AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ನಿಖಿಲ್ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ.

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ
ನಿಖಿಲ್​ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 26, 2021 | 5:10 PM

Share

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಆದರೆ, ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ. ಹೀಗಾಗಿ, ಈ ಸುದ್ದಿ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಸ್ಪಷ್ಟತೆ ಇರಲಿಲ್ಲ. ಈಗ ನಿಖಿಲ್ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದು, ತಾವು ತಂದೆ ಆಗುತ್ತಿರುವುದು ಹೌದು ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯೊಂದರಲ್ಲಿ ಈ ಬಗ್ಗೆ ನಿಖಿಲ್​ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಇದು ವೈಯಕ್ತಿಕ ವಿಚಾರ. ಕೆಲವೊಂದು ವೈಯಕ್ತಿಕ ವಿಚಾರವನ್ನು ನಾನು ಹೊರಗೆ ಹೇಳೋಕೆ ಇಷ್ಟ ಪಡುವುದಿಲ್ಲ. ಆದರೆ, ನಾವು ಸಾರ್ವಜನಿಕ ಬದುಕಲ್ಲಿ ಇದ್ದಮೇಲೆ ಕೆಲವೊಂದಷ್ಟು ವಿಚಾರಗಳು ಹರಿದು ಬರುತ್ತವೆ. ನೀವು ಕೇಳಿರುವ ವಿಚಾರ ನಿಜ. ಅತಿ ಶೀಘ್ರದಲ್ಲಿ ನಾನು ತಂದೆ ಆಗುತ್ತಿದ್ದೇನೆ’ ಎಂದು ಸಂತಸ ಹೊರ ಹಾಕಿದರು.

ನಿಖಿಲ್ ಹಾಗೂ ರೇವತಿ ಕಳೆದ ವರ್ಷ ಅದ್ದೂರಿಯಾಗಿ ಮದುವೆ ಆಗಲು ನಿರ್ಧರಿಸಿದ್ದರು. ಮಂಡ್ಯದಲ್ಲಿ ಸಾವಿರಾರು ಜನರಿಗೆ ಊಟ ಹಾಕೋಕೆ ಸಿದ್ಧತೆ ನಡೆದಿತ್ತು. ಆದರೆ, ಆಗ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಹೀಗಾಗಿ, ಮದುವೆ ಸಮಾರಂಭ ಸಿಂಪಲ್ ಆಗಿ ನಡೆದಿತ್ತು. ಕುಟುಂಬದವರ ಸಮ್ಮುಖದಲ್ಲಿ ನಿಖಿಲ್ ಹಾಗೂ ರೇವತಿ ಮದುವೆ ಆದರು. ಈಗ ನಿಖಿಲ್ ತಂದೆ ಆಗುತ್ತಿರುವ ವಿಚಾರ ಅವರ ಅಭಿಮಾನಿ ಬಳಗಕ್ಕೆ ಖುಷಿ ನೀಡಿದೆ.

ನಿಖಿಲ್ ‘ರೈಡರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಸೀತಾರಾಮ ಕಲ್ಯಾಣ’ ಚಿತ್ರದ ನಂತರ ಅವರ ನಟನೆಯ ಬೇರೆ ಯಾವುದೇ ಸಿನಿಮಾಗಳು ತೆರೆಕಂಡಿಲ್ಲ. ರೈಡರ್ ಸಿನಿಮಾದ ಶೂಟಿಂಗ್​ಗಾಗಿ ಕೆಲ ತಿಂಗಳ ಹಿಂದೆ ಲೇಹ್-ಲಡಾಕ್​ಗೆ ತೆರಳಿದ್ದರು. ಆಗ ಅವರು ಕೊವಿಡ್​ ಪರೀಕ್ಷೆಗೆ ಒಳಗಾಗಿದ್ದು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅವರು ಚೇತರಿಕೆ ಕಂಡಿದ್ದರು.

ಇದನ್ನೂ ಓದಿ:

Nikhil Kumarswamy: ಕುಮಾರಸ್ವಾಮಿ ಕುಟುಂಬದಿಂದ ಸಿಹಿ ಸುದ್ದಿ; ಶೀಘ್ರವೇ ತಂದೆ ಆಗಲಿದ್ದಾರೆ ನಿಖಿಲ್​ ​

Follow Us
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ