ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

K Shivaram: ಮಾಜಿ ಐಎಎಸ್ ಅಧಿಕಾರಿ, ಜನಪ್ರಿಯ ಚಿತ್ರನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 29, 2024 | 11:55 AM

‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಇನ್ನೂ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ ಕೆ ಶಿವರಾಮ್ (K Shivaram) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಶಿವರಾಮ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆರೋಗ್ಯ ಚಿಂತಾಜನಕ ಆಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದಿದ್ದಾರೆ.

ಕೆ ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ಇಂದು (ಫೆಬ್ರವರಿ 28) ಅವರಿಗೆ ಹೃದಯಾಘಾತವಾಗಿದೆ. ಶಿವರಾಮ್ ಅವರ ಮೆದುಳು ನಿಷ್ಕ್ರಿಯವಾಗಿದೆ ಎನ್ನಲಾಗುತ್ತಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧು ಚಂದ್ರಕೆ’, ‘ವಸಂತಕಾವ್ಯ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ನಾಗ’, ‘ಓ ಪ್ರೇಮ ದೇವತೆ’, 2007ರಲ್ಲಿ ಬಿಡುಗಡೆ ಆದ ‘ಟೈಗರ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. 2007 ರ ಬಳಿಕ ಶಿವರಾಮ್ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿರಲಿಲ್ಲ.

ಇದನ್ನೂ ಓದಿ:‘ಸಂಜು’ ಸಿನಿಮಾದ ಹಾಡುಗಳ ಬಿಡುಗಡೆಗೆ ಸಾಕ್ಷಿಯಾದ ಚಂದನವನದ ಸೆಲೆಬ್ರಿಟಿಗಳು

ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು. ಇದಲ್ಲದೆ, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Wed, 28 February 24

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ