ಅಭಿಷೇಕ್ ಅಂಬರೀಷ್ ಕೈಯಲ್ಲಿ ಮದರಂಗಿ; ಪ್ರೀತಿ ಪಾತ್ರರರ ಹೆಸರುಗಳನ್ನು ಬರೆಸಿಕೊಂಡ ನಟ

ಜೂನ್ 2ರಂದು ಬೆಳಿಗ್ಗೆ ಅಭಿಷೇಕ್ ಅಂಬರೀಷ್ ಅವರ ಬೆಂಗಳೂರು ನಿವಾಸದಲ್ಲಿ ಅರಿಶಿಣ ಶಾಸ್ತ್ರ ನಡೆದಿದೆ. ಬಳಿಕ ಮೆಹೆಂದಿ ಶಾಸ್ತ್ರಗಳು ನಡೆದಿವೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಭಿಷೇಕ್ ಅಂಬರೀಷ್ ಕೈಯಲ್ಲಿ ಮದರಂಗಿ; ಪ್ರೀತಿ ಪಾತ್ರರರ ಹೆಸರುಗಳನ್ನು ಬರೆಸಿಕೊಂಡ ನಟ
ಅಭಿಷೇಕ್
Follow us
ರಾಜೇಶ್ ದುಗ್ಗುಮನೆ
|

Updated on:Jun 03, 2023 | 12:54 PM

ನಟ ಅಭಿಷೇಕ್ ಅಂಬರೀಷ್ (Abhishek Ambareesh) ಅವರ ಮದುವೆಗೆ ಇನ್ನು ಎರಡು ದಿನಗಳಷ್ಟೇ ಬಾಕಿ. ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಇದಕ್ಕೂ ಮೊದಲು ಅರಿಷಿಣ ಶಾಸ್ತ್ರ, ಮೆಹೆಂದಿ ಶಾಸ್ತ್ರಗಳು ನಡೆದಿವೆ. ಅಭಿಷೇಕ್ ಅಂಬರೀಷ್ ಅವರು ಮದರಂಗಿ ಹಾಕಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ತಮ್ಮ ಪ್ರಿತಿ ಪಾತ್ರರ ಹೆಸರನ್ನು ಬರೆಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜೂನ್ 2ರಂದು ಬೆಳಿಗ್ಗೆ ಅಭಿಷೇಕ್ ಅಂಬರೀಷ್ ಅವರ ಬೆಂಗಳೂರು ನಿವಾಸದಲ್ಲಿ ಅರಿಶಿಣ ಶಾಸ್ತ್ರ ನಡೆದಿದೆ. ಬಳಿಕ ಮೆಹೆಂದಿ ಶಾಸ್ತ್ರಗಳು ನಡೆದಿವೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಭಿಷೇಕ್ ಅವರು ಕೈ ಮೇಲೆ ರೆಬೆಲ್, ಸುಮ, ಅವಿವ, ಮಂಡ್ಯ ಎಂಬ ಹೆಸರುಗಳನ್ನು ಬರೆಸಿಕೊಂಡಿದ್ದಾರೆ. ಈ ಫೋಟೋನ ಅವರ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ರೆಬೆಲ್ ಎಂದರೆ ಅಂಬರೀಷ್. ತಂದೆಯ ಬಗ್ಗೆ ಅಭಿಷೇಕ್​ಗೆ ಅಪಾರ ಪ್ರೀತಿ ಇದೆ. ತಾಯಿ ಸುಮಲತಾ ಬಗ್ಗೆಯೂ ಅವರಿಗೆ ಅಪಾರ ಪ್ರೀತಿ ಇದೆ. ಅವರ ಹುಟ್ಟೂರು ಮಂಡ್ಯ. ಅಭಿಷೇಕ್ ಬೆಂಗಳೂರಿನಲ್ಲಿ ಸೆಟ್ಲ್ ಆದರೂ ಊರಿನ ಬಗ್ಗೆ ಇರುವ ಪ್ರೀತಿ ಗೌರವ ಕಡಿಮೆ ಆಗಿಲ್ಲ. ಅವಿವನ ಅವರು ಪ್ರೀತಿಸಿ ಮದುವೆ ಆಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಈ ನಾಲ್ಕು ಹೆಸರುಗಳನ್ನು ಬರೆದುಕೊಂಡಿದ್ದಾರೆ.

ಜೂನ್​ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ನವಜೋಡಿ ಅವಿವಾ ಬಿದ್ದಪ್ಪ-ಅಭಿಷೇಕ್ ಅಂಬರೀಶ್​ರ ಹೊಸ ಕ್ಯೂಟ್ ಚಿತ್ರಗಳು

ಸುಮಲತಾ ಅವರು ಚಿತ್ರರಂಗದಲ್ಲಿ ಹಾಗೂ ರಾಜಕೀಯದಲ್ಲಿ ಗುರುತಿಸಿಕೊಂಡವರು. ಅಂಬರೀಷ್ ಕೂಡ ಸಾಕಷ್ಟು ಜನಪ್ರಿಯತೆ ಹೊಂದಿದ್ದರು. ಹೀಗಾಗಿ, ಎರಡೂ ಕ್ಷೇತ್ರದ ಗಣ್ಯರು ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರು ಮಾತ್ರ ಹಾಜರಿ ಹಾಕಲಿದ್ದಾರೆ. ಇನ್ನು, ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಸುಮಾರು 1 ಲಕ್ಷ ಜನರು ಇದರಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ.

ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Sat, 3 June 23

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!