AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಪರಪ್ಪನ ಅಗ್ರಹಾರಕ್ಕೆ ದರ್ಶನ್ ಆ್ಯಂಡ್ ಗ್ಯಾಂಗ್ ಶಿಫ್ಟ್?  

ದರ್ಶನ್ ಪ್ರಭಾವಿ ವ್ಯಕ್ತಿ. ಒಂದೊಮ್ಮೆ ಇವರನ್ನು ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆಗ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು. ಕೋರಮಂಗಲದ ಜಡ್ಜ್​​​​ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ.

ಇಂದೇ ಪರಪ್ಪನ ಅಗ್ರಹಾರಕ್ಕೆ ದರ್ಶನ್ ಆ್ಯಂಡ್ ಗ್ಯಾಂಗ್ ಶಿಫ್ಟ್?  
ದರ್ಶನ್-ಪವಿತ್ರಾ
ರಾಚಪ್ಪಾಜಿ ನಾಯ್ಕ್
| Edited By: |

Updated on:Jun 15, 2024 | 7:03 AM

Share

ನಟ ದರ್ಶನ್ (Darshan) ಹಾಗೂ ಗ್ಯಾಂಗ್​ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಪೊಲೀಸರು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಇದರಿಂದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳನ್ನು ಇಂದು (ಜೂನ್ 15) ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ. ಆಗ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ.

ದರ್ಶನ್ ಪ್ರಭಾವಿ ವ್ಯಕ್ತಿ. ಒಂದೊಮ್ಮೆ ಇವರನ್ನು ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆಗ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು. ಕೋರಮಂಗಲದ ಜಡ್ಜ್​​​​ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ಸದ್ಯಕ್ಕಂತೂ ಬಿಡುಗಡೆ ಅನುಮಾನ ಎನ್ನಲಾಗುತ್ತಿದೆ.

ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಸ್ವಇಚ್ಛಾ ಹೇಳಿಕೆ ದಾಖಲು ಮಾಡಲಾಗಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಕಿಡ್ನ್ಯಾಪ್ ಆದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮುಗಿದಿದೆ. ಸಾಂಧರ್ಬಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ, ಭಾನುವಾರ ಆರೋಪಿಗಳನ್ನ ಜಡ್ಜ್​​​ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ

ರೇಣುಕಾಸ್ವಾಮಿ ಅವರು ಚಿತ್ರದುರ್ಗದವರು ಫಾರ್ಮಸಿ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಪವಿತ್ರಾ ಗೌಡಗೆ ಅವರು ಅಶ್ಲೀಲ ಸಂದೇಶ ಕಳುಹಿಸಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕರೆತರುವಂತೆ ಆಪ್ತರಿಗೆ ಹೇಳಿದ್ದರು. ದರ್ಶನ್ ಸೂಚನೆಯಂತೆ ಅವರನ್ನು ಕರೆತರಲಾಗಿದೆ. ಆ ಬಳಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಹಲವು ಮಂದಿ ಅರೆಸ್ಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Sat, 15 June 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು