ಬೆಂಗಳೂರಿನಲ್ಲಿ ಮಳೆಯ ಅವಾಂತರ: ಮುಳುಗಿತು ನಟ ಜಗ್ಗೇಶ್​​ ಒಡೆತನದ ಐಷಾರಾಮಿ ಕಾರು

ವೈಯಕ್ತಿಕ ಜೀವನದ ಕುರಿತು ಜಗ್ಗೇಶ್ ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ಅವರು ಕಾರು ಮುಳುಗಿರುವ ಕುರಿತು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಅವಾಂತರ: ಮುಳುಗಿತು ನಟ ಜಗ್ಗೇಶ್​​ ಒಡೆತನದ ಐಷಾರಾಮಿ ಕಾರು
ಜಗ್ಗೇಶ್
Follow us
ರಾಜೇಶ್ ದುಗ್ಗುಮನೆ
|

Updated on:May 22, 2023 | 9:31 AM

ಬೆಂಗಳೂರಿನಲ್ಲಿ ಭಾನುವಾರ (ಮೇ 21) ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. ಈ ಮಧ್ಯೆ ನಟ, ರಾಜಕಾರಣಿ ಜಗ್ಗೇಶ್​ಗೂ (Jaggesh) ಬೆಂಗಳೂರು ಮಳೆಯ ಎಫೆಕ್ಟ್ ತಟ್ಟಿದೆ. ಅವರ ಒಡೆತನದ ಐಷಾರಾಮಿ ಕಾರು ಮಳೆಗೆ ಮುಳುಗಿ ಹೋಗಿದೆ. ಸದ್ಯ, ಕಾರು ಮುಳುಗಿದ ಸ್ಥಳದಲ್ಲಿಂದ ನೀರನ್ನು ಹೊರತೆಗೆಯುವ ಕೆಲಸ ಆಗುತ್ತಿದೆ. ಈ ಬಗ್ಗೆ ಅವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಜಗ್ಗೇಶ್ ಅವರು ಸದ್ಯ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಆಗುಹೋಗುಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಜೊತೆಗೆ ವೈಯಕ್ತಿಕ ಜೀವನದ ಕುರಿತು ಅವರು ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ಅವರು ಕಾರು ಮುಳುಗಿರುವ ಕುರಿತು ಮಾಹಿತಿ ನೀಡಿದ್ದಾರೆ.

‘ನನ್ನ ಮನೆಯ ರಿಪೇರಿ ಕಾರ್ಯದ ಪ್ರಯುಕ್ತ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್​​ನಲ್ಲಿ ನನ್ನ bmw5 ಕಾರು ನಿಲ್ಲಿಸಿದ್ದೆ. ಅಕಾಲಿಕ ಮಳೆಯಿಂದ ನೀರಿನಲ್ಲಿ ಮುಳುಗಡೆ ಆಯಿತು. 5hp ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಆಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಮುಳುಗಿದ ಕಾರಿನ ಫೋಟೋ ಕೂಡ ಹಾಕಿದ್ದಾರೆ.

ಇದನ್ನೂ ಓದಿ: Jaggesh: ಡಾ.ಭುಜಂಗ ಶೆಟ್ಟಿಯ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ನಟ ಜಗ್ಗೇಶ್   

ಭುಜಂಗ ಶೆಟ್ಟಿ ನಿಧನಕ್ಕೆ ಸಂತಾಪ

ಡಾ. ಭುಜಂಗ ಶೆಟ್ಟಿ ಅವರ ಸಾವಿನ ವಾರ್ತೆ ಜಗ್ಗೇಶ್ ಅವರಿಗೆ ಆಘಾತ ತಂದಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದರು. ‘ಇಂದಿನ ದೇವಯ್ಯಪಾರ್ಕ್ ಮೆಟ್ರೋ ಅಡಿಯಲ್ಲಿ 1980ರಲ್ಲಿ ಇವರ ಕಣ್ಣಿನ ಕ್ಲಿನಿಕ್ ಇತ್ತು. ಅಮ್ಮನ ಕಣ್ಣಿನ ಪರೀಕ್ಷೆಗಾಗಿ ಇವರ ಬಳಿ ಹೋಗಿದ್ದ ನೆನಪು. ನಂತರ ಅವರ ಬೆಳವಣಿಗೆ, ಅವರ ಆಸ್ಪತ್ರೆಯಲ್ಲಿ ನಡೆದ ನನ್ನ ಅನೇಕ ಚಿತ್ರದ ಚಿತ್ರೀಕರಣ.. ರಾಜಣ್ಣ ಕಣ್ಣಿನ ದಾನಕ್ಕೆ ಇವರೇ ಪ್ರೇರಣೆ. ಒಟ್ಟಾರೆ ಆತ್ಮೀಯರು ಕಾಲವಾದ ವಿಷಯ ಕೇಳಿ ಅಘಾತವಾಯಿತು’ ಎಂದು ಜಗ್ಗೇಶ್ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Mon, 22 May 23

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ