ಚೇತನ್ Vs ಶಿವರಾಮ್ ಹೆಬ್ಬಾರ್ ಜಟಾಪಟಿ; ಸಚಿವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವರ್ಸಸ್ ನಟ ಚೇತನ್ ಜಟಾಪಟಿ ಈಗ ಕೋರ್ಟ್ ಮೆಟ್ಟಿಲೇರಿದೆ. ಸಚಿವರು 1 ರೂ. ಮಾನನಷ್ಟ ಪರಿಹಾರ ನೀಡಬೇಕು ಮತ್ತು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಚೇತನ್ ಅವರು ಮೊಕದ್ದಮೆ ಹೂಡಿದ್ದಾರೆ.
ಬ್ರಾಹ್ಮಣ್ಯದ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಬಳಿಕ ನಟ ಚೇತನ್ ಅವರು ಅನೇಕ ವಿವಾದಗಳನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದ್ದು, ಆ ಸಂಬಂಧ ಎರಡು ಬಾರಿ ವಿಚಾರಣೆಗೆ ಒಳಗಾಗಿದ್ದಾರೆ. ಚೇತನ್ ಅವರ ಪೋಸ್ಟ್ ಖಂಡಿಸಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಟ್ವೀಟ್ ಮಾಡಿದ್ದರು. ಇದರಿಂದ ತಮ್ಮ ತೇಜೋವಧೆ ಆಗಿದೆ ಎಂದು ಚೇತನ್ ಅವರು ಸಚಿವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ!
ಶಿವರಾಮ್ ಹೆಬ್ಬಾರ್ ವರ್ಸಸ್ ಚೇತನ್ ಜಟಾಪಟಿ ಈಗ ಕೋರ್ಟ್ ಮೆಟ್ಟಿಲೇರಿದೆ. 1 ರೂ. ಮಾನನಷ್ಟ ಪರಿಹಾರ ನೀಡಬೇಕು ಮತ್ತು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಚೇತನ್ ಅವರು ಮೊಕದ್ದಮೆ ಹೂಡಿದ್ದಾರೆ. ಈ ಸಂಬಂಧ ಸಿಟಿ ಸಿವಿಲ್ ಸೆಷನ್ಸ್ ಕೋರ್ಟ್ನಿಂದ ಸಚಿವ ಶಿವರಾಮ್ ಹೆಬ್ಬಾರ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಜು.14ಕ್ಕೆ ವಿಚಾರಣೆ ನಡೆಯಲಿದೆ.
‘ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಶಿವರಾಮ್ ಹೆಬ್ಬಾರ್ ಟ್ವೀಟ್ ಮಾಡಿದ್ದರು.
ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ.
— Shivaram Hebbar (@ShivaramHebbar) June 11, 2021
ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.@BSYBJP | @CMofKarnataka | @KarnatakaVarthe | @tv9kannada | @AsianetNewsSN | @publictvnews
— Shivaram Hebbar (@ShivaramHebbar) June 11, 2021
ಇದನ್ನೂ ಓದಿ:
ನಟ ಚೇತನ್ ಈವರೆಗೆ ಒಮ್ಮೆಯೂ ವೋಟ್ ಹಾಕಿಲ್ಲ; ಅದಕ್ಕೆ ಇದೆ ಒಂದು ವಿಶೇಷ ಕಾರಣ
ಚೇತನ್ ಗಡಿಪಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ; ನಟನ ಪ್ರತಿಕ್ರಿಯೆ ಏನು?