AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು, ನಟನ ವಿರುದ್ಧ ದೂರು ನೀಡಿದ ಪತ್ನಿ

Actor Ajay Rao: ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.

Breaking: ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು, ನಟನ ವಿರುದ್ಧ ದೂರು ನೀಡಿದ ಪತ್ನಿ
Ajay Rao
ಮಂಜುನಾಥ ಸಿ.
|

Updated on:Aug 16, 2025 | 3:07 PM

Share

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟು ಬಹಿರಂಗವಾಗಬೇಕಿದೆ.

ಅಜಯ್ ರಾವ್ ಹಾಗೂ ಸಪ್ನಾ ಅವರುಗಳು ಪ್ರೀತಿಸಿ ಮದುವೆ ಆಗಿದ್ದರು. 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು. ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. 2019 ರಲ್ಲಿ ಮಗಳ ಜನನ ಆಗಿತ್ತು.  ಇದೀಗ ಅಜಯ್ ರಾವ್ ಪತ್ನಿ ಸಪ್ನಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

2003 ರಲ್ಲಿ ಬಿಡುಗಡೆ ಆದ ‘ಎಕ್ಸ್​ಕ್ಯೂಸ್ ಮೀ’ ಸಿನಿಮಾ ಮೂಲಕ ಅಜಯ್ ರಾವ್ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅದಕ್ಕೆ ಮುನ್ನ ಸುದೀಪ್ ನಟನೆಯ ‘ಕಿಚ್ಚ’ ಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದರು. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇದೇ ವರ್ಷ ಬಿಡುಗಡೆ ಆದ ‘ಯುದ್ಧಕಾಂಡ 2 ಸಿನಿಮಾನಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಸಹ ಅಜಯ್ ರಾವ್ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sat, 16 August 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ