ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ

ದರ್ಶನ್ ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ನಟ ದರ್ಶನ್​ಗೆ ನಿತ್ಯ ತಣ್ಣೀರು ಸ್ನಾನ; ದಾಸನಿಗೆ ಅರಿವಾಗುತ್ತಿದೆ ಜೈಲಿನ ವಾಸ್ತವತೆ
ದರ್ಶನ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ರಾಜೇಶ್ ದುಗ್ಗುಮನೆ

Updated on: Sep 07, 2024 | 11:51 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅವರು ಬಳ್ಳಾರಿ ಜೈಲಿನ ಊಟ ಮಾಡುತ್ತಿದ್ದಾರೆ. ಈ ಮಧ್ಯೆ ದರ್ಶನ್​ಗೆ ಜೈಲಿನ ನೈಜತೆ ಅರಿವಾಗುತ್ತಿದೆ. ಈ ಮಧ್ಯೆ ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ದರ್ಶನ್‌ಗೆ ತಣ್ಣೀರು ಸ್ನಾನವೇ ಗತಿ ಆಗಿದೆ. ಇಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರು ಹಾಯಾಗಿ ಇದ್ದರು. ಅವರು ಸುಖವಾಗಿ ಸಮಯ ಕಳೆಯುತ್ತಾ ಇದ್ದರು. ಈ ವ್ಯವಸ್ಥೆ ಮಾಡಿಕೊಟ್ಟಿದ್ದು ವಿಲ್ಸನ್ ಗಾರ್ಡನ್ ನಾಗ. ಆದರೆ, ಈಗ ಬಳ್ಳಾರಿಯಲ್ಲಿ ವ್ಯವಸ್ಥೆ ಮಾಡಿಕೊಡಲು ಯಾರೂ ಇಲ್ಲ. ಅವರನ್ನು ಹೈ ಸೆಕ್ಯೂರಿಟಿ ಸೆಲ್​ನಲ್ಲಿ ಇಡಲಾಗಿದೆ. ದರ್ಶನ್ ಅವರನ್ನು ಸಾಮಾನ್ಯ ಕೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಹೀಗಾಗಿ ಕಳೆದ 9 ದಿನಗಳಿಂದ ಬಳ್ಳಾರಿ ಜೈಲಿನಲ್ಲಿ ದರ್ಶನ್ ತಣ್ಣಿರ ಸ್ನಾನ ಮಾಡುತ್ತಿದ್ದಾರೆ. ಬಳ್ಳಾರಿ ಕಾರಾಗೃಹದಲ್ಲಿರುವ ಜೈಲಿನ ವಾಸ್ತವತೆ ದರ್ಶನ್​ಗೆ ಅರಿವಾಗುತ್ತಿದೆ.

ಹಬ್ಬಕ್ಕೆ ಇಲ್ಲ ಕಳೆ

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಆರೋಪಿ ದರ್ಶನ್ ಇರುವ ಕಾರಣಕ್ಕೆ ಹಬ್ಬದ ಸಂಭ್ರಮ ಕಳೆಗುಂದಿದೆ. ಬಳ್ಳಾರಿ ಜೈಲಿನಲ್ಲಿ ಗಣೇಶನ ಚತುರ್ಥಿ ಈ ವರ್ಷ ಸರಳವಾಗಿ ಆಚರಣೆ ಮಾಡಲು ನಿರ್ಧಾರ‌‌ ಮಾಡಲಾಗಿದೆ. ಕೇವಲ ಜೈಲು ಸಿಬ್ಬಂದಿಗೆ ಮಾತ್ರ ಗಣೇಶ ಮಂಟಪ ಅಲಂಕಾರ ಮಾಡಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ದರ್ಶನ್​ ಕ್ರೌರ್ಯ ಎಷ್ಟಿತ್ತು? ಚಾರ್ಜ್​​ಶೀಟ್​ನಲ್ಲಿ ಮತ್ತೊಂದು ಶಾಕಿಂಗ್ ವಿಚಾರ ರಿವೀಲ್

ಪ್ರತಿ ವರ್ಷ ಎಲ್ಲ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು. ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಾರಿ ಕೈ ಮುಗಿದು ಪ್ರಾರ್ಥನೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ನಿರ್ಧಾರ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ