ವಿಳಂಬ ಆಗುತ್ತೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್? ನಿರ್ಮಾಪಕರಿಗೆ ಕಾಡಿದೆ ಭಯ

ಡೆವಿಲ್’ ಸಿನಿಮಾ ಕೆಲಸಗಳಲ್ಲಿ ದರ್ಶನ್ ಅವರು ‘ಬ್ಯುಸಿ ಇದ್ದರು. ಈ ಚಿತ್ರವನ್ನು ಅಕ್ಟೋಬರ್​ನಲ್ಲಿ ರಿಲೀಸ್ ಮಾಡೋ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ, ಅವರ ಕೈಗೆ ಪೆಟ್ಟಾಗಿದ್ದರಿಂದ ಸಿನಿಮಾ ಕೆಲಸ ಮುಂದಕ್ಕೆ ಹೋಯಿತು. ಈಗ ಮತ್ತೊಮ್ಮೆ ‘ಡೆವಿಲ್’ ಸಿನಿಮಾ ಮುಂದಕ್ಕೆ ಹೋಗುವ ಸೂಚನೆ ಸಿಕ್ಕಿದೆ.

ವಿಳಂಬ ಆಗುತ್ತೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್? ನಿರ್ಮಾಪಕರಿಗೆ ಕಾಡಿದೆ ಭಯ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 12, 2024 | 12:32 PM

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ (Darshan) ಅವರು ಬಂಧನಕ್ಕೆ ಒಳಗಾಗಿದ್ದಾರೆ. ಅವರು ಕೊಲೆ ಮಾಡಿದ್ದು ಸಾಬೀತಾದರೆ ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂದೆ ಪ್ರಕರಣ ಯಾವ ರೀತಿಯಲ್ಲಿ ಸಾಗಬಹುದು ಎನ್ನುವ ಕುತೂಹಲ ಅನೇಕರಲ್ಲಿ ಇದೆ. ಈಗಾಗಲೇ ದರ್ಶನ್ ಜೊತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಸೂಚನೆಯಂತೆ ಕೊಲೆ ಮಾಡಿರುವುದಾಗಿ ಕೆಲವರು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈಗ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಈ ಚಿತ್ರವನ್ನು ಅಕ್ಟೋಬರ್​ನಲ್ಲಿ ರಿಲೀಸ್ ಮಾಡೋ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ, ಅವರಿಗೆ ಸಿನಿಮಾ ಶೂಟ್ ವೇಳೆ ಗಾಯಗೊಂಡಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಗಾದರು. ಹೀಗಾಗಿ ಸಿನಿಮಾ ಕೆಲಸಗಳನ್ನು ನಿಲ್ಲಿಸಲಾಗಿತ್ತು. ಈಗ ಅವರ ಬಂಧನದಿಂದ ಸಿನಿಮಾ ನಿರ್ಮಾಪಕರಿಗೆ ಮತ್ತೆ ಭಯ ಕಾಡಿದೆ. ಇಂದು ಕೂಡ ದರ್ಶನ್ ಅವರು ಶೂಟಿಂಗ್​ನಲ್ಲಿ ಭಾಗಿ ಆಗಬೇಕಿತ್ತು ಎನ್ನಲಾಗಿದೆ. ಆದರೆ, ಆಗಲೇ ಅವರನ್ನು ಬಂಧಿಸಲಾಗಿದೆ.

‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಇದೆ. ‘ವಂಶಿ’, ‘ಮಿಲನ’ ಮೊದಲಾದ ಸಿನಿಮಾಗಳಿಗೆ ಪ್ರಕಾಶ್ ವೀರ್ ಅವರು ಆ್ಯಕ್ಷನ್ ಕಟ್ ಹೇಳಿದ್ದರು. ದರ್ಶನ್ ಅವರ ಜೊತೆ ಈ ಮೊದಲು ‘ತಾರಕ್’ ಸಿನಿಮಾ ಮಾಡಿದ್ದರು. ಈ ಚಿತ್ರ 2017ರಲ್ಲಿ ರಿಲೀಸ್ ಆಗಿತ್ತು. ಇವರು ಎರಡನೇ ಬಾರಿಗೆ ಒಂದಾಗಿದ್ದಾರೆ. ಈಗ ಚಿತ್ರಕ್ಕೆ ತೊಂದರೆ ಎದುರಾಗಿದೆ. ಜೆ. ಜಯಮ್ಮ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೇ ದರ್ಶನ್ ಅವರು ವರ್ಷಕ್ಕೆ ಎರಡು ಸಿನಿಮಾ ನೀಡುವ ಟಾರ್ಗೆಟ್​ನ ಇಟ್ಟುಕೊಂಡಿದ್ದಾರೆ. ಆದರೆ, ಈ ವರ್ಷ ಅದು ಸಾಧ್ಯವಾಗುತ್ತಿಲ್ಲ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್ ತೊಂದರೆ ಅನುಭವಿಸಿದರೆ ‘ಡೆವಿಲ್’ ಚಿತ್ರದ ಕೆಲಸಗಳು ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇರುತ್ತದೆ. ಆಗ ಈ ವರ್ಷ ಅವರ ಯಾವ ಸಿನಿಮಾಗಳೂ ರಿಲೀಸ್ ಆಗುವುದಿಲ್ಲ.

ಇದನ್ನೂ ಓದಿ: ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ, ರೀಟ್ವೀಟ್ ಮಾಡಿದ ನಟಿ ರಮ್ಯಾ

ಕಳೆದ ವರ್ಷಾಂತ್ಯಕ್ಕೆ ‘ಕಾಟೇರ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿ ಗೆಲುವು ಕಂಡಿದೆ. ಈ ಚಿತ್ರದಿಂದ ದರ್ಶನ್ ಖ್ಯಾತಿ ಹೆಚ್ಚಿತು. ಹೀಗಿರುವಾಗಲೇ ದರ್ಶನ್ ಅವರು ತೊಂದರೆ ಅನುಭವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:56 pm, Tue, 11 June 24

ತಾಜಾ ಸುದ್ದಿ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್