂ ಅವಿವಾ ವಿವಾಹ ಜೂನ್ 9 ಹಾಗೂ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ವಿಶೇಷವೆಂದರೆ ಮಂಡ್ಯದಲ್ಲಿ ಜೂನ್ 12 ರಂದು ರಿಸೆಪ್ಷನ್ ಹಾಗೂ ಬೀಗರ ಊಟ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಹಾಗೂ ಅವಿವಾ ವಿವಾಹಕ್ಕೆ ಸುಮಾರು 10,000 ಅತಿಥಿಗಳು ಆಗಮಿಸುವ ನಿರೀಕ್ಷೆ ಇದೆ. ಹಲವು ರಾಜ್ಯ ಹಾಗೂ ರಾಷ್ಟ್ರಮಟ್ಟದ ರಾಜಕೀಯ ಗಣ್ಯರು. ಸ್ಯಾಂಡಲ್​ವುಡ್ ಮಾತ್ರವೇ ಅಲ್ಲದೆ ಬಾಲಿವುಡ್, ತೆಲುಗು ಚಿತ್ರರಂಗ, ತಮಿಳು, ಮಲಯಾಳಂ ಚಿತ್ರರಂಗದಿಂದಲೂ ಸ್ಟಾರ್​ಗಳು ಆಗಮಿಸಿದ್ದಾರೆ. ಜೊತೆಗೆ ಅಭಿಷೇಕ್ ಹಾಗೂ ಸುಮಲತಾ ಅಂಬರೀಶ್ ಅವರ ಅಭಿಮಾನಿಗಳು ಸಹ ಮದುವೆಗೆ ಆಗಮಿಸಲಿದ್ದಾರೆ.

ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಇನ್ನೂ ಹಲವು ರಾಜಕಾರಣಿಗಳ ಜೊತೆಗೆ, ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್, ಬಾಲಿವುಡ್​ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಅಭಿಷೇಕ್ ಹಾಗೂ ಅವಿವಾ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ.

ಇದನ್ನೂ ಓದಿ: Aviva-Abhishek: ನವಜೋಡಿ ಅವಿವಾ ಬಿದ್ದಪ್ಪ-ಅಭಿಷೇಕ್ ಅಂಬರೀಶ್​ರ ಹೊಸ ಕ್ಯೂಟ್ ಚಿತ್ರಗಳು

ಇನ್ನು ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್ ನಿಶ್ಚಿತಾರ್ಥವು ಡಿಸೆಂಬರ್ 11 ರಂದು ನಡೆದಿತ್ತು. ನಟ ಯಶ್ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಹಾಗೂ ಕೆಲವು ರಾಜಕಾರಣಿಗಳು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನವಜೋಡಿಯ ವಿವಾಹವು ಜೂನ್ ತಿಂಗಳಲ್ಲಿ ನಡೆಯಲಿದ್ದು, ರಾಜ್ಯದ ಪ್ರಮುಖ ರಾಜಕಾರಣಿಗಳು, ರಾಷ್ಟ್ರದ ಪ್ರಮುಖ ರಾಜಕಾರಣಿಗಳು ಸೇರಿದಂತೆ ಕನ್ನಡ, ತೆಲುಗು, ತಮಿಳು ಚಿತ್ರರಂಗದ ಹಲವು ಪ್ರಮುಖ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ವಿವಾಹ ನಡೆಯಲಿದ್ದು, ಆ ಬಳಿಕ ಮಂಡ್ಯದಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ನಡೆಯಲಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸುಮಲತಾ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯಭೇರಿ ಭಾರಿಸಿ ಸಂಸದರಾದರು. ಇತ್ತೀಚೆಗಷ್ಟೆ ತಮ್ಮ ಪೂರ್ಣ ಬೆಂಬಲವನ್ನು ಬಿಜೆಪಿಗೆ ನೀಡಿರುವ ಸುಮಲತಾ, ಸಂಸದೆಯಾಗಿ ಅವಧಿ ಪೂರ್ಣವಾದ ಬಳಕ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ