‘ಚೇತನ್​ ಅಪಹರಣವಾಗಿದೆ’ ಎಂದ ಪತ್ನಿ ಮೇಘಾ; ಅವರನ್ನು ಬಂಧಿಸಿದ್ದೇವೆ ಎಂದ ಪೊಲೀಸರು

ಅವರ ಪತ್ನಿ ಮೇಘಾ ಅವರು ಫೇಸ್​ಬುಕ್​ ಲೈವ್​ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ‘ನನ್ನ ಪತಿಯ ಅಪಹರಣವಾಗಿದೆ’ ಎಂದು ಹೇಳಿಕೊಂಡಿದ್ದಾರೆ ಮೇಘಾ.

‘ಚೇತನ್​ ಅಪಹರಣವಾಗಿದೆ’ ಎಂದ ಪತ್ನಿ ಮೇಘಾ; ಅವರನ್ನು ಬಂಧಿಸಿದ್ದೇವೆ ಎಂದ ಪೊಲೀಸರು
ಮೇಘಾ-ಚೇತನ್​ ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 22, 2022 | 9:27 PM

ನಟ ‘ಆ ದಿನಗಳು’ ಚೇತನ್ (Chetan) ಸದಾ ವಿವಾದದ ಮೂಲಕವೇ ಸುದ್ದಿ ಆಗುತ್ತಿರುತ್ತಾರೆ. ಈ ಮೊದಲು ಅವರು ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಇಂದು (ಫೆಬ್ರವರಿ 22) ನಟ ಚೇತನ್‌ ಅವರನ್ನು ಶೇಷಾದ್ರಿಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಅವರ ಪತ್ನಿ ಮೇಘಾ ಅವರು ಫೇಸ್​ಬುಕ್​ ಲೈವ್​ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ‘ನನ್ನ ಪತಿಯ ಅಪಹರಣವಾಗಿದೆ’ ಎಂದು ಹೇಳಿಕೊಂಡಿದ್ದಾರೆ ಮೇಘಾ (Megha S). ಇದಕ್ಕೆ ಪೊಲೀಸರಿಂದ ಸ್ಪಷ್ಟನೆ ಸಿಕ್ಕಿದ್ದು, ಅವರನ್ನು ಬಂಧಿಸಿದ್ದೇವೆ ಎಂದಿದ್ದಾರೆ.

ಚೇತನ್​ ಕುಮಾರ್​ ಅವರ ಫೇಸ್​ಬುಕ್​ ಪೇಜ್​ನಿಂದ ಲೈವ್​ ಬಂದಿರುವ ಮೇಘಾ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಚೇತನ್​ ಅವರು ಮನೆಯಲ್ಲೇ ಇದ್ದರು.  ನಂತರ ಅವರು ಕಾಣಿಸಲಿಲ್ಲ. ಪೊಲೀಸರು ಬಂದು ಅವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಕೆಲವರು ಹೇಳಿದರು. ಫೋನ್​ ಆಫ್​ ಆಗಿದೆ. ಈಗ ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿದ್ದೇನೆ.  ಚೇತನ್​ ನಮ್ಮ ಬಳಿ ಇಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ’ ಎಂದಿದ್ದಾರೆ ಮೇಘಾ.

‘ಚೇತನ್​ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ನೇರವಾಗಿ ಬಂದು ಚೇತನ್​ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಚೇತನ್​ ಎಲ್ಲಿದ್ದಾರೆ ಎಂದೂ ಹೇಳುತ್ತಿಲ್ಲ. ಇದೊಂದು ರೀತಿ ಕಿಡ್ನ್ಯಾಪ್​ ಮಾಡಿದಂತೆ. ನಮಗೆ ಅನ್ಯಾಯ ಆಗಿದೆ. ಪೊಲೀಸ್​ ಆದರೂ ನಮಗೆ ಮಾಹಿತಿ ನೀಡಬಹುದಿತ್ತು. ಅದನ್ನೂ ಮಾಡುತ್ತಿಲ್ಲ’ ಎಂದು ಮೇಘಾ ಆರೋಪಿಸಿದ್ದಾರೆ.

‘ಶೇಷಾದ್ರಿಪುರಂ ಠಾಣೆಯ ಪೊಲೀಸರು ಚೇತನ್​ರನ್ನು ಬಂಧಿಸಿದ್ದಾರೆ. ನ್ಯಾಯಾಧೀಶರಿಗೆ ನಿಂದಿಸಿದ ಆರೋಪ ಪ್ರಕರಣದಡಿ ಬಂಧನ ನಡೆದಿದೆ. ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ನಟ ಚೇತನ್‌ನನ್ನ ಬಂಧಿಸಿದ್ದೇವೆ’ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್​.ಅನುಚೇತ್ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಮೇಕಾದಾಟು ಯೋಜನೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್​ ಪಾದಯಾತ್ರೆ ನಡೆಸಿತ್ತು. ಇದನ್ನು ಚೇತನ್​ ವಿರೋಧಿಸಿದ್ದರು. ‘ಮೂರು ರಾಜಕೀಯ ಪಕ್ಷಗಳು ಈ ಯೋಜನೆಯಲ್ಲಿ ಅವಕಾಶವಾದ ರಾಜಕಾರಣ ಮಾಡುತ್ತಿವೆ. ಅದು ಬೆಳಕಿಗೆ ಬಂದಿದೆ. ಇಡೀ ಕರ್ನಾಟಕವೇ ಮೇಕೆದಾಟು ಅಣೆಕಟ್ಟು ಪರವಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದನ್ನು ನಾವು ಒಪ್ಪಲ್ಲ. ನಾಳೆ ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತೇವೆ. ಕರ್ನಾಟಕದ ನೆಲ, ಜಲದ ಪರವಾಗಿ ನಾವೂ ಇದ್ದೇವೆ. ಆದರೆ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ವಿರೋಧ ಇದೆ. ಜನಪರ, ಪರಸರ ಸ್ನೇಹಿ ವಿಚಾರಗಳನ್ನು ತರಬೇಕು’ ಎಂದು ಚೇತನ್ ಕುಮಾರ್​​ ಹೇಳಿದ್ದರು.

ಇದನ್ನೂ ಓದಿ: ‘ರಜನಿಕಾಂತ್ ಅವರಿಗೆ ಕಂಡಕ್ಟರ್ ಕೆಲಸ ಕೊಡಿಸಿದ್ದು ನಮ್ಮ ತಾತ’; ರಜನಿಕಾಂತ್ ಸಂಬಂಧಿ ಎಂದಿರುವ ಚೇತನ್ ಹೇಳಿಕೆ

‘ಅಧಿಕಾರ ದಾಹಕ್ಕಾಗಿ ಮತಾಂತರ ನಿಷೇಧ ಕಾಯ್ದೆ’: ಬೊಮ್ಮಾಯಿ ವಿರುದ್ಧ ಚೇತನ್​ ಗರಂ

Published On - 5:48 pm, Tue, 22 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್