AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ನೋಟಿಸ್​​ಗೆ ಧನ್ವೀರ್ ಡೋಂಟ್ ಕೇರ್; ವಿಚಾರಣೆಗೆ ಗೈರು

ನಟ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್‌ಗೆ ನಟ ಧನ್ವೀರ್ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗ ಎರಡನೇ ನೋಟಿಸ್ ನೀಡಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಇದಕ್ಕಾದರೂ ಅವರು ಪ್ರತಿಕ್ರಿಯಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪೊಲೀಸರ ನೋಟಿಸ್​​ಗೆ ಧನ್ವೀರ್ ಡೋಂಟ್ ಕೇರ್; ವಿಚಾರಣೆಗೆ ಗೈರು
ಧನ್ವೀರ್
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 03, 2026 | 10:04 AM

Share

ಮುಖ್ಯಾಂಶಗಳು

  • ಝೈದ್ ಖಾನ್ ವಿರುದ್ಧ ನಿಂದನೆ ಆರೋಪ
  • ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು
  • ಪೊಲೀಸ್ ನೋಟಿಸ್‌ಗೆ ಡೋಂಟ್ ಕೇರ್ ಎಂದ ನಟ ಧನ್ವೀರ್

ನಟ ಧನ್ವೀರ್ ಗೌಡ ವಿರುದ್ಧದ ಕಾನೂನು ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಟ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿ ನಿಂದಿಸಿರುವ ಆರೋಪದ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಪೊಲೀಸರು ಧನ್ವೀರ್​ಗೆ ನೋಟಿಸ್ ನೀಡಿದ್ದರು. ಈ ನೊಟಿಸ್​​ಗೆ ಧನ್ವೀರ್ ಕ್ಯಾರೇ ಎನ್ನುತ್ತಿಲ್ಲ.

ಧನ್ವೀರ್ ಗೌಡ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಿವಾದ ಭುಗಿಲೆದ್ದಿದೆ. ಈ ಜಟಾಪಟಿಯ ಮಧ್ಯೆಯೇ ನಟ ಧನ್ವೀರ್ ಅವರು ಝೈದ್ ಖಾನ್ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಈ ಆಡಿಯೋ ಬೆನ್ನಲ್ಲೇ ಝೈದ್ ಖಾನ್ ಅಭಿಮಾನಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದರು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನಟ ಧನ್ವೀರ್ ಅವರಿಗೆ ಪೊಲೀಸರು ಮೊದಲ ನೋಟಿಸ್ ಜಾರಿ ಮಾಡಿದ್ದರು. ಆದರೆ, ನೀಡಿದ ಸಮಯಕ್ಕೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗದೆ ನಟ ಧನ್ವೀರ್ ಗೈರಾಗುವ ಮೂಲಕ ನೋಟಿಸ್‌ಗೆ ಯಾವುದೇ ಕ್ಯಾರೇ ಎಂದಿಲ್ಲ. ಅವರಿಗೆ 2ನೇ ನೋಟಿಸ್ ಜಾರಿಗೊಳಿಸಲು ಚಾಮರಾಜಪೇಟೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: ನಟ ಧನ್ವೀರ್ ವಿರುದ್ಧ ಕೋರ್ಟ್​​ನಲ್ಲಿ ಮಾನನಷ್ಟ ದೂರು ದಾಖಲು ಮಾಡಿದ ವಿಜಯಲಕ್ಷ್ಮಿ

ಇನ್ನೊಂದೆಡೆ, ಧನ್ವೀರ್ ಗೌಡ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಹಲವು ಎಫ್‌ಐಆರ್‌ಗಳು ಹಾಗೂ ದೂರುಗಳು ದಾಖಲಾಗಿವೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿಮಾನಿಗಳು ಹಾಗೂ ಬೆಂಬಲಿಗರು ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 2ನೇ ನೋಟಿಸ್‌ಗಾದರೂ ಧನ್ವೀರ್ ವಿಚಾರಣೆಗೆ ಹಾಜರಾಗುತ್ತಾರಾ ಎಂಬುದನ್ನು ಕಾಯ್ದುನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More