‘ಬ್ಯಾಡ್ ಮ್ಯಾನರ್ಸ್’ ಬಿಡುಗಡೆ ದಿನಾಂಕ ಘೋಷಣೆ: ಬ್ಯಾಕ್ ಲುಕ್​ನಲ್ಲಿ ಅಭಿಷೇಕ್ ಅಂಬರೀಶ್

Abhishek Ambareesh: ಅಭಿಷೇಕ್ ಅಂಬರೀಶ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಇದು ಕನ್ನಡದ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು.

ಬ್ಯಾಡ್ ಮ್ಯಾನರ್ಸ್ ಬಿಡುಗಡೆ ದಿನಾಂಕ ಘೋಷಣೆ: ಬ್ಯಾಕ್ ಲುಕ್​ನಲ್ಲಿ ಅಭಿಷೇಕ್ ಅಂಬರೀಶ್

Updated on: Oct 28, 2023 | 8:45 PM

ಅಭಿಷೇಕ್ ಅಂಬರೀಶ್ (Abhishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಕನ್ನಡದ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾವನ್ನು ಸುಕ್ಕಾ ಸೂರಿ ನಿರ್ದೇಶನ ಮಾಡಿದ್ದಾರೆ ಎಂಬುದು ಇದಕ್ಕೆ ಪ್ರಮುಖ ಕಾರಣ. ಈ ಹಿಂದೆಯೇ ಈ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುತ್ತಲೇ ಬಂದು, ಇದೀಗ ಪಕ್ಕಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.

‘ಬ್ಯಾಡ್ ಮ್ಯಾನರ್ಸ್’ ಸಿನಿಮಾವು ನವೆಂಬರ್ 24ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾ ಬಿಡುಗಡೆ ದಿನಾಂಕವನ್ನು ಪೋಸ್ಟರ್ ಮೂಲಕ ಚಿತ್ರತಂಡ ಹಂಚಿಕೊಂಡಿದೆ. ಪೋಸ್ಟರ್​ನಲ್ಲಿ ಸಖತ್ ಬ್ಯಾಡ್ ಲುಕ್​ನಲ್ಲಿ ಅಭಿಷೇಕ್ ಅಂಬರೀಶ್ ಕಾಣಿಸಿಕೊಂಡಿದ್ದಾರೆ. ಗನ್ ಹಿಡಿದು, ಅವರ ತಂದೆ ಅಂಬರೀಶ್ ರೀತಿಯಲ್ಲಿಯೇ ಬ್ಯಾಡ್ ಬಾಯ್ ಲುಕ್ ನೀಡುತ್ತಿದ್ದಾರೆ.

‘ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನು ಸೂರಿ ನಿರ್ದೇಶನ ಮಾಡಿದ್ದಾರೆ. ‘ಪಾಪ್​ಕಾರ್ನ್ ಮಂಕಿ ಟೈಗರ್’ ಸಿನಿಮಾದ ಬಳಿಕ ಸೂರಿ ನಿರ್ದೇಶಿಸುತ್ತಿರುವ ಸಿನಿಮಾ ಇದು. ಸಿನಿಮಾವನ್ನು ಸ್ಟುಡಿಯೋ 18ರ ಸುಧೀರ್ ನಿರ್ಮಾಣ ಮಾಡಿದ್ದಾರೆ. ಜಯಣ್ಣ ಕಂಬೈನ್ಸ್​ನವರು ಸಿನಿಮಾ ವಿತರಣೆ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಸಿನಿಮಾಕ್ಕೆ ಸಂಗೀತ ನೀಡಿರುವುದು ಚರಣ್ ರಾಜ್. ಸಿನಿಮಾಟೊಗ್ರಫಿ ಶೇಖರ್ ಅವರದ್ದು.

ಇದನ್ನೂ ಓದಿ:ಮಂಡ್ಯ ಜನರ ಪ್ರೀತಿ ಸಾರುವ ಚಿತ್ರಗಳ ಹಂಚಿಕೊಂಡ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ

‘ಬ್ಯಾಡ್ ಮ್ಯಾನರ್ಸ್’ ಅಭಿಷೇಕ್ ಅಂಬರೀಶ್ ಅವರ ಎರಡನೇ ಸಿನಿಮಾ. ಅಭಿಷೇಕ್​ರ ಮೊದಲ ಸಿನಿಮಾ ಅಮರ್​ 2019ರಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಈಗ ‘ಬ್ಯಾಡ್ ಮ್ಯಾನರ್ಸ್’ ಅವರ ಎರಡನೇ ಸಿನಿಮಾ ಆಗಿದ್ದು, ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿಗಿದೆ ಇದಕ್ಕೆ ಸೂರಿ ಈ ಸಿನಿಮಾದ ಸೂತ್ರಧಾರ ಆಗಿರುವುದು ಪ್ರಮುಖ ಕಾರಣ.

ಸಿನಿಮಾದಲ್ಲಿ ಅಭಿಷೇಕ್ ಎದುರು ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಸೂರಿ ನಿರ್ದೇಶನದಲ್ಲಿ ಮೊದಲ ಬಾರಿಗೆ ರಚಿತಾ ನಟಿಸುತ್ತಿದ್ದಾರೆ. ತಾರಾ, ಶರತ್ ಲೋಹಿತಾಶ್ವ, ದತ್ತಣ್ಣ, ಕುರಿ ಪ್ರತಾಪ್ ಅವರುಗಳು ಸಹ ಸಿನಿಮಾದಲ್ಲಿದ್ದಾರೆ. ಈ ಸಿನಿಮಾದ ಬಳಿಕ ಅಭಿಷೇಕ್ ನಟನೆಯ ‘ಕಾಳಿ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ