Dwarakish Funeral: ದ್ವಾರಕೀಶ್ ಅಂತ್ಯಕ್ರಿಯೆ ಎಲ್ಲಿ, ಯಾವಾಗ? ಸಾರ್ವಜನಿಕರಿಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ

ದ್ವಾರಕೀಶ್ ಅಂತ್ಯಕ್ರಿಯೆ ಇಂದು (ಏಪ್ರಿಲ್ 17) ನಡೆಯಲಿದೆ. ಬೆಂಗಳೂರಿನ ಟೌನ್​ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರದಲ್ಲಿ 11:30ರವೆರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅನೇಕ ಸೆಲೆಬ್ರಿಟಿಗಳು ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಬೆಂಗಳೂರಿನ ಚಾಮರಾಜಪೇಟೆ ಟಿಆರ್​ಮಿಲ್​ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Dwarakish Funeral: ದ್ವಾರಕೀಶ್ ಅಂತ್ಯಕ್ರಿಯೆ ಎಲ್ಲಿ, ಯಾವಾಗ? ಸಾರ್ವಜನಿಕರಿಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ
ದ್ವಾರಕೀಶ್
Edited By:

Updated on: Apr 17, 2024 | 7:03 AM

ಕನ್ನಡ ಚಿತ್ರರಂಗದ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (Dwarakish) ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಮಂಗಳವಾರ (ಏಪ್ರಿಲ್ 16) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತದೇಹವನ್ನು ಇಲೆಕ್ಟ್ರಾನಿಕ್ ಸಿಟಿಯ ಗುಳಿಮಂಗಳದಲ್ಲಿರುವ ಅವರ ನಿವಾಸದಲ್ಲಿ ಇಡಲಾಗಿದೆ. ಇಂದು (ಏಪ್ರಿಲ್ 17) ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಎಲ್ಲಿ, ಯಾವಾಗ ಅಂತ್ಯಕ್ರಿಯೆ ನಡೆಯಲಿದೆ, ಸಾರ್ವಜನಿಕರು ಎಷ್ಟು ಗಂಟೆಯವರೆಗೆ ಬಂದು ಅಂತಿಮ ದರ್ಶನಕ್ಕೆ ಪಡೆಯಬಹುದು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬೆಳಿಗ್ಗೆ 7:30 ನಂತರ ಬೆಂಗಳೂರಿನ ಟೌನ್​ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ದ್ವಾರಕೀಶ್ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. 11:30ರವೆರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದರ್ಶನದ ಬಳಿಕ ಬೆಂಗಳೂರಿನ ಚಾಮರಾಜಪೇಟೆ ಟಿಆರ್​ಮಿಲ್​ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಗೌರವ ಸಲ್ಲಿಕೆ

ದ್ವಾರಕೀಶ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಹೀಗಾಗಿ, ಅವರಿಗೆ ಗೌರವ ಸಲ್ಲಿಕೆ ಮಾಡಲಾಗುತ್ತಿದೆ. ಇಂದು ಬೆಳಗ್ಗೆ 10.30ರ ಶೋ ಬಂದ್ ಮಾಡಲು ಪ್ರದರ್ಶಕರ ವಲಯದಿಂದ ಕರೆ ನೀಡಲಾಗಿದೆ. ಪ್ರದರ್ಶಕರ ವಲಯದ ಕರೆಗೆ ಚಿತ್ರೋದ್ಯಮ‌ ಸಾಥ್ ಕೊಟ್ಟಿದೆ. ಮದ್ಯಾಹ್ನ 1 ಘಂಟೆ ನಂತರ ಚಿತ್ರಮಂದಿರಗಳಲ್ಲಿ ಶೋ ಆರಂಭ ಆಗಲಿವೆ. ಸಿಂಗಲ್ ಸ್ಕ್ರೀನ್, ಮಲ್ಟಿಪ್ಲೆಕ್ಸ್ ಎಲ್ಲವೂ ಒಂದು ಶೋ ಬಂದ್ ಮಾಡಲಿವೆ.

ಇದನ್ನೂ ಓದಿ: ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ಸೆಲೆಬ್ರಿಟಿಗಳ ಸಂತಾಪ

ದ್ವಾರಕೀಶ್ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್, ದರ್ಶನ್, ಪ್ರಧಾನಿ ನರೇಂದ್ರ ಮೋದಿ, ರಜನಿಕಾಂತ್ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ. ಸದ್ಯ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ಗಾಗಿ ಸುದೀಪ್ ಚೆನ್ನೈನಲ್ಲಿದ್ದಾರೆ. ಅಲ್ಲಿಂದ ವಿಮಾನದಲ್ಲಿ ಅವರು ಬರಲಿದ್ದಾರೆ. ಬಹುತೇಕ ಚಿತ್ರರಂಗದ ಕಲಾವಿದರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸೋ ಸಾಧ್ಯತೆ ಇದೆ.

ದ್ವಾರಕೀಶ್ ಅವರು ಕನ್ನಡದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಅವರು, 15ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ದೊಡ್ಡ ಸ್ಟಾರ್​​ಗಳ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 6:56 am, Wed, 17 April 24