Breaking: ನಟ, ನಿರ್ದೇಶಕ ಠಪೋರಿ ಸತ್ಯ ನಿಧನ, ಆಪ್ತರ ಕಂಬನಿ
Tapori Sathya: 30 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಸತ್ಯ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.
ನಂದ ಲವ್ಸ್ ನಂದಿತ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಸತ್ಯ (ಠಪೋರಿ ಸತ್ಯ) ನಿಧನ ಹೊಂದಿದ್ದಾರೆ. ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಸತ್ಯ ಅವರಿಗೆ 46 ವರ್ಷ ವಯಸ್ಸಾಗಿತ್ತು.
ಲೂಸ್ ಮಾದ ಯೋಗಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ನಂದ ಲವ್ಸ್ ನಂದಿತ ಸಿನಿಮಾದಲ್ಲಿ ಕ್ವಾಟ್ರು ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ಸತ್ಯ, ಟಪೋರಿ ಸತ್ಯ ಎಂದೇ ಹೆಸರಾಗಿದ್ದ ಇವರು ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾ ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದ ಸತ್ಯ ಸಿನಿಮಾಕ್ಕಾಗಿ ಆಡಿಷನ್ ಸಹ ಮಾಡುತ್ತಿದ್ದರು. ಆದರೆ ಹಠಾತ್ತನೆ ನಿಧನ ಹೊಂದಿದ್ದಾರೆ. ಸತ್ಯ ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ ಕೊಂಡೊಯ್ಯಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 pm, Sun, 23 April 23