”ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅದ್ಧೂರಿಯಾಗಿದೆ, ಎಲ್ಲವೂ ಅದ್ಭುತವಾಗಿದೆ ಆದರೆ ಒಂದೇ ಒಂದು ಕೊರತೆ”

Abhishek-Aviva: ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಸಿನಿಮಾ ತಾರೆಯರು, ರಾಜಕೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಿರಿಯ ನಟ ದೊಡ್ಡಣ್ಣನಿಗೆ ಎಲ್ಲವೂ ಅದ್ಭುತ ಅನಿಸಿದರೆ ಆದರೆ ಕೊರತೆಯೊಂದು ಕಾಣುತ್ತಿದೆ.

''ಅಭಿಷೇಕ್-ಅವಿವಾ ವಿವಾಹ ಆರತಕ್ಷತೆ ಅದ್ಧೂರಿಯಾಗಿದೆ, ಎಲ್ಲವೂ ಅದ್ಭುತವಾಗಿದೆ ಆದರೆ ಒಂದೇ ಒಂದು ಕೊರತೆ''
ಅಭಿ-ಅವಿವಾ
Follow us
ಮಂಜುನಾಥ ಸಿ.
|

Updated on:Jun 07, 2023 | 9:26 PM

ಅಭಿಷೇಕ್ ಅಂಬರೀಶ್ (Abhishek Ambareesh) ಹಾಗೂ ಅವಿವಾ ಬಿದಪ್ಪ (Aviva Bidappa) ವಿವಾಹ ಶಾಸ್ತ್ರೋಕ್ತವಾಗಿ ನಡೆದಿದೆ. ಇಂದು (ಜೂನ್ 06) ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯುತ್ತಿದೆ. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವರು ಆರತಕ್ಷತೆಗೆ ಆಗಮಿಸಿ ನೂತನ ವಧು-ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಅಂಬರೀಶ್ (Ambareesh)​ ಇದ್ದಾಗ ಅವರಿಗೆ ಬಹು ಆತ್ಮೀಯರಾಗಿದ್ದ ಹಲವರನ್ನು ಮರೆಯದೇ ಮದುವೆ ಆಹ್ವಾನಿಸಿದ್ದಾರೆ ಸುಮಲತಾ ಹಾಗೂ ಅಭಿಷೇಕ್. ಆರತಕ್ಷತೆ ಕಾರ್ಯಕ್ರಮಕ್ಕೆ ಬಂದ ಗಣ್ಯರಲ್ಲಿ ಕೆಲವರು ಮಾಧ್ಯಮಗಳೊಟ್ಟಿಗೆ ಮಾತನಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅಂಬರೀಶ್ ಇದ್ದಾಗ ಅವರಿಗೆ ಅತ್ಯಂತ ಆಪ್ತರಾಗಿದ್ದವರಲ್ಲಿ ನಟ ದೊಡ್ಡಣ್ಣ ಸಹ ಒಬ್ಬರು. ಅಂಬರೀಶ್​ಗೆ ಅಂಬರೀಶ್ ಕುಟುಂಬಕ್ಕೆ ಅತ್ಯಾಪ್ತರಾಗಿದ್ದ ನಟ ದೊಡ್ಡಣ್ಣ ಕುಟುಂಬದೊಂದಿಗೆ ಆಗಮಿಸಿ ಅಭಿಷೇಕ್-ಅವಿವಾ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ದೊಡ್ಡಣ್ಣ, ಅಭಿಷೇಕ್ ಹಾಗೂ ಅವಿವಾ ಅವರ ಆರತಕ್ಷತೆಯಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ಎಲ್ಲವೂ ಅದ್ಭುತವಾಗಿದೆ. ಆದರೆ ಈ ಸಂದರ್ಭದಲ್ಲಿ ಒಂದು ಕೊರತೆ ಕಾಡುತ್ತಿದೆ. ಅದೆಂದರೆ ನಮ್ಮ ರೆಬಲ್ ಸ್ಟಾರ್ ನಮ್ಮೊಂದಿಗೆ ಇಲ್ಲದೇ ಇರುವುದು. ಅಂಬಿ ಇದ್ದಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂದಿದ್ದಾರೆ ದೊಡ್ಡಣ್ಣ.

ಆರತಕ್ಷತೆಯಲ್ಲಿ ಭಾಗವಹಿಸಿದ್ದ ನಟ, ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್, ನಮ್ಮ ಕುಟುಂಬಕ್ಕೆ ಬಹಳ ಹತ್ತಿರವಾದ ಮದುವೆ ಇದು. ನಮ್ಮ ಕುಟುಂಬದ ಎಲ್ಲರ ಮದುವೆಯೂ ಅಂಬರೀಶ್ ಅವರು ಬಂದಿದ್ದರು. ಶಿವರಾಜ್ ಕುಮಾರ್, ನನ್ನ ಮದುವೆ, ಅಪ್ಪು ಮದುವೆಗೆ ಬಂದಿದ್ದರು. ಇಲ್ಲಿ ಮೂರು ಏ ಡಿಸೈನ್ ಮಾಡಲಾಗಿದೆ. ಅಂದರೆ ಅಂಬರೀಶ್, ಅಭಿಷೇಕ್ ಹಾಗೂ ಅವಿವಾ ಎಂದು ಎಲ್ಲರಿಗೂ ಶುಭವಾಗಲಿ, ನವಜೋಡಿಗೆ ಶುಭವಾಗಲಿ ಎಂದು ಹಾರೈಸಿದರು. ರಾಘವೇಂದ್ರ ರಾಜ್​ಕುಮಾರ್ ಮಾತ್ರವೇ ಅಲ್ಲದೆ ದೊಡ್ಮನೆಯಿಂದ ಶಿವರಾಜ್ ಕುಮಾರ್, ಗೀತಾ ಶಿವರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಸಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕನ್ನಡ ಚಿತ್ರರಂಗದ ಹಲವು ಗಣ್ಯರು, ಸ್ಟಾರ್ ನಟರು ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮೊನ್ನೆ ನಡೆದ ಮದುವೆ ಕಾರ್ಯಕ್ರಮದಲ್ಲಿ ನಟ ಸುದೀಪ್, ಯಶ್ ಅವರುಗಳು ಕುಟುಂಬ ಸಮೇತ ಭಾಗಿಯಾಗಿದ್ದರು. ತಮಿಳಿನ ಸ್ಟಾರ್ ನಟ ರಜನೀಕಾಂತ್ ಸಹ ಮದುವೆಗೆ ಆಗಮಿಸಿ ಶುಭ ಕೋರಿದ್ದರು. ಇಂದು ನಟ ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ಸ್ಟಾರ್ ಶತ್ರುಘನ್ ಸಿನ್ಹಾ ಸೇರಿದಂತೆ ಹಲವರು ಭಾಗಿ ಆಗಲಿದ್ದಾರೆ.

ಸಿನಿಮಾ ತಾರೆಯರು ಮಾತ್ರವೇ ಅಲ್ಲದೆ ಹಲವು ರಾಜಕಾರಣಿಗಳು ಸಹ ಮದುವೆಯಲ್ಲಿ ಭಾಗಿ ಆಗಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ನೂತನ ವಧು-ವರರಿಗೆ ಶುಭ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಅಂಬರೀಶ್​ಗೆ ಅತ್ಯಾಪ್ತರಾಗಿದ್ದವು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಗುಲಾಂ ನಬಿ ಆಜಾದ್ ಇನ್ನೂ ಹಲವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 7 June 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ