‘ಇದರಲ್ಲಿ ಯಾರೇ ಇದ್ರೂ ಬಿಡಲ್ಲ‘; ವಂಚನೆ ಪ್ರಯತ್ನದ ಬಗ್ಗೆ ದರ್ಶನ್​ ಎಚ್ಚರಿಕೆ

ನಿಮ್ಮ ಗೆಳೆಯರು ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು.

‘ಇದರಲ್ಲಿ ಯಾರೇ ಇದ್ರೂ ಬಿಡಲ್ಲ‘; ವಂಚನೆ ಪ್ರಯತ್ನದ ಬಗ್ಗೆ ದರ್ಶನ್​ ಎಚ್ಚರಿಕೆ
ದರ್ಶನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 11, 2021 | 5:25 PM

ನಟ ದರ್ಶನ್​ ಹೆಸರಲ್ಲಿ ವಂಚನೆ ಪ್ರಯತ್ನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ನಿಮ್ಮ ಗೆಳೆಯರು ದೊಡ್ಡ ಮೊತ್ತ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು. ಈಗ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್​ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್​ ಎಚ್ಚರಿಕೆ:

‘ಸಣ್ಣ ಘಟನೆ ನಡೆದಿತ್ತು ಹೀಗಾಗಿ ಎಸಿಪಿ ಕಚೇರಿಗೆ ಬಂದಿದ್ದೆ. ನನಗೆ ಯಾರೂ ಬ್ಲ್ಯಾಕ್​ಮೇಲ್ ಮಾಡಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಿದ್ದಾರೆ, ಮಾಡಲಿ. ಘಟನೆ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಒಂದು ತಿಂಗಳ ಹಿಂದೆ ಘಟನೆ ನಡೆದಿತ್ತು. ಒಂದು ದಾಖಲೆ ಸಿಕ್ಕಿದೆ ಬನ್ನಿ ಎಂದು ಪೊಲೀಸರು ಹೇಳಿದ್ದರು. ತನಿಖೆ ಬಳಿಕ ಎಲ್ಲಾ ಮಾಹಿತಿಯನ್ನು ನೀಡುತ್ತೇನೆ. ತನಿಖೆ ನಡೆಯುತ್ತಿದೆ, ಪ್ರಕರಣದಲ್ಲಿ ಯಾರೇ ಇದ್ರೂ ಬಿಡಲ್ಲ’ ಎಂದು ದರ್ಶನ್​ ಹೇಳಿದ್ದಾರೆ.

ತನಿಖೆಯಿಂದ ಎಲ್ಲವೂ ಗೊತ್ತಾಗಲಿದೆ:

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ನಾನೇ ಖುದ್ದಾಗಿ ಬೆಂಗಳೂರಿನ ಜಯನಗರದಲ್ಲಿ ದೂರು ನೀಡಿದ್ದೇನೆ. ಆ ಮಹಿಳೆ ಯಾಕೆ ಇಷ್ಟೊಂದು ಮುಂದುವರಿದಿದ್ದಾರೆ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ದರ್ಶನ್ ಮತ್ತು ಇತರೆ ಸ್ನೇಹಿತರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರು ನೀಡಿದ್ದೇವೆ. ಕಳೆದ 2 ತಿಂಗಳಿನಿಂದ ಇದು ನಡೆಯುತ್ತಿದೆ’ ಎಂದಿದ್ದಾರೆ ಅವರು.

ಏನಿದು ಪ್ರಕರಣ?

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತ ಹಾಗೂ ನಿರ್ಮಾಪಕ ಉಮಾಪತಿ ಗೌಡ ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಭಿಮಾನವನ್ನು ಹೀಗೂ ತೋರಿಸಬಹುದು; ಪ್ರಾಣಿಪ್ರಿಯ ದರ್ಶನ್​ ಇದನ್ನು ನೋಡಿದ್ರೆ ಖುಷಿಯಾಗೋದು ಗ್ಯಾರಂಟಿ

‘ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ’; ನಟ ದರ್ಶನ್​ ಬಳಿ ತೆರಳಿದ ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

Published On - 5:19 pm, Sun, 11 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ