ಅಭಿಮಾನಿಗಳ ಬಳಿ ದರ್ಶನ್ ವಿಶೇಷ ಮನವಿ; ಇದನ್ನು ಪಾಲಿಸ್ತಾರಾ ಫ್ಯಾನ್ಸ್?

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು ದರ್ಶನ್ ಅವರು ಹೊತ್ತಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ. ಈ ಮಧ್ಯೆ ದರ್ಶನ್ ಅವರು ಅಭಿಮಾನಿಗಳ ಬಳಿ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ.

ಅಭಿಮಾನಿಗಳ ಬಳಿ ದರ್ಶನ್ ವಿಶೇಷ ಮನವಿ; ಇದನ್ನು ಪಾಲಿಸ್ತಾರಾ ಫ್ಯಾನ್ಸ್?
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Jun 28, 2024 | 8:52 AM

ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಜೈಲು ಸೇರಿದ್ದಾರೆ. ನಿತ್ಯವೂ ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ. ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ದರ್ಶನ್ ಅವರನ್ನು ಭೇಟಿಗೆ ಪೊಲೀಸರ ಬಳಿ ಅವಕಾಶ ಕೇಳುತ್ತಿದ್ದಾರೆ. ಆದರೆ, ಅದು ಸಾಧ್ಯವಿಲ್ಲ. ಹೀಗಾಗಿ ದರ್ಶನ್ ಅವರೇ ಈಗ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.

ಜೈಲಿನಿಂದಲೇ ನಟ ದರ್ಶನ್ ಮನವಿ ಮಾಡಿದ್ದಾರೆ. ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ‘ಯಾರೂ ಜೈಲಿನ ಬಳಿ ಬರಬೇಡಿ’ ಎಂದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿದ್ದಾರೆ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಸುಮ್ಮನೆ ಬಂದು ಸಮಯ ವ್ಯರ್ಥ ಮಾಡದಂತೆ ದರ್ಶನ್ ಕೋರಿದ್ದಾರೆ ಎನ್ನಲಾಗಿದೆ.

‘ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ’ ಎಂದು ದರ್ಶನ್ ಅವರು ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ. ಇತ್ತೀಚೆಗೆ ಸೌಮ್ಯ ಹೆಸರಿನ ವಿಶೇಷ ಚೇತನ ಯುವತಿ ದರ್ಶನ್ ಭೇಟಿಗೆ ಬಂದಿದ್ದರು. ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದರು. ಇದನ್ನು ಕೇಳಿ ದರ್ಶನ್ ಬೇಸರಗೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಹೆಸರಿನ ವಿಶೇಷ ಚೇತನ ಕೂಡ ಆಗಮಿಸಿದ್ದ.

ಇದನ್ನೂ ಓದಿ: ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ

ಈ ರೀತಿ ಆಗಮಿಸಿದವರಿಗೆ ದರ್ಶನ್ ಭೇಟಿ ಅಸಾಧ್ಯ. ಹೀಗಾಗಿ, ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:51 am, Fri, 28 June 24

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ