ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್-ಸೂರಿ ‘ಬ್ಯಾಡ್ ಮ್ಯಾನರ್ಸ್’

ರೆಬೆಲ್​ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ ಲಾಂಚ್ ಆಗಿದೆ. ದುನಿಯಾ ಸೂರಿ‌ ನಿರ್ದೇಶನದ ಈ ಸಿನಿಮಾದಲ್ಲಿ ಅಭಿಷೇಕ್ ರಗಡ್​ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗ್ಲೇ ಚಿತ್ರ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಕ್ಕೆ ಬ್ಯಾಡ್ ಮ್ಯಾನರ್ಸ್ ಅಂತ ಟೈಟಲ್ ಇಡಲಾಗಿದೆ. ಬ್ಯಾಡ್ ಮ್ಯಾನರ್ಸ್‌ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಹೊರಬಂದಿದ್ದು, ಅಂಬಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇದ್ರೊಂದಿಗೆ ರೆಬೆಲ್ ಸ್ಟಾರ್ ಅಂಬರೀಶ್ ಅವ್ರ ಹುಟ್ಟುಹಬ್ಬದ ದಿನ, ಅಂದ್ರೆ ಮೇ 29ರಂದು ಈ ಚಿತ್ರದ […]

ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್-ಸೂರಿ ‘ಬ್ಯಾಡ್ ಮ್ಯಾನರ್ಸ್’
ಸಾಧು ಶ್ರೀನಾಥ್​

Updated on: May 27, 2020 | 6:53 PM

ರೆಬೆಲ್​ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ ಲಾಂಚ್ ಆಗಿದೆ. ದುನಿಯಾ ಸೂರಿ‌ ನಿರ್ದೇಶನದ ಈ ಸಿನಿಮಾದಲ್ಲಿ ಅಭಿಷೇಕ್ ರಗಡ್​ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗ್ಲೇ ಚಿತ್ರ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಕ್ಕೆ ಬ್ಯಾಡ್ ಮ್ಯಾನರ್ಸ್ ಅಂತ ಟೈಟಲ್ ಇಡಲಾಗಿದೆ.

ಬ್ಯಾಡ್ ಮ್ಯಾನರ್ಸ್‌ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಹೊರಬಂದಿದ್ದು, ಅಂಬಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇದ್ರೊಂದಿಗೆ ರೆಬೆಲ್ ಸ್ಟಾರ್ ಅಂಬರೀಶ್ ಅವ್ರ ಹುಟ್ಟುಹಬ್ಬದ ದಿನ, ಅಂದ್ರೆ ಮೇ 29ರಂದು ಈ ಚಿತ್ರದ ಮೋಷನ್ ಪೋಸ್ಟರ್ ನ ರಿಲೀಸ್ ಮಾಡಿ ಸಿನಿಮಾಗೆ ಚಾಲನೆ ನೀಡಲಿದ್ದಾರೆ.

ಈ ಚಿತ್ರವನ್ನ ಪಾಪ್ ಕಾರ್ನ್ ಮಂಕಿ‌ಟೈಗರ್ ಸಿನಿಮಾದ ನಿರ್ಮಾಪಕ ಸುಧೀರ್ ಕೆ.ಎಂ ನಿರ್ಮಾಣ ಮಾಡ್ತಿದ್ದಾರೆ. ಶೇಖರ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನವಿದೆ. ಮತ್ತೊಂದು ಸುಕ್ಕಾ ಸೂರಿಯ ಸಿನಿಮಾಗೆ ಸುರೇಂದ್ರನಾಥ್ ಅವರ ಕಥೆಯಿದೆ. ಒಟ್ಟಾರೆ, ಅಮರ್ ಬಳಿಕ ಎರಡನೇ ಅಭಿಷೇಕ್ ಸಿನಿಮಾಗೆ ರೆಡಿಯಾಗಿದ್ದಾರೆ. ಗನ್ ಹಿಡಿದು ಅಪ್ಪನನ ಹಾಗೆ ರೆಬೆಲ್ ಲುಕ್ ಕೊಟ್ಟಿದ್ದಾರೆ. ಹೀಗಾಗಿ ಸಹಜವಾಗೇ ರೆಬೆಲ್ ಫ್ಯಾನ್ಸ್​ಗೆ ಸಿನಿಮಾ ಬಗ್ಗೆ ಕೂತೂಹಲ ದುಪ್ಪಟ್ಟಾಗಿದೆ.

Published On - 6:51 pm, Wed, 27 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us