ಅರ್ಜುನ್ ಸರ್ಜಾಗೆ ಕೊರೊನಾ ಪಾಸಿಟಿವ್; ಅಭಿಮಾನಿಗಳಿಗೆ ಜಾಗೃತಿ ಸಂದೇಶ ನೀಡಿದ ನಟ
Arjun Sarja | Coronavirus Positive: ‘ನನಗೆ ಕೊವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.
ಅನೇಕ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್ (Coronavirus Positive) ಆಗುತ್ತಿದೆ. ಇತ್ತೀಚೆಗಷ್ಟೇ ನಟಿ ಕರೀನಾ ಕಪೂರ್ ಅವರಿಗೆ ಕೊವಿಡ್ ಸೋಂಕು ತಗಲಿರುವ ವಿಷಯ ಬಹಿರಂಗ ಆಗಿತ್ತು. ಈಗ ನಟ ಅರ್ಜುನ್ ಸರ್ಜಾ (Arjun Sarja) ಅವರಿಗೂ ಕೊವಿಡ್ ಪಾಸಿಟಿವ್ ಆಗಿದೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ಸದ್ಯ ತಮ್ಮ ಆರೋಗ್ಯ ಸ್ಥಿತಿ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ಅಭಿಮಾನಿಗಳಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅರ್ಜುನ್ ಸರ್ಜಾ ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ರಿಯಾಲಿಟಿ ಶೋವೊಂದಕ್ಕೆ ಅರ್ಜುನ್ ಸರ್ಜಾ ನಿರೂಪಕನಾಗಿದ್ದರು. ಅದರ ಫಿನಾಲೆ ಕಾರ್ಯಕ್ರಮ ಇತ್ತೀಚೆಗಷ್ಟೇ ನಡೆದಿತ್ತು. ಅದರ ಚಿತ್ರೀಕರಣ ಮುಗಿದ ಬಳಿಕ ಅವರಿಗೆ ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಲಾಯಿತು. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮ್ಮ ಜತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅರ್ಜುನ್ ಸರ್ಜಾ ಮಾಹಿತಿ ರವಾನಿಸಿದ್ದಾರೆ.
‘ಎಲ್ಲರಿಗೂ ಹಾಯ್, ನನಗೆ ಕೊವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್ ಕಿ ಜೈ’ ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅರ್ಜುನ್ ಸರ್ಜಾ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:
ಪಾರ್ಟಿಗೆ ತೆರಳಿ ಮೋಜು ಮಸ್ತಿ ಮಾಡಿದ ಕರೀನಾ ಕಪೂರ್ಗೆ ಕೊರೊನಾ ಪಾಸಿಟಿವ್; ಹೆಚ್ಚಿತು ಆತಂಕ
ಶ್ರುತಿ ಹರಿಹರನ್ ಮೀಟೂ ಕಾನೂನು ಸಮರ: ಅರ್ಜುನ್ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್