ನಟ ದರ್ಶನ್ (Darshan) ಹಾಗೂ ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಪೊಲೀಸರು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಇದರಿಂದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನ ಆರೋಪಿಗಳನ್ನು ಇಂದು (ಜೂನ್ 15) ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ. ಆಗ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ.
ದರ್ಶನ್ ಪ್ರಭಾವಿ ವ್ಯಕ್ತಿ. ಒಂದೊಮ್ಮೆ ಇವರನ್ನು ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆಗ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು. ಕೋರಮಂಗಲದ ಜಡ್ಜ್ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ಸದ್ಯಕ್ಕಂತೂ ಬಿಡುಗಡೆ ಅನುಮಾನ ಎನ್ನಲಾಗುತ್ತಿದೆ.
ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಸ್ವಇಚ್ಛಾ ಹೇಳಿಕೆ ದಾಖಲು ಮಾಡಲಾಗಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಕಿಡ್ನ್ಯಾಪ್ ಆದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮುಗಿದಿದೆ. ಸಾಂಧರ್ಬಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ, ಭಾನುವಾರ ಆರೋಪಿಗಳನ್ನ ಜಡ್ಜ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ‘ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ
ರೇಣುಕಾಸ್ವಾಮಿ ಅವರು ಚಿತ್ರದುರ್ಗದವರು ಫಾರ್ಮಸಿ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಪವಿತ್ರಾ ಗೌಡಗೆ ಅವರು ಅಶ್ಲೀಲ ಸಂದೇಶ ಕಳುಹಿಸಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕರೆತರುವಂತೆ ಆಪ್ತರಿಗೆ ಹೇಳಿದ್ದರು. ದರ್ಶನ್ ಸೂಚನೆಯಂತೆ ಅವರನ್ನು ಕರೆತರಲಾಗಿದೆ. ಆ ಬಳಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಹಲವು ಮಂದಿ ಅರೆಸ್ಟ್ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:57 am, Sat, 15 June 24