ಡಬ್ಬಿಂಗ್ ಶುರು ಮಾಡಿದ ಬಡವ ರಾಸ್ಕಲ್
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕಲ್ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೇ ಈ ಚಿತ್ರದ ಕಥಾಹಂದರ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ […]
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕಲ್ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ.
ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೇ ಈ ಚಿತ್ರದ ಕಥಾಹಂದರ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ ಗುರು ಅವರೆ ಬರೆದಿದ್ದಾರೆ. ಬಡವ ರಾಸ್ಕಲ್ ಇವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಡಾಲಿ ಧನಂಜಯ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.
ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.