Actor Diganth: ಅಷ್ಟಕ್ಕೂ ನಟ ದಿಗಂತ್​ಗೆ ಆಗಿದ್ದೇನು?

Actor Diganth Manchale: ಯೋಗರಾಜ್ ಭಟ್ ನಿರ್ದೇಶಿಸಿರುವ ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಈ ಮೂಲಕ ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲೇ ಛಾಪು ಮೂಡಿಸುವ ವಿಶ್ವಾಸದಲ್ಲಿದ್ದಾರೆ ದಿಗಂತ್.

Actor Diganth: ಅಷ್ಟಕ್ಕೂ ನಟ ದಿಗಂತ್​ಗೆ ಆಗಿದ್ದೇನು?
Actor Diganth Manchale
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 21, 2022 | 5:06 PM

ಸ್ಯಾಂಡಲ್​ವುಡ್ ನಟ ದಿಗಂತ್ (Actor Diganth) ಫಿಟ್​ನೆಸ್​ ಫ್ರೀಕ್ ಎಂಬುದು ಗೊತ್ತಿರುವ ವಿಷಯ. ಅದರಲ್ಲೂ ಸದಾ ಎನರ್ಜಿಟಿಕ್​ ಆಗಿ ಕಾಣಿಸಿಕೊಳ್ಳುವ ದಿಗಂತ್ ತಮ್ಮ ಸಾಹಸಗಳಿಂದಲೇ ಅನೇಕ ಬಾರಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇನ್ನು ಕೆಲ ಸಿನಿಮಾಗಳಲ್ಲೂ ತಮ್ಮ ಸಾಹಸಗಳನ್ನು ತೋರಿಸಿ ಮಿಂಚಿದ್ದರು. ಇಂತಹ ಸಾಹಸಗಳಲ್ಲಿ ದಿಗಂತ್ ಅವರಿಗೆ ಸಮ್ಮರ್ ಸಾಲ್ಟ್​ ಫ್ಲಿಪ್ (ಬ್ಯಾಕ್ ಫ್ಲಿಪ್) ಮಾಡುವುದು ಸಿಕ್ಕಾಪಟ್ಟೆ ಇಷ್ಟ. ಹೀಗಾಗಿಯೇ ಅವರು ಅನೇಕ ಬಾರಿ ಸೋಷಿಯಲ್ ಮೀಡಿಯಾದಲ್ಲೂ ತಮ್ಮ ಫ್ಲಿಪ್ ಡೈವ್ ವಿಡಿಯೋಗಳನ್ನು ಹಂಚಿಕೊಂಡಿದ್ದರು. ಇದೀಗ ಅದೇ ಬ್ಯಾಕ್ ಫ್ಲಿಪ್​ನಿಂದಾಗಿ ದಿಗಂತ್ ಆಸ್ಪತ್ರೆಗೆ ದಾಖಲಾಗಿರುವುದು ದುರಾದೃಷ್ಟ ಎನ್ನಬಹುದು. ಏಕೆಂದರೆ ಯಾವುದರಲ್ಲಿ ದಿಗಂತ್ ಪಂಟರ್ ಎನಿಸಿಕೊಂಡಿದ್ದರೂ ಇದೀಗ ಅಂತಹದ್ದೇ ಸಾಹಸ ಮಾಡಲು ಹೋಗಿ ಕುತ್ತಿಗೆಗೆ ಬಲವಾದ ಪೆಟ್ಟ ಮಾಡಿಕೊಂಡಿದ್ದಾರೆ.

ಹೌದು, ಕೆಲ ದಿನಗಳ ಹಿಂದೆ ದಿಗಂತ್ ತಮ್ಮ ಆಪ್ತರು ಮತ್ತು ಕುಟುಂಬಸ್ಥರೊಂದಿಗೆ ಗೋವಾಗೆ ಪ್ರವಾಸ ಹೋಗಿದ್ದರು. ಈ ವೇಳೆ ಟ್ರೆಕ್ಕಿಂಗ್ ಸೇರಿದಂತೆ ಅನೇಕ ಸಾಹಸ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಗೋವಾ ಬೀಚ್​ನಲ್ಲಿ ಸಖತ್ ಮೋಜು ಮಸ್ತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸಮುದ್ರ ತಟದಲ್ಲಿ ಸಾಹಸ ಮಾಡುವುದು ಎಂದರೆ ದಿಗಂತ್​ಗೆ ಅಚ್ಚು ಮೆಚ್ಚು. ಹೀಗಾಗಿಯೇ ಅಲ್ಲೂ ಕೂಡ ಬ್ಯಾಕ್ ಫ್ಲಿಪ್ ಮಾಡಿದ್ದಾರೆ.

ಇದನ್ನೂ ಓದಿ
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Image
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಆದರೆ ದುರಾದೃಷ್ಟವಶಾತ್ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ದಿಗಂತ್ ಅವರ ಕುತ್ತಿಗೆಗೆ ಹಾಗೂ ಬೆನ್ನುಮೂಳೆ ತೀವ್ರ ಪೆಟ್ಟಾಗಿದೆ. ಹೀಗಾಗಿ ಕೂಡಲೇ ಅವರ ಆಪ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿರುವ ದಿಗಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್​ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಫ್ಲಿಪ್ ಅಂತ್ಯದಲ್ಲಿ ನೆಲಕ್ಕೆ ಜೋರಾಗಿ ತಲೆ ಬಡಿದಿದ್ದು, ಇದರಿಂದ ಕುತ್ತಿಗೆ ಗಂಭೀರ ಗಾಯವಾಗಿದೆ. ಅಲ್ಲದೆ ಕತ್ತಿನ ಮೂಳೆಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಕುಟುಂಬಸ್ಥರು ಏರ್​ಲಿಫ್ಟ್​ನ ಮೊರೆ ಹೋಗಲು ಬಯಸಿದ್ದಾರೆ. ಅದರಂತೆ ಸಂಜೆ 5 ಗಂಟೆಯ ವೇಳೆ ದಿಗಂತ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗುತ್ತದೆ ಎಂದು ತಿಳಿದು ಬಂದಿದೆ. ಹಲವು ಬಾರಿ ಸಮ್ಮರ್ ಸಾಲ್ಟ್ ಫ್ಲಿಪ್ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ ದೂದ್ ಪೇಡಾ ದಿಗಂತ್ ಇದೀಗ ಅದೇ ಸಾಹಸದಿಂದ ಆಸ್ಪತ್ರೆ ಸೇರುವಂತಾಗಿದೆ.

ದಿಗಂತ್ ಸದ್ಯ ಗಾಳಿಪಟ-2 ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿರುವ ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಈ ಮೂಲಕ ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲೇ ಛಾಪು ಮೂಡಿಸುವ ವಿಶ್ವಾಸದಲ್ಲಿದ್ದಾರೆ ದಿಗಂತ್. ಇದಲ್ಲದೆ, ಮ್ಯಾರಿಗೋಲ್ಡ್ ಎನ್ನುವ ಮತ್ತೊಂದು ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಹಾಗೆಯೇ ತೆಲುಗಿನ ಎವರು ಚಿತ್ರದ ಕನ್ನಡ ರಿಮೇಕ್​ನಲ್ಲಿ ದಿಗಂತ್ ನಟಿಸುತ್ತಿದ್ದಾರೆ. ಅಲ್ಲದೆ ಎಡಗೈಯೇ ಅಪಘಾತಕ್ಕೆ ಕಾರಣ ಹಾಗೂ ತಿಮ್ಮಯ್ಯ ಅ್ಯಂಡ್ ತಿಮ್ಮಯ್ಯ ಹೆಸರಿನ ಮತ್ತೆರಡು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಒಟ್ಟಿನಲ್ಲಿ ದೂದ್ ಪೇಡಾ ದಿಗಂತ್ ಕೈಯಲ್ಲಿ ಮೂರು-ನಾಲ್ಕು ಚಿತ್ರಗಳಿದ್ದು, ಇದೀಗ ಗಾಯಗೊಂಡಿರುವ ಕಾರಣ ಈ ಚಿತ್ರಗಳ ಚಿತ್ರೀಕರಣ ಮತ್ತಷ್ಟು ತಡವಾಗುವ ಸಾಧ್ಯತೆಯಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:43 pm, Tue, 21 June 22

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ