Tiger Claw Locket Row: ‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’; ಜಗ್ಗೇಶ್ ಭಾವುಕ ಪೋಸ್ಟ್

| Updated By: Digi Tech Desk

Updated on: Oct 26, 2023 | 12:34 PM

‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ ಜಗ್ಗೇಶ್.

Tiger Claw Locket Row: ‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’; ಜಗ್ಗೇಶ್ ಭಾವುಕ ಪೋಸ್ಟ್
Follow us on

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ಸೆಲೆಬ್ರಿಟಿಗಳ ಕತ್ತಿನಲ್ಲಿ ಹುಲಿ ಉಗುರಿನ ಲಾಕೆಟ್ ಇರುವ ಫೋಟೋ ವೈರಲ್ ಆಯಿತು. ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದರು. ‘ತಾಯಿ ಹುಲಿ ಉಗುರಿನ ಪೆಂಡೆಂಟ್ ನೀಡಿದ್ದರು’ ಎಂಬುದಾಗಿ ಅವರು ಒಪ್ಪಿಕೊಂಡಿದ್ದರು. ಹೀಗಾಗಿ, ಅರಣ್ಯ ಅಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದಲ್ಲಿ ಇರುವ ಅವರ ನಿವಾಸಕ್ಕೆ ಬಂದು ಶೋಧ ನಡೆಸಿದ್ದಾರೆ. ಈ ವೇಳೆ ಜಗ್ಗೇಶ್ (Jaggesh) ಅವರು ಲಾಕೆಟ್​ನ ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ.

‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ, ಪಾಚ್ಕೊಳಿ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ, ‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು

ಖಾಸಗಿ ವಾಹಿನಿಯ ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಜಗ್ಗೇಶ್ ಅವರು, ‘ನನ್ನ 20ನೇ ವರ್ಷದ ಬರ್ತ್​ಡೇಗೆ ಅಮ್ಮ ಈ ಲಾಕೆಟ್ ಗಿಫ್ಟ್ ಆಗಿ ಕೊಟ್ಟಿದ್ದರು. ಮಗ ಹುಲಿ ರೀತಿಯಲ್ಲಿ ಬೆಳೆಯಲಿ ಎಂದು ಹುಲಿಯ ಉಗುರಿನ ಲಾಕೆಟ್ ನೀಡಿದ್ದರು’ ಎಂದು ಜಗ್ಗೇಶ್ ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:57 am, Thu, 26 October 23