AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ಅದ್ದೂರಿಯಾಗಿ ನಡೆಯಲಿದೆ ಅಭಿಷೇಕ್​ ಅಂಬರೀಷ್​-ಅವಿವಾ ಸಂಗೀತ್​ ಕಾರ್ಯಕ್ರಮ; ಇರಲಿದೆ ಸೆಲೆಬ್ರಿಟಿಗಳ ಹಾಜರಿ

Abhishek Ambareesh Sangeet Ceremony: ಅಂಬರೀಷ್​ ಅವರ ಕನಸಿನಂತೆ ಈ ವಿವಾಹ ನಡೆಯುತ್ತಿದೆ. ‘ಜೂನಿಯರ್ ರೆಬೆಲ್ ಸ್ಟಾರ್​’ ಮದುವೆಗೆ ಸಕಲ ತಯಾರಿ ಆಗಿದೆ. ಸಂಗೀತ್​ ಕಾರ್ಯಕ್ರಮಕ್ಕಾಗಿ ಅಂಬಿ ಮನೆಯಲ್ಲಿ ರಿಹರ್ಸಲ್​ ನಡೆದಿದೆ.

Abhishek Ambareesh: ಅದ್ದೂರಿಯಾಗಿ ನಡೆಯಲಿದೆ ಅಭಿಷೇಕ್​ ಅಂಬರೀಷ್​-ಅವಿವಾ ಸಂಗೀತ್​ ಕಾರ್ಯಕ್ರಮ; ಇರಲಿದೆ ಸೆಲೆಬ್ರಿಟಿಗಳ ಹಾಜರಿ
ಅಭಿಷೇಕ್​ ಅಂಬರೀಷ್​-ಅವಿವಾ ಸಂಗೀತ್​ ಕಾರ್ಯಕ್ರಮಕ್ಕೆ ತಯಾರಿ
ಮದನ್​ ಕುಮಾರ್​
|

Updated on: Jun 04, 2023 | 2:15 PM

Share

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಬಹುಕಾಲದ ಗೆಳತಿ ಅವಿವಾ ಬಿಡಪ (Aviva Bidapa) ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಬಹಳ ಅದ್ದೂರಿಯಾಗಿ ಸಂಗೀತ್​ ಕಾರ್ಯಕ್ರಮ ಕೂಡ ನಡೆಯಲಿದೆ. ಖಾಸಗಿ ಹೋಟೆಲ್​ನಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ‘ರೆಬೆಲ್​ ಸ್ಟಾರ್​’ ಅಂಬರೀಷ್​ ಹಾಗೂ ಸುಮಲತಾ (Sumalatha Ambareesh) ಕುಟುಂಬಕ್ಕೆ ಇರುವ ಸ್ನೇಹಿತರ ಬಳಗ ದೊಡ್ಡದು. ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಈ ಕುಟುಂಬದವರು ಸಕ್ರಿಯರಾಗಿರುವುದರಿಂದ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಹಾಗಾಗಿ ಹಲವಾರು ಸೆಲೆಬ್ರಿಟಿಗಳು ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಂಬರೀಷ್​ ಅವರ ಕನಸಿನಂತೆ, ಅವರು ಹೇಳಿದ ರೀತಿಯಲ್ಲೇ ಈ ವಿವಾಹ ನಡೆಯುತ್ತಿದೆ. ‘ಜೂನಿಯರ್ ರೆಬೆಲ್ ಸ್ಟಾರ್​’ ಮದುವೆಗೆ ಸಕಲ ತಯಾರಿ ಆಗಿದೆ. ಸಂಗೀತ್​ ಕಾರ್ಯಕ್ರಮಕ್ಕಾಗಿ ಅಂಬಿ ಮನೆಯಲ್ಲಿ ಇಂದು ರಿಹರ್ಸಲ್​ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. ಅಂಬರೀಷ್​ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್​ ದೀಪಗಳಿಂದ​ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ.

ಮದುವೆ ಮುಹೂರ್ತ ಯಾವಾಗ?

ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Bad Manners Teaser: ಅಭಿಷೇಕ್​ ಅಂಬರೀಷ್​​ ಜನ್ಮದಿನಕ್ಕೆ ‘ಬ್ಯಾಡ್​ ಮ್ಯಾನರ್ಸ್​’ ಟೀಸರ್​ ಉಡುಗೊರೆ

ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದಾರೆ. ಮೆಹಂದಿ ಶಾಸ್ತ್ರದಲ್ಲಿ ಅಭಿಷೇಕ್ ಅಂಬರೀಷ್ ಅವರು ಮದರಂಗಿ ಹಾಕಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ತಮ್ಮ ಪ್ರೀತಿಪಾತ್ರರ ಹೆಸರನ್ನು ಬರೆಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:  ಅಭಿಷೇಕ್ ಭಾವಿ ಪತ್ನಿ ಅವಿವ ಬಿಡಪ ಗ್ಲಾಮರಸ್ ಫೋಟೋಸ್

ಜೂನ್ 2ರಂದು ಬೆಳಿಗ್ಗೆ ಅಭಿಷೇಕ್ ಅಂಬರೀಷ್ ಅವರ ಬೆಂಗಳೂರು ನಿವಾಸದಲ್ಲಿ ಅರಿಶಿಣ ಶಾಸ್ತ್ರ ನಡೆಯಿತು. ಬಳಿಕ ಮೆಹಂದಿ ಶಾಸ್ತ್ರಗಳು ನಡೆದವು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಭಿಷೇಕ್ ಅವರು ಕೈ ಮೇಲೆ ರೆಬೆಲ್, ಸುಮಾ, ಅವಿವಾ, ಮಂಡ್ಯ ಎಂಬ ಹೆಸರುಗಳನ್ನು ಬರೆಸಿಕೊಂಡಿದ್ದಾರೆ. ಈ ಫೋಟೋನ ಅವರ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್