ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ.

ಚೇರ್​ ಬೇಕು ಎಂದು ಆವಾಜ್ ಹಾಕಿದ ದರ್ಶನ್; ಜೈಲಾಧಿಕಾರಿಗಳ ಉತ್ತರಕ್ಕೆ ಮಂಕಾದ ದಾಸ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 21, 2024 | 9:45 AM

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಅಲ್ಲಿ ಅವರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈಗ ಅವರಿಗೆ ನಿರಂತರವಾಗಿ ಬೆನ್ನನೋವು ಬರುತ್ತಿದೆ. ಹೀಗಾಗಿ ಅವರು ಕುಳಿತುಕೊಳ್ಳಲು ಚೇರ್‌ಗೆ ಮನವಿ ಮಾಡಿದ್ದರು. ಈ ಮನವಿ ಮಾಡಿ ವಾರಗಳೇ ಕಳೆದಿವೆ. ಆದಾಗ್ಯೂ ಜೈಲಾಧಿಕಾರಿಗಳು ಕುರ್ಚಿಯನ್ನು ನೀಡಿಲ್ಲ. ಇದರಿಂದ ದರ್ಶನ್ ಗರಂ ಆಗಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹಾಯಾಗಿ ಇದ್ದರು. ವಿಲ್ಸನ್​ ಗಾರ್ಡನ್ ನಾಗ ಅವರಿಗೆ ಸಾಕಷ್ಟು ವ್ಯವಸ್ಥೆ ಮಾಡಿಕೊಟ್ಟಿದ್ದರು. ಈ ವ್ಯವಸ್ಥೆಯಿಂದ ಅವರಿಗೆ ಯಾವುದೇ ತೊಂದರೆ ಆಗಿರಲಿಲ್ಲ. ಈ ವಿಚಾರ ಹೊರ ಬಂದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ದರ್ಶನ್ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರಂತೆ.

ದರ್ಶನ್ ಚೇರ್​ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಅವರು ಕೋರ್ಟ್​ ಎದುರು ಪ್ರಸ್ತಾಪ ಮಾಡಿದ್ದರು. ಈ ವೇಳೆ ಜಡ್ಜ್​ ಅವರು ಕುರ್ಚಿ ನೀಡಲು ಸೂಚನೆ ಕೊಟ್ಟಿದ್ದರು. ಆದಾಗ್ಯೂ ಚೇರ್ ಏಕೆ ಕೊಟ್ಟಿಲ್ಲ ಎಂದು ಜೈಲಧಿಕಾರಿಗಳ ವಿರುದ್ಧ ದರ್ಶನ್ ಗರಂ ಆಗಿದ್ದಾರೆ. ದರ್ಶನ್ ಮಾತಿಗೆ ಖಡಕ್ಕಾಗಿ ಜೈಲಾಧಿಕಾರಿಗಳು ತೀರುಗೇಟು ನೀಡಿದ್ದಾರೆ.

‘ಕೋರ್ಟ್​ನ ಅಧಿಕೃತ ಆದೇಶ ಬಂದ ಬಳಿಕವೇ ಚೇರ್ ಕೊಡಲಾಗುತ್ತದೆ’ ಎಂದು ಜೈಲಧಿಕಾರಿಗಳು ನೇರ ಮಾತಲ್ಲಿ ಹೇಳಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್​ ಸಪ್ಪೆ ಮುಖ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಸದ್ಯ ದರ್ಶನ್​ಗೆ ಬೆಂಗಳೂರಿನ ಜೈಲಿನಲ್ಲಿ ಕಷ್ಟಗಳು ಬಿಟ್ಟು ಬಿಡದೆ ಕಾಡುತ್ತಿವೆ.

ಇದನ್ನೂ ಓದಿ: ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್

ವಿಚಾರಣಾದೀನ ಕೈದಿಗಳಿಗೆ ಕೆಲ ಅವಶ್ಯಕ ವಸ್ತುಗಳನ್ನ ಕೊಡಬುದಾದ ನಿಯಮಗಳಿವೆ. ಆದರೆ ಎಲ್ಲದಕ್ಕೂ ಕೋರ್ಟ್​ ಆದೇಶ ಬೇಕು ಎಂದು ಬಳ್ಳಾರಿ ಸೆಂಟ್ರಲ್ ಜೈಲಾಧಿಕಾರಿಗಳು ಹೇಳುತ್ತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನ ಕಠಿಣತೆಗೆ ಆರೋಪಿ ದರ್ಶನ್ ಹೈರಾಣಾವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು