Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು

|

Updated on: Mar 21, 2023 | 8:39 PM

Aa Dinagalu Chetan | Judicial Custody: ನಟ ಚೇತನ್​ ಅಹಿಂಸಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ಅವರು ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಬೇಕಿದೆ.

Chetan Ahimsa: 14 ದಿನ ನ್ಯಾಯಾಂಗ ಬಂಧನಕ್ಕೆ ನಟ ಚೇತನ್​ ಅಹಿಂಸಾ; ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದ ಪೊಲೀಸರು
ಚೇತನ್ ಅಹಿಂಸಾ
Follow us on

ಸೋಶಿಯಲ್​ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ್ದ ನಟ ‘ಆ ದಿನಗಳು’ ಚೇತನ್​ (Aa Dinagalu Chetan) ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ. ಅದರ ಅನ್ವಯ ಪರಪ್ಪನ ಅಗ್ರಹಾರ ಜೈಲಿಗೆ ಚೇತನ್​ ಅವರನ್ನು ಶಿಫ್ಟ್​ ಮಾಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿ ಚೇತನ್​ ಅಹಿಂಸಾ (Chetan Ahimsa) ವಿರುದ್ಧ ಐಪಿಸಿ ಸೆಕ್ಷನ್​ 295 ಎ ಹಾಗೂ 505 ಬಿ ಅಡಿಯಲ್ಲಿ ಪ್ರಕರಣ​ ದಾಖಲಾಗಿದೆ. ಆ ಸಂಬಂಧ ಇಂದು (ಮಾರ್ಚ್​ 21) ಬೆಳಗ್ಗೆ ಚೇತನ್​ ಅವರನ್ನು ಬಂಧಿಸಲಾಗಿತ್ತು. ಈಗ ನ್ಯಾಯಾಂಗ ಬಂಧನಕ್ಕೆ (Judicial Custody) ಕೋರ್ಟ್​ ಆದೇಶಿಸಿರುವುದರಿಂದ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.

ಚೇತನ್​ ಬಂಧನಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ:

ನಟ ಚೇತನ್​ ಅವರನ್ನು ಬಂಧಿಸಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್​ ಅವರನ್ನು ಅರೆಸ್ಟ್​ ಮಾಡಿರುವುದನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ‘ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ನೀಡಲಾಗಿದೆ. ಹೇಳಿಕೆ ನೀಡಿದ ಮಾತ್ರಕ್ಕೆ ಬಂಧಿಸುವುದು ಸರಿಯಲ್ಲ. ಕೋರ್ಟ್​ನಲ್ಲಿ ಇಂತಹ ಕೇಸ್​ ನಿಲ್ಲುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ
ಹಿಂದಿ ಹೇರಿಕೆಯಂತೆ, ಹಿಂದುತ್ವ ಹೇರಿಕೆಯನ್ನು ನಾವು ಒಪ್ಪಲ್ಲ ಎಂದ ಚೇತನ್ ಅಹಿಂಸಾ
Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್​ ಸ್ಪಷ್ಟನೆ; ಇಲ್ಲಿದೆ ಲೈವ್​ ವಿಡಿಯೋ
‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ: Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ

ಚೇತನ್​ ಮಾಡಿದ ಟ್ವೀಟ್​ನಲ್ಲಿ ಏನಿದೆ?

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು. ಇದು ಒಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’. ಇದು ಒಂದು ಸುಳ್ಳು.

ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಸತ್ಯವೇ ಸಮಾನತೆ’ ಎಂದು ಚೇತನ್​ ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಇದನ್ನೂ ಓದಿ: ನಟ ಚೇತನ್​ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚೇತನ್​ ಮಾಡಿರುವ ಈ ಪೋಸ್ಟ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕೆಲವರು ಚೇತನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ದೂರು ನೀಡಿವೆ. ಸಿನಿಮಾ ಹೊರತಾಗಿಯೂ ಚೇತನ್​ ಅವರು ಸುದ್ದಿ ಆಗುತ್ತಾರೆ. ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಅವರು ಆಗಾಗ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.