AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್

Leelavathi: ನಟ ದರ್ಶನ್ ಇಂದು (ನವೆಂಬರ್ 26) ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿಯ ಯೋಗಕ್ಷೇಮ ವಿಚಾರಿಸಿದ ನಟ ದರ್ಶನ್
ದರ್ಶನ್-ಲೀಲಾವತಿ
ಮಂಜುನಾಥ ಸಿ.
|

Updated on: Nov 26, 2023 | 5:55 PM

Share

ಹಿರಿಯ ನಟಿ ಲೀಲಾವತಿಯವರ (Leelavathi) ಆರೋಗ್ಯ ಬಹುವಾಗಿ ಕ್ಷೀಣಿಸಿದೆ. ಈಗಂತೂ ಹಾಸಿಗೆ ಬಿಟ್ಟು ಏಳಲಾರದ ಸ್ಥಿತಿ ತಲುಪಿದ್ದಾರೆ. ಇದೇ ಕಾರಣಕ್ಕೆ ಚಿತ್ರರಂಗದ ಹಲವು ನಟ-ನಟಿಯರು ಒಬ್ಬರ ಹಿಂದೊಬ್ಬರು ಬಂದು ತಮ್ಮ ಚಿತ್ರರಂಗದ ಹಿರಿಯ ನಟಿಯ ಕಂಡು ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಹೋಗುವ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಅರ್ಜುನ್ ಸರ್ಜಾ, ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಮನೆಗೆ ಭೇಟಿ ನೀಡಿದ್ದರು. ಇಂದು (ನವೆಂಬರ್ 26) ಕ್ಕೆ ನಟ ದರ್ಶನ್ ಅವರು ಲೀಲಾವತಿಯವರನ್ನು ಕಾಣಲು ಬಂದಿದ್ದರು.

ನೆಲಮಂಗಲದ ಸೋಲದೇವನಹಳ್ಳಿಯ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ನಟ ದರ್ಶನ್, ಹಾಸಿಗೆ ಮೇಲೆ ಮಲಗಿದ್ದ ಲೀಲಾವಾತಿಯವರನ್ನು ಕಂಡು ಮಾತನಾಡಿಸಲು ಪ್ರಯತ್ನಿಸಿದರು. ಅಮ್ಮ ನಾನು ದರ್ಶನ್ ಬಂದಿದ್ದೀನಿ ಎಂದು ಅಕ್ಕರೆಯಿಂದ ಮಾತನಾಡಿದರು. ಆದರೆ ಹಿರಿಯ ಜೀವನಕ್ಕೆ ಪ್ರತಿಕ್ರಿಯೆ ನೀಡುವಷ್ಟು ದೇಹದಲ್ಲಿ ತ್ರಾಣವಿಲ್ಲ. ‘ಎಲ್ಲರನ್ನೂ ಗುರುತು ಹಿಡೀತಾರೆ ಆದರೆ ಮಾತನಾಡಲು ಆಗುತ್ತಿಲ್ಲ’ ಎಂದು ವಿನೋದ್ ರಾಜ್ ಹೇಳಿದರು.

ವಿನೋದ್ ರಾಜ್​ ಅವರು ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ನಿನ್ನೆ (ನವೆಂಬರ್ 25) ಆ ಆಸ್ಪತ್ರೆಯಲ್ಲಿ ಹೋಮ ಹವನಗಳನ್ನು ನೆರವೇರಿಸಿದ್ದಾರೆ. ಇಂದು (ನವೆಂಬರ್ 26) ನಟ ದರ್ಶನ್ ಸಹ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದರು. ವಿನೋದ್ ರಾಜ್​ ಜೊತೆ ಕೆಲ ಕಾಲ ಮಾತನಾಡಿ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿ ತೆರಳಿದರು.

ಇದನ್ನೂ ಓದಿ:ಅಭಿಷೇಕ್​ ಅಂಬರೀಷ್​ ನಟನೆಯ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾ ನೋಡಿ 5ಕ್ಕೆ 5 ಸ್ಟಾರ್ ನೀಡಿದ ದರ್ಶನ್​

ಕೆಲವು ದಿನಗಳ ಹಿಂದೆಯಷ್ಟೆ ನಟ ಅರ್ಜುನ್ ಸರ್ಜಾ, ಸೋಲದೇವನಹಳ್ಳಿಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ವಿನೋದ್ ರಾಜ್ ಜೊತೆ ಸೇರಿ ಅವರ ತೋಟದಲ್ಲಿ ಸುತ್ತಾಡಿ ಖುಷಿ ಪಟ್ಟಿದ್ದರು. ಅವರ ತೋಟದ ಕೆಲಸದವರ ಜೊತೆ ಚಿತ್ರಗಳನ್ನು ತೆಗೆಸಿಕೊಂಡಿದ್ದರು. ವಿನೋದ್ ರಾಜ್​ಗೆ ಹಾಗೂ ಲೀಲಾವತಿ ಅವರಿಗೆ ಧೈರ್ಯ ತುಂಬಿದರು.

ಅದಕ್ಕೂ ಮುನ್ನ ನಟಿಯರಾದ ಮಾಳವಿಕಾ ಅವಿನಾಶ್, ಶ್ರುತಿ, ಸುಧಾರಾಣಿ ಅವರುಗಳು ಸಹ ಹೋಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು. ಅದಾದ ಬಳಿಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಪದಾಧಿಕಾರಿಗಳು ಭೇಟಿ ನೀಡಿದ್ದರು. ಆ ಬಳಿಕ ಶ್ರೀನಾಥ್, ಶ್ರೀಧರ್, ಟೆನ್ನಿಸ್ ಕೃಷ್ಣ, ದೊಡ್ಡಣ್ಣ ಸೇರಿದಂತೆ ಹಲವು ಹಿರಿಯ ನಟರು, ನಟಿಯರು ಲೀಲಾವತಿಯವರ ಮನೆಗೆ ಭೇಟಿ ನೀಡಿದ್ದರು. ಬಸ್ ಮಾಡಿಕೊಂಡು ಎಲ್ಲ ನಟರು ಒಟ್ಟಾಗಿ ಲೀಲಾವತಿ ಮನೆಗೆ ಭೇಟಿ ನೀಡಿ ಅಲ್ಲಿ ಲೀಲಾವತಿಯವರ ಮುಂದೆ ಹಾಡು, ನೃತ್ಯ, ನಾಟಗಳನ್ನು ಮಾಡಿ ಅವರ ಮನರಂಜಿಸುವ ಕಾರ್ಯ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್