Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Ambareesh: ಮಂಡ್ಯದಲ್ಲಿ ಬಿಜೆಪಿ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಷ್

ಮಂಡ್ಯ ರಣಾಂಗಣದಲ್ಲಿ ಜೂನಿಯರ್ ರೆಬೆಲ್​ ಸ್ಟಾರ್ ಎಂಟ್ರಿ ಆಗುತ್ತಿದೆ. ಜೆಡಿಎಸ್ ಭದ್ರಕೋಟೆ ಭೇದಿಸಲು ಅಭಿಷೇಕ್ ರೆಡಿ ಆಗಿದ್ದಾರೆ.  

Abhishek Ambareesh: ಮಂಡ್ಯದಲ್ಲಿ ಬಿಜೆಪಿ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಷ್
ಅಭಿಷೇಕ್​-ಸುಮಲತಾ
Follow us
ರಾಜೇಶ್ ದುಗ್ಗುಮನೆ
|

Updated on: Apr 13, 2023 | 10:45 AM

ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಇನ್ನೊಂದು ತಿಂಗಳಲ್ಲಿ ನಿರ್ಧಾರ ಆಗಲಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತಿವೆ. ಸ್ಟಾರ್​ ಹೀರೋಗಳು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಸುದೀಪ್ (Sudeep) ಈಗಾಗಲೇ ಘೋಷಣೆ ಮಾಡಿದ್ದು, ಶುಕ್ರವಾರದಿಂದ (ಏಪ್ರಿಲ್ 14) ಪ್ರಚಾರದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಈಗ ಅಂಬರೀಷ್ ಮಗ ಅಭಿಷೇಕ್ (Abhishek Ambareesh) ಕೂಡ ಬಿಜೆಪಿ ಪರ ಪ್ರಚಾರ ಮಾಡಲು ರೆಡಿ ಆಗಿದ್ದಾರೆ.

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ನನ್ನ ಬೆಂಬಲ ಇದೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಅವರು ಘೋಷಣೆ ಮಾಡಿದ್ದರು. ವಿಧಾನಸಭೆ ಚುನಾವಣೆಗೂ ಮೊದಲು ಅವರು ತೆಗೆದುಕೊಂಡ ನಿರ್ಧಾರ ರಾಜಕೀಯ ದೃಷ್ಟಿಯಿಂದ ಬಹಳ ಮಹತ್ವ ಪಡೆದುಕೊಂಡಿದೆ. ಈಗ ಅವರ ಮಗ ಅಭಿಷೇಕ್ ಅಂಬರೀಷ್ ಕೂಡ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಆಗಲಿದ್ದಾರೆ. ಅವರು ಏಪ್ರಿಲ್ 17ರಿಂದ ಅವರು ಮಂಡ್ಯ ಭಾಗದಲ್ಲಿ ಬಿಜೆಪಿ ಪರ ಮತ ಕೇಳಲಿದ್ದಾರೆ.

ಮಂಡ್ಯ ಜೆಡಿಎಸ್​ನ ಭದ್ರಕೋಟೆ ಎನಿಸಿಕೊಂಡಿದೆ. ಹೀಗಿದ್ದರೂ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಷ್ ಗೆದ್ದಿದ್ದರು. ಜೆಡಿಎಸ್​ ಅಭ್ಯರ್ಥಿ ನಿಖಿಲ್ ಕುಮಾರ್ ಅವರು ಸೋತಿದ್ದರು. ಸ್ಟಾರ್​ಗಳ ಪ್ರಚಾರ ಅವರಿಗೆ ಸಹಕಾರಿ ಆಗಿತ್ತು. ಈಗ ಮಂಡ್ಯ ರಣಾಂಗಣದಲ್ಲಿ ಜೂನಿಯರ್ ರೆಬೆಲ್​ ಸ್ಟಾರ್ ಎಂಟ್ರಿ ಆಗುತ್ತಿದೆ. ಜೆಡಿಎಸ್ ಭದ್ರಕೋಟೆ ಭೇದಿಸಲು ಅಭಿಷೇಕ್ ರೆಡಿ ಆಗಿದ್ದಾರೆ.

ಮೂಲಗಳ ಪ್ರಕಾರ ನಾಮಿನೇಷನ್ ಪ್ರಕ್ರಿಯೆ ಬಳಿಕ ಅಭಿಷೇಕ್ ಅಂಬರೀಷ್ ಅವರು ಪ್ರಚಾರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಏಳೂ ಕ್ಷೇತ್ರದಲ್ಲೂ ಅಭಿ ಪ್ರಚಾರ ಮಾಡಲಿದ್ದಾರೆ. ಮುಖ್ಯವಾಗಿ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ್ಣದಲ್ಲಿ ಅವರು ಮತ ಕೇಳಲಿದ್ದಾರೆ. ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಂ, ಎಸ್.ಪಿ.ಸ್ವಾಮಿ ಪರ ಅಭಿಷೇಕ್ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಮದುವೆ ದಿನಾಂಕ, ಸ್ಥಳ, ಅತಿಥಿಗಳು ಇನ್ನಿತರೆ, ಮದುವೆ ಬೆಂಗಳೂರಿನಲ್ಲಾ? ಮಂಡ್ಯದಲ್ಲಾ?

ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವ ಹಂಬಲದಲ್ಲಿ ಬಿಜೆಪಿ ಇದೆ. ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ಅಧಿಕಾರದ ಚುಕ್ಕಾಣಿ ಹಿಡಿಯುವ ಹಂಬಲದಲ್ಲಿದ್ದಾರೆ. ಇದೆಲ್ಲದಕ್ಕೂ ಮೇ 13ರಂದು ಉತ್ತರ ಸಿಗಲಿದೆ.

ಅಭಿಷೇಕ್ ಅಂಬರೀಷ್ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿದೆ. ಅವಿವಾ ಬಿದ್ದಪ ಜೊತೆ ಶೀಘ್ರವೇ ಅವರು ಮದುವೆ ಆಗಲಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಅಭಿಷೇಕ್ ಅವರು ಆಮಂತ್ರಣ ನೀಡಿದ್ದರು. ಇದರ ಜೊತೆಗೆ ಸಿನಿಮಾ ಕೆಲಸಗಳಲ್ಲೂ ಅಭಿಷೇಕ್ ಬ್ಯುಸಿ ಇದ್ದಾರೆ. ‘ಬ್ಯಾಡ್ ಮ್ಯಾನರ್ಸ್​’ ಹಾಗೂ ‘ಕಾಳಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ