ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು: ಭುಗಿಲೆದ್ದ ಆಕ್ರೋಶ, ಘಟನೆಯನ್ನು ಖಂಡಿಸಿದ ನಟ ದ್ರುವ ಸರ್ಜಾ

ಮಹಾರಾಷ್ಟ್ರದಲ್ಲಿ ಕನ್ನಡ ನಾಡಿನ ಧ್ವಜ ಸುಟ್ಟು ಹಾಕಿದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹೆಚ್ಚಾಗುತ್ತಿದೆ. ಹಲವು ತಾರೆಯರು ಟ್ವೀಟ್​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು: ಭುಗಿಲೆದ್ದ ಆಕ್ರೋಶ, ಘಟನೆಯನ್ನು ಖಂಡಿಸಿದ ನಟ ದ್ರುವ ಸರ್ಜಾ
ನಟ ದ್ರುವ ಸರ್ಜಾ
Follow us
TV9 Web
| Updated By: Pavitra Bhat Jigalemane

Updated on:Dec 16, 2021 | 4:16 PM

ಮಹಾರಾಷ್ಟ್ರದಲ್ಲಿ ಕನ್ನಡ ನಾಡಿನ ಧ್ವಜ ಸುಟ್ಟು ಹಾಕಿದ್ದರ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹೆಚ್ಚಾಗುತ್ತಿದೆ. ಹಲವು ತಾರೆಯರು ಟ್ವೀಟ್​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ನಾಡಿನ ಧ್ವಜ ಸುಟ್ಟು ಹಾಕಿದ್ದರ ಬಗ್ಗೆ ನಟ ದ್ರುವ ಸರ್ಜಾ ಭಾಷೆ ಎನ್ನುವುದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ. ಕನ್ನಡ ಧ್ವಜ ನಮ್ಮ ಸಂಸ್ಕೃತಿಯ ತಿಲಕ. ಕನ್ನಡಧ್ವಜವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ. ಸರ್ಕಾರ ಈ ಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕು. ಇದು ನನ್ನಂತಹ ಕೋಟ್ಯಾಂತರ ಕನ್ನಡಿಗರ ಒತ್ತಾಯ ಎಂದು ಟ್ವೀಟ್​ ಮಾಡಿದ್ದಾರೆ. ಕನ್ನಡ ನಾಡಿನ ಭಾವುಟಕ್ಕೆ ಸೆಲ್ಯೂಟ್​ ಮಾಡುವ ಫೋಟೋ ಹಂಚಿಕೊಂಡು ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಧ್ವಜವನ್ನು ಸುಟ್ಟಿರುವುದು ಇದೀಗ ಕನ್ನಡಿಗರ ಸ್ವಾಭಿಮನಕ್ಕೆ ಅವಮಾನ ಮಾಡಿದಂತಾಗಿದೆ. ಈ ಬಗ್ಗೆ ನಟ ಶಿವರಾಜ್​ ಕುಮಾರ್, ಜಗ್ಗೇಶ್​ ಸೇರಿದಂತೆ ಹಲವು ನಟರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರವನ್ನು ಟ್ಯಾಗ್​ ಮಾಡುವ ಮೂಲಕ ಕನ್ನಡಧ್ವಜ, ಕನ್ನಡ ನಾಡನ್ನು ಅವಮಾನಿಸುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ನಿರ್ದೇಶಕ ಆನಂದ್​ ರಾಮ್​ ಕೂಡ ನಮ್ಮ ಭಾಷೆ, ನಾಡು, ನೀರಿನ ಪರ ಧ್ವನಿಯಾಗಿರುವುದು​ ನಮ್ಮ ಕರ್ತವ್ಯ. ಬೆಳಗಾವಿ ಕರ್ನಾಟಕದ ಕಳಶ ಎಂದು ಬರೆದುಕೊಂಡಿದ್ದಾರೆ. ಈ ಕುರಿತು  ನಟ ಗಣೇಶ್ ಕೂಡ ಪ್ರತಿಕ್ರಿಯೆ ನೀಡಿದ್ದು, ಭಾಷೆ ದೊಡ್ಡದು.  ಒಂದು ಭಾಷೆಯಿಂದ‌ ನಾವು ಬೆಳೆದಿದ್ದೇವೆ. ಭಾವುಟವನ್ನು ಸುಟ್ಟಿರುವವರು ಯಾರೇ ಅಗಿರಲಿ  ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರನ್ನು ಹುಡುಕಿ ಶಿಕ್ಷೆ ಕೊಡುವ ಕೆಲಸ  ಆಗಬೇಕು. ಅವರಿಗೆ ತಕ್ಕ ಶಾಸ್ತಿ ಆಗಬೇಕು ಎಂದು ಕನ್ನಡ ಧ್ವಜ ಸುಟ್ಟಿದ್ದರ ಬಗ್ಗೆ ಸ್ಯಾಂಡಲ್​​ವುಡ್​ ನಟ ಗಣೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕನ್ನಡ ಭಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದರು.

ಇದನ್ನೂ ಓದಿ:

ಕನ್ನಡ ಧ್ವಜ ಸುಟ್ಟವರ ವಿರುದ್ಧ ಶಿವಣ್ಣ, ಜಗ್ಗೇಶ್​ ಆಕ್ರೋಶ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಯಾಂಡಲ್​ವುಡ್​ ಖಂಡನೆ

Published On - 1:16 pm, Thu, 16 December 21

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು