AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್

ನಟ ಅಭಿಷೇಕ್ ಅಂಬರೀಷ್ ತಮ್ಮ ಮುಂದಿನ ಚಿತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ವಿಲಕ್ಷಣ ಉತ್ತರ ನೀಡಿದ್ದಾರೆ. 'ಅಯೋಗ್ಯ 2' ಚಿತ್ರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿನಿಮಾದ ಬಗ್ಗೆ ಬಿಟ್ಟು 'ಈ ಅಯೋಗ್ಯನ ಬಗ್ಗೆ ಮಾತನಾಡುವುದು ಬೇಡ' ಎಂದು ತಮ್ಮನ್ನು ತಾವೇ ಕಾಲೆಳೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

‘ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’; ಸಿನಿಮಾ ಬಗ್ಗೆ ಕೇಳಿದ್ದಕ್ಕೆ ನೇರವಾಗಿ ಹೇಳಿದ ಅಭಿಷೇಕ್ ಅಂಬರೀಷ್
ಅಭಿಷೇಕ್ ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on: Aug 03, 2026 | 10:58 AM

Share

ಮುಖ್ಯಾಂಶಗಳು

  • ತಮ್ಮನ್ನು ತಾವು 'ಅಯೋಗ್ಯ' ಎಂದು ಕರೆದುಕೊಂಡ ಅಭಿಷೇಕ್ ಅಂಬರೀಷ್
  • ಮುಂದಿನ ಸಿನಿಮಾ ಅಪ್ಡೇಟ್ ಕೇಳಿದ ಆ್ಯಂಕರ್‌ಗೆ ಶಾಕ್
  • ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ಅಭಿಷೇಕ್ ವಿಡಿಯೋ

ಅಭಿಷೇಕ್ ಅಂಬರೀಷ್ (Abhishek Ambareesh) ಇತ್ತೀಚೆಗೆ ಸೈಲೆಂಟ್ ಆಗಿದ್ದಾರೆ. ಖ್ಯಾತ ನಟ ಅಂಬರೀಷ್ ಅವರ ಮಗನಾಗಿದ್ದರೂ ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಈಗ ಅವರು ತಮ್ಮನ್ನು ತಾವು ಅಯೋಗ್ಯ ಎಂದು ಕರೆದುಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣ ಆಗಿದೆ. ಅನೇಕರು ಈ ವಿಡಿಯೋ ಹಂಚಿಕೊಳ್ಳುತ್ತಾ ಇದ್ದಾರೆ.

ಅಭಿಷೇಕ್ ಅವರು ಮೊದಲು ನಟಿಸಿದ್ದು 2019ರ ‘ಅಮರ್’ ಸಿನಿಮಾದಲ್ಲಿ. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಆ ಬಳಿಕ 2023ರಲ್ಲಿ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಮಾಡಿದರು. ಈ ಚಿತ್ರ ಕೂಡ ಫೇಲ್ ಆಯಿತು. ಸಿನಿಮಾ ಸಂಪೂರ್ಣವಾಗಿ ಸೋತಿತ್ತು. ಆ ಬಳಿಕ ಅಭಿಷೇಕ್ ಅಂಬರೀಷ್ ಅವರು ‘ಕಾಳಿ’ ಚಿತ್ರ ಒಪ್ಪಿಕೊಂಡರು. ಈ ಸಿನಿಮಾದ ಲುಕ್ 2022ರಲ್ಲೇ ರಿಲೀಸ್ ಆಗಿದ್ದರೂ ಸಿನಿಮಾ ಸೆಟ್ಟೇರಿಲಿಲ್ಲ.

ಅಭಿಷೇಕ್ ವೃತ್ತಿ ಜೀವನದಲ್ಲಿ ಮಾಡಿದ್ದು ಕೇವಲ ಎರಡು ಸಿನಿಮಾ ಮಾತ್ರ. ಹೀಗಾಗಿ, ಅವರ ಮುಂದಿನ ಸಿನಿಮಾ ಯಾವಾಗ ಎಂಬ ಪ್ರಶ್ನೆ ಮುಡೋದು ಸಹಜ. ಇತ್ತೀಚೆಗೆ ನಡೆದ ‘ಅಯೋಗ್ಯ 2’ ಸಿನಿಮಾ ಈವೆಂಟ್​​ನಲ್ಲಿ ಅಭಿಷೇಕ್ ಅಂಬರೀಷ್​​ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಿಮ್ಮ ಮುಂದಿನ ಸಿನಿಮಾ ಯಾವಾಗ’ ಎಂದು ಆ್ಯಂಕರ್ ನಿರಂಜನ್ ದೇಶಪಾಂಡೆ ಕೇಳಿದರು. ಇದಕ್ಕೆ ಅಭಿಷೇಕ್ ಕೊಟ್ಟ ಉತ್ತರ ವಿಚಿತ್ರವಾಗಿತ್ತು.

ಇದನ್ನೂ ಓದಿ: ‘ಪ್ರೀತಿಯಿಂದ ಮನೆ ಹತ್ತಿರ ಬಂದರೆ ಬರಬೇಡಿ ಅನ್ನೋದು ನಮ್ಮ ಸಂಪ್ರದಾಯವಲ್ಲ’: ಅಭಿಷೇಕ್ ಅಂಬರೀಷ್ ಹೀಗೆ ಹೇಳಿದ್ದೇಕೆ?

‘ನಾವಿಲ್ಲಿ ಅಯೋಗ್ಯ 2 ಸಿನಿಮಾ ಬಗ್ಗೆ ಮಾತನಾಡೋಕೆ ಬಂದಿದ್ದೇವೆ. ಈ ಅಯೋಗ್ಯನ ಬಗ್ಗೆ ಬಿಟ್ಟುಬಿಡಿ’ ಎಂದು ನೇರವಾಗಿ ಹೇಳಿದರು. ಆಗ ಇದಕ್ಕೂ ಕೆಲವರು ಚಪ್ಪಾಳೆ ತಟ್ಟಿ,  ಶಿಳ್ಳೆ ಹೊಡೆದರು. ‘ಬಹುಶಃ ಹೆಚ್ಚಿನ ಹಣ ಕೊಟ್ಟಿದ್ದೇನೆ’ ಎಂದು ಅವರೇ ಒಪ್ಪಿಕೊಂಡರು. ಈ ವಿಡಿಯೋ ವೈರಲ್ ಆಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!