AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪ ಸಾಬೀತಾದರೆ ಚಿತ್ರರಂಗದಿಂದ ದರ್ಶನ್ ಬ್ಯಾನ್? ಇರುವ ಅಡೆತಡೆಗಳೇನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಈ ಪ್ರಕರಣದಿಂದ ದರ್ಶನ್ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಿನಿ ಕರಿಯರ್ ಎಕೊನೆಗೊಳ್ಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಆರೋಪ ಸಾಬೀತಾದರೆ ಚಿತ್ರರಂಗದಿಂದ ದರ್ಶನ್ ಬ್ಯಾನ್? ಇರುವ ಅಡೆತಡೆಗಳೇನು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 12, 2024 | 12:30 PM

Share

ನಟ ದರ್ಶನ್ (Darshan) ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ದರ್ಶನ್ ಅವರು ಅರೆಸ್ಟ್ ಆಗಿರುವುದರಿಂದ ಸ್ಯಾಂಡಲ್​ವುಡ್ ಸೈಲೆಂಟ್ ಆಗಿದೆ. ಬಹುತೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಕೆಲವೇ ಕೆಲವು ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿಜಕ್ಕೂ ತಪ್ಪಾಗಿದ್ದರೆ ಶಿಕ್ಷೆ ಆಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಈ ರೀತಿ ಘಟನೆಗಳು ನಡೆದಾಗ ಕರ್ನಾಟಕ ಚಲನಚಿತ್ರ ಮಂಡಳಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತದೆ ಅನ್ನೋದು ಮುಖ್ಯವಾಗುತ್ತದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಅವರು ಈ ಕೇಸ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಅವರು ಚಿತ್ರರಂಗದ ಮಾನ-ಮರ್ಯಾದೆ ಕಳೆದಿರುವುದಾಗಿ ಅವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರ ಮೇಲೆ ನಿಷೇಧ ಹೇರುವುದಾಗಿಯೂ ಹೇಳಿದ್ದಾರೆ. ಜೊತೆಗೆ ಈ ವಿಚಾರದಲ್ಲಿ ಕಲಾವಿದರ ಸಂಘದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಕಲಾವಿದರ ಸಂಘದ ವಿಚಾರಕ್ಕೆ ಬರೋದಾದರೆ ಅದು ಸಂಪೂರ್ಣ ನಿಷ್ಕ್ರಿಯವೇ ಆಗಿ ಬಿಟ್ಟಿದೆ ಎನ್ನಬಹುದು. ಅಂಬರೀಷ್ ಅವರು ಈ ಸಂಘಕ್ಕೆ ಅಧ್ಯಕ್ಷರಾಗಿದ್ದರು. ಅವರು ಮೃತಪಟ್ಟ ಬಳಿಕ ಮತ್ತೊಬ್ಬರ ಆಯ್ಕೆ ಆಗಿಲ್ಲ. ಸಭೆಗಳು ಕೂಡ ನಡೆಯುತ್ತಿಲ್ಲ. ಹೀಗಿರುವಾಗ ಸಂಘದವರು ದರ್ಶನ್​ನ ಬ್ಯಾನ್ ಮಾಡೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ, ದರ್ಶನ್ ಮೇಲೆ ರೌಡಿಶೀಟರ್? ಗೃಹ ಸಚಿವರು ಹೇಳಿದ್ದೇನು ನೋಡಿ

ದರ್ಶನ್ ಸಿನಿಮಾಗಳಿಗೆ ಬೇಡಿಕೆ ಇದೆ. ಅವರು ಸಿನಿಮಾಗಳಿಂದ ಅನೇಕರಿಗೆ ಕೆಲಸ ಸಿಗುತ್ತಿದೆ. ಇವರನ್ನು ಬ್ಯಾನ್ ಮಾಡಬೇಕು ಎಂದಾಗ ಅದನ್ನು ಬೆಂಬಲಿಸೋರು ಕಡಿಮೆ ಎನ್ನುವ ಮಾತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್