AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು, ಸ್ಫೂರ್ತಿದಾಯಕ ಸಂದೇಶದ ವಿಡಿಯೋ ಹಂಚಿಕೊಂಡ ನಟ

Duniya Vijay: ಕಳೆದ 25 ದಿನಗಳ ಹಿಂದೆ ದುನಿಯಾ ವಿಜಯ್ ತಂದೆ-ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ವೇಳೆ ವೈದರ ಸಲಹೆ ಮೇರೆಗೆ ಮನೆಯಲ್ಲಿಯೇ ಆರೈಕೆ ಮಾಡಿದ್ದಾರೆ. ವಯಸ್ಸಾದ ಪೋಷಕರಿಗೆ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಭಯಪಡದೆ ಮಗನಾಗಿ ಅವರಿಗೆ ಆರೈಕೆ ಮಾಡಿ ಕೊರೊನಾ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು, ಸ್ಫೂರ್ತಿದಾಯಕ ಸಂದೇಶದ ವಿಡಿಯೋ ಹಂಚಿಕೊಂಡ ನಟ
ಬಳಿಕ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು
ಆಯೇಷಾ ಬಾನು
| Edited By: |

Updated on:May 26, 2021 | 9:24 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿಗೊಳಗಾಗಿದ್ದ ನಟ ದುನಿಯಾ ವಿಜಯ್ ಪೋಷಕರು ಸದ್ಯ ಗುಣಮುಖರಾಗಿದ್ದು ತಂದೆ-ತಾಯಿಯ ಕೊರೊನಾ ವಿರುದ್ಧದ ಕಾಳಗ ಮತ್ತು ದುನಿಯಾ ವಿಜಯ್ ತಮ್ಮ ಪೋಷಕರನ್ನು ಆರೈಕೆ ಮಾಡಿ ಕಾಪಾಡಿಕೊಂಡ ಬಗ್ಗೆ ವಿಜಯ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಕಳೆದ 25 ದಿನಗಳ ಹಿಂದೆ ದುನಿಯಾ ವಿಜಯ್ ತಂದೆ-ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ವೇಳೆ ವೈದರ ಸಲಹೆ ಮೇರೆಗೆ ಮನೆಯಲ್ಲಿಯೇ ಆರೈಕೆ ಮಾಡಿದ್ದಾರೆ. ವಯಸ್ಸಾದ ಪೋಷಕರಿಗೆ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಭಯಪಡದೆ ಮಗನಾಗಿ ಅವರಿಗೆ ಆರೈಕೆ ಮಾಡಿ ಕೊರೊನಾ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 80 ವರ್ಷದ ತಂದೆ ರುದ್ರಪ್ಪ ಹಾಗೂ 76 ವರ್ಷದ ತಾಯಿ ನಾರಾಯಣಮ್ಮ ಕೊರೊನಾ ಗೆದ್ದು ಈಗ ಗುಣಮುಖರಾಗಿದ್ದಾರೆ. ಈ ಸಮಯದಲ್ಲಿ ದುನಿಯಾ ವಿಜಯ್ ಪೋಷಕರನ್ನು ಉಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆರೈಕೆ ವಿಡಿಯೋ ಶೇರ್ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿಕ್ಲಿಕ್​ಮಾಡಿ

ಕೊರೊನಾ ಬಂತು ಅಂತ ಧೈರ್ಯ ಕಳೆದುಕೊಳ್ಳಬೇಡಿ. ತಂದೆ-ತಾಯಿಯನ್ನು ಕೈಬಿಡಬೇಡಿ. ನನ್ನ ತಂದೆ-ತಾಯಿ ಬದುಕಿದ್ದಾರೆ ಎಂಬ ಖುಷಿಯಿಂದ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿಲ್ಲ. ಎಷ್ಟೋ ಜನ ನನ್ನ ರೀತಿ ಸೇವೆ ಮಾಡಿ ತಂದೆ-ತಾಯಿಯನ್ನು ಕಳೆದುಕೊಂಡವರಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ಕೊರೊನಾ ವಿರುದ್ಧ ಗೆಲ್ಲಲು ಸಕಾರಾತ್ಮಕವಾಗಿ ಯೋಚಿಸಿ. ಜೊತೆಗೆ ನನ್ನ ಜೀವನದಲ್ಲಿ ನಡೆದ ಈ ಘಟನೆ ಕೆಲವರಿಗೆ ಸ್ಫೂರ್ತಿಯಾಗುತ್ತದೆ ಎಂಬ ಕಾರಣಕ್ಕೆ ವಿಡಿಯೋ ಹಂಚಿಕೊಂಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಸೇವ್ ಮೈಸೂರು ಎಂದ ದುನಿಯಾ ವಿಜಯ್, ಡಾಲಿ…!

Published On - 9:02 am, Wed, 26 May 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?