AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

Share

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್