AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Arrest: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್

Darshan Pavithra Gowda Case: ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು.

Darshan Arrest: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್
ಕಿರಣ ಹೆಚ್​. ವಿ.
| Edited By: |

Updated on:Jun 11, 2024 | 11:55 AM

Share

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಹೋಟೆಲ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಕರ್ಮದ ಬಗ್ಗೆ ಪೋಸ್ಟ್ ಮಾಡಿದ ಪವಿತ್ರಾ ಗೌಡ

ಪವಿತ್ರಾ ಗೌಡ ಹಾಗೂ ದರ್ಶನ್ ಮಧ್ಯೆ ಆಪ್ತತೆ ಇದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಡಿ ಬಂದಿದ್ದರು. ಇವರ ಸಂಬಂಧದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:20 am, Tue, 11 June 24

Follow Us
ಕಿರಣ ಹೆಚ್​. ವಿ.
ಕಿರಣ ಹೆಚ್​. ವಿ.
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್