‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್ ಸೇರಿ 17 ಜನರು ಅರೆಸ್ಟ್ ಆಗಿದ್ದಾರೆ. ಆರು ದಿನಗಳ ಕಾಲ ದರ್ಶನ್ ವಿಚಾರಣೆ ನಡೆಯಲಿದೆ. ಇಂದಿನಿಂದ ಸಾಕ್ಷ್ಯ ಕಲೆ ಹಾಕೋ ಕೆಲಸ ಆರಂಭ ಆಗಲಿದೆ. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.

‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್
ದರ್ಶನ್-ಜಗ್ಗೇಶ್

Updated on: Jun 12, 2024 | 10:42 AM

ದರ್ಶನ್ (Darshan) ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ದರ್ಶನ್ ಅವರು ಈ ರೀತಿ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

‘ಸರ್ವ ಆತ್ಮಾನೇನ ಬ್ರಹ್ಮ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ಈ ಮೂಲಕ ಅವರು ದರ್ಶನ್ ಬಗ್ಗೆಯೇ ಟ್ವೀಟ್ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಿನಿಮೀಯ ರೀತಿಯಲ್ಲಿ ದರ್ಶನ್ ಲಿಂಕ್ ಪತ್ತೆ ಹಚ್ಚಿದ ಪೊಲೀಸರು

‘ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಅವರು ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.