AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ

‘ಉತ್ತರಕಾಂಡ’ ಚಿತ್ರದಲ್ಲಿ ಶಿವಣ್ಣ, ಡಾಲಿ ಧನಂಜಯ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಇದರ ಜೊತೆಗೆ ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ದಿಗಂತ್ ಅವರು ತಂಡ ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಮಿರ್ಚಿ ಮಲ್ಲಿಗೆ ಹೆಸರಿನ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ
ದಿಗಂತ್
TV9 Web
| Edited By: |

Updated on: Apr 18, 2024 | 10:23 AM

Share

ನಟ ದಿಗಂತ್ ಮಂಚಾಲೆಗೆ (Diganth Manchale) ಈ ವರ್ಷ ಸಖತ್ ವಿಶೇಷ ಎನಿಸಿಕೊಂಡಿದೆ. 2024ರಲ್ಲಿ ಅವರ ನಟನೆಯ ‘ಬ್ಯಾಚುಲರ್ ಪಾರ್ಟಿ’ ಹಾಗೂ ‘ಮಾರಿಗೋಲ್ಡ್’ ಸಿನಿಮಾ ರಿಲೀಸ್ ಆಗಿದೆ. ಇದರ ಜೊತೆಗೆ ಅವರು ಹೊಸ ಸಿನಿಮಾಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಸಿನಿಮಾದಲ್ಲಿ ದೂದ್​ಪೇಡಾ ನಟಿಸುತ್ತಿದ್ದಾರೆ. ಹಾಗಂತ ಅವರ ಪಾತ್ರ ಪೇಡೆಯಷ್ಟು ಸ್ವೀಟ್ ಇಲ್ಲ. ಸಖತ್ ರಗಡ್ ಆಗಿ ಅವರ ಪಾತ್ರ ಇರಲಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ.

‘ಉತ್ತರಕಾಂಡ’ ಸಿನಿಮಾದಲ್ಲಿ ಡಾಲಿ ಧನಂಜಯ್, ಶಿವಣ್ಣ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಗಮನ ಸೆಳೆದಿದೆ. ಇದರ ಜೊತೆಗೆ ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ದಿಗಂತ್ ಅವರು ತಂಡ ಸೇರಿಕೊಂಡಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್​ನಲ್ಲಿ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

ಇದನ್ನೂ ಓದಿ: ‘ಉತ್ತರಕಾಂಡ’ ಚಿತ್ರಕ್ಕೆ ‘ಶೈತಾನ್’ ಸಿನಿಮಾ ಸಂಗೀತ ಸಂಯೋಜಕ; ಕನ್ನಡಕ್ಕೆ ಬಂದ ಅಮಿತ್ ತ್ರಿವೇದಿ

‘ಲವ್ ಮತ್ತ್ ಗುಟ್ಕಾ ಜೀವಕ್ಕ್ ಅನಾಹುತ ಹೆಂಗ ಹಂಗಾ ದೂದ್ ಪೇಡಾ ದಿಗಂತ್ ಇಗ್ ಮಿರ್ಚಿ ಮಲ್ಲಿಗಿ ಉತ್ತರಕಾಂಡ ಪಿಚ್ಚರದಾಗ’ ಎಂದು ನಿರ್ಮಾಣ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಪೋಸ್ಟ್ ಮಾಡಿದೆ. ದಿಗಂತ್ ಅವರು ಸಾಫ್ಟ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಆದರೆ, ಈ ಬಾರಿ ಅವರ ಲುಕ್ ಬದಲಾಗಿದೆ. ಕೈಯಲ್ಲಿ ಪಾನ್ ಪರಾಗ್ ಪ್ಯಾಕ್ ಇದೆ. ಪೋಸ್ಟರ್ ನೋಡಿದವರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬೆಂಕಿ ಲುಕ್ ರೀ ಆರ್​ಎಂಡಿ ಭಾಯ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

View this post on Instagram

A post shared by KRG Studios (@krgstudios)

‘ಉತ್ತರಕಾಂಡ’ ಪಕ್ಕಾ ಆ್ಯಕ್ಷನ್ ಡ್ರಾಮಾ ಚಿತ್ರವಾಗಿರಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮತ್ತು ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಟಗರು’ ಸಿನಿಮಾದಲ್ಲಿ ಈ ಕಾಂಬಿನೇಷನ್ ಗಮನ ಸೆಳೆದಿತ್ತು. ‘ಉತ್ತರಕಾಂಡ’ ಚಿತ್ರಕ್ಕೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಅವರು ‘ಕೆಆರ್​ಜಿ’ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ