Chetan Ahimsa: ಒಸಿಐ ಕಾರ್ಡ್ ರದ್ದು ವಿಚಾರದಲ್ಲಿ ನಟ ಚೇತನ್​ಗೆ ಷರತ್ತುಬದ್ಧ ರಿಲೀಫ್ ನೀಡಿದ ಹೈಕೋರ್ಟ್

Overseas Citizenship of India Card: ನ್ಯಾಯಾಂಗದ ಬಗ್ಗೆ ಮತ್ತು ವಿಚಾರಣೆಗೆ ಬಾಕಿಯಿರುವ ಕೇಸ್​​ಗಳ ಬಗ್ಗೆ ಚೇತನ್ ಅಹಿಂಸಾ ಅವರು ಟ್ವೀಟ್ ಮಾಡುವಂತಿಲ್ಲ ಎಂದು ಹೈಕೋರ್ಟ್​ ಆದೇಶ ನೀಡಿದೆ.

Chetan Ahimsa: ಒಸಿಐ ಕಾರ್ಡ್ ರದ್ದು ವಿಚಾರದಲ್ಲಿ ನಟ ಚೇತನ್​ಗೆ ಷರತ್ತುಬದ್ಧ ರಿಲೀಫ್ ನೀಡಿದ ಹೈಕೋರ್ಟ್
ಚೇತನ್ ಅಹಿಂಸಾ
Follow us
ಮದನ್​ ಕುಮಾರ್​
|

Updated on:Apr 23, 2023 | 11:06 AM

ಅನೇಕ ಆರೋಪಗಳನ್ನು ಹೊತ್ತಿರುವ ನಟ ಚೇತನ್​ ಅಹಿಂಸಾ (Chetan Ahimsa) ಅವರು ಈಗ ನಿಟ್ಟುಸಿರು ಬಿಡುವಂತಾಗಿದೆ. ಚೇತನ್​ ಅವರ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ಅನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ನೋಟಿಸ್​ ನೀಡಿತ್ತು. ಆದರೆ ಈಗ ಈ ವಿಚಾರದಲ್ಲಿ ಚೇತನ್​ ಅವರಿಗೆ ರಿಲೀಫ್​ ಸಿಕ್ಕಿದೆ. ಜೂನ್​ 2ರವರೆಗೆ ನಟನ ವಿರುದ್ಧ ಕ್ರಮ ಬೇಡ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅವರು ಇದರಿಂದ ನಿಟ್ಟುಸಿರು ಬಿಟ್ಟಿದ್ದಾರೆ. 2018ರಲ್ಲಿ ಅವರಿಗೆ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (Overseas Citizenship of India) ಕಾರ್ಡ್ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಮತ್ತು ಸಾರ್ವಜನಿಕ ಹೇಳಿಕೆಗಳು ವಿವಾದ ಹುಟ್ಟುಹಾಕಿದ್ದರಿಂದ ಕೇಂದ್ರ ಸರ್ಕಾರವು ಒಸಿಐ ಮಾನ್ಯತೆ ರದ್ದು ಮಾಡಿತ್ತು. ಆದರೆ ಕೇಂದ್ರದ ಕ್ರಮಕ್ಕೆ ಹೈಕೋರ್ಟ್​ ತಡೆ ನೀಡಿದೆ.

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ, ಭಾರತ ವಿರೋಧಿ ಚಟುವಟಿಕೆ ಮುಂತಾದ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿ ಚೇತನ್​ ಅವರಿಂದ ಉತ್ತರ ಪಡೆದಿತ್ತು. ಆದರೆ ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲ ಎಂಬ ಕಾರಣವನ್ನು ನೀಡಿ ಕೇಂದ್ರ ಸರ್ಕಾರವು ಒಸಿಐ ಕಾರ್ಡ್ ರದ್ದುಪಡಿಸಿತ್ತು. ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿದ್ದು ಸರಿಯಲ್ಲವೆಂದು ಅವರ ಪರ ವಕೀಲರು ವಾದಿಸಿದ್ದಾರೆ.

ಚೇತನ್​ ಅವರು ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರಿಂದ ಕೇಂದ್ರದ ಕ್ರಮಕ್ಕೆ ತಡೆ ನೀಡಬಾರದು ಎಂದು ಎಎಜಿ ಅರುಣ್ ಶ್ಯಾಮ್, ಎಎಸ್​​ಜಿ ಶಾಂತಿಭೂಷಣ್ ವಾದ ಮಾಡಿದರು. ಆದರೆ ಅಂತಿಮವಾಗಿ ಚೇತನ್​ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ರಿಲೀಫ್​ ನೀಡಿದೆ. ನ್ಯಾಯಾಂಗದ ಬಗ್ಗೆ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್​​ಗಳ ಬಗ್ಗೆ ಕೂಡ ಅವರು ಪೋಸ್ಟ್ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿ ಹೈಕೋರ್ಟ್​ ಆದೇಶ ನೀಡಿದೆ.

ಇದನ್ನೂ ಓದಿ
Image
‘ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು..’; ಚೇತನ್ ಅಹಿಂಸಾ ಪರ ನಿಂತ ನಟ ಕಿಶೋರ್
Image
ಚೇತನ್ ಅಹಿಂಸಾ ವೀಸಾ ರದ್ದು, ಕೇಂದ್ರದ ವಿರುದ್ಧ ನಟ ಆಕ್ರೋಶ
Image
ನಟ ಚೇತನ್ ಅಹಿಂಸ ವಿರುದ್ಧ ಕ್ರಮಕ್ಕೆ ಮುಂದಾದ ಚಲನಚಿತ್ರ ವಾಣಿಜ್ಯ ಮಂಡಳಿ
Image
ಅಂಬರೀಶ್ ಯಾರ ಬಳಿಯೂ ಕೈಚಾಚಿಲ್ಲ, ಆದರೆ ಸ್ಮಾರಕ್ಕಾಗಿ ಸುಮಲತಾ ಕೈಚಾಚಿದರು: ಚೇತನ್ ಅಹಿಂಸಾ

ಚೇತನ್​ ಅಹಿಂಸಾ ಪರವಾಗಿ ಪೋಸ್ಟ್​ ಮಾಡಿದ್ದ ಕಿಶೋರ್​:

ಖ್ಯಾತ ನಟ ಕಿಶೋರ್​ ಅವರು ಇತ್ತೀಚೆಗೆ ನಟ ಚೇತನ್​ ಅಹಿಂಸಾ ಅವರ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು. ‘ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು, ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?’ ಎಂದು ಅವರು ಪ್ರಶ್ನೆ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:06 am, Sun, 23 April 23

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!