ಅಗತ್ಯಬಿದ್ದರೆ ಮಾತ್ರ ದರ್ಶನ್ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್, ಸದ್ಯ ಜೈಲಿನಲ್ಲೇ ಚಿಕಿತ್ಸೆ

ನಟ ದರ್ಶನ್ ಬೆನ್ನುನೋವಿನ ಫಿಸಿಯೋಥೆರಪಿ ಚಿಕಿತ್ಸೆಯನ್ನು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲೇ ನೀಡಲು ನಿರ್ಧರಿಸಲಾಗಿದೆ. ಅಗತ್ಯಬಿದ್ದರೆ ಮಾತ್ರ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ. ಇತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದ ಐವರು ಆರೋಪಿಗಳ ಜಾಮೀನು ರದ್ದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ದೊಡ್ಡ ರಿಲೀಫ್ ನೀಡಿದೆ.

ಅಗತ್ಯಬಿದ್ದರೆ ಮಾತ್ರ ದರ್ಶನ್ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್, ಸದ್ಯ ಜೈಲಿನಲ್ಲೇ ಚಿಕಿತ್ಸೆ
ದರ್ಶನ್
Edited By:

Updated on: Nov 27, 2026 | 12:13 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಬೆನ್ನುನೋವಿನ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಜೈಲಿನಲ್ಲಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ವೈದ್ಯಾಧಿಕಾರಿಗಳು ತೀರ್ಮಾನಿಸಿದರೆ ಮಾತ್ರ ದರ್ಶನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲು ಯೋಚಿಸಲಾಗಿದೆ. ಸದ್ಯಕ್ಕೆ ಜೈಲಿನಲ್ಲಿಯೇ ಇರುವ ನುರಿತ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ.

ನಿನ್ನೆಯಷ್ಟೇ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಮಹತ್ವದ ಆದೇಶ ನೀಡಿದ್ದರು. ಅಧಿಕಾರಿಗಳು ಸಲ್ಲಿಸಿದ ವರದಿ ಮತ್ತು ದರ್ಶನ್ ಆರೋಗ್ಯ ಸ್ಥಿತಿ ಪರಿಶೀಲಿಸಿದ್ದ ಅವರು, ನೋವು ಉಪಶಮನಕ್ಕೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ಅಗತ್ಯಬಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಬಹುದು ಎಂದು ನಿರ್ದೇಶಿಸಿದ್ದರು.

Loading...

ನ್ಯಾಯಾಲಯದ ಈ ಆದೇಶದಿಂದಾಗಿ ದರ್ಶನ್ ಅವರು ತಾವು ಇಚ್ಛಿಸಿದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶ ಕೈತಪ್ಪಿದೆ. ಬದಲಾಗಿ ಕೋರ್ಟ್ ಸೂಚಿಸಿರುವಂತೆ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನ ವೈದ್ಯಾಧಿಕಾರಿಗಳು ಅಲ್ಲಿಯೇ ಚಿಕಿತ್ಸೆ ನೀಡುವ ಬಗ್ಗೆ ಗಮನಹರಿಸಿದ್ದಾರೆ. ಇನ್ನು ದರ್ಶನ್ ಅವರಿಗೆ ಇಂಜೆಕ್ಷನ್ ನೀಡುವ ವಿಚಾರವಾಗಿ ವೈದ್ಯರು ಇನ್ನೂ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ದರ್ಶನ್​​ಗೆ ಬೆನ್ನುನೋವು: ಜೈಲಿನ ಹೊರಗೆ ಚಿಕಿತ್ಸೆ ಬಗ್ಗೆ ಮಹತ್ವದ ಆದೇಶ

ಐವರು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್

ಇದೇ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ ಐವರು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣದ ಆರೋಪಿಗಳಾದ ಪವನ್, ಧನರಾಜು, ರಾಘವೇಂದ್ರ, ವಿನಯ್ ಹಾಗೂ ನಂದೀಶ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾಮೀನು ರದ್ದತಿ ಕೋರಿ ತೀರಾ ವಿಳಂಬವಾಗಿ ಅರ್ಜಿ ಸಲ್ಲಿಸಲಾಗಿದೆ ಎಂಬ ಕಾರಣ ನೀಡಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಈ ಐವರು ಆರೋಪಿಗಳು ಸದ್ಯಕ್ಕೆ ನಿರಾಳರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Published On - 12:12 pm, Fri, 27 November 26

ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
Loading...
Unable to load recommendations.
Follow Us