Jaggesh: ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್; ಅವರೇ ಒಪ್ಪಿಕೊಂಡಿದ್ರು..
ನಟ ದರ್ಶನ್ ಹುಲಿ ಉಗುರು ಧರಿಸಿದ್ದಾರೆ. ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎನ್ನಲಾಗಿದೆ. ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈಗ ಜಗ್ಗೇಶ್ ಅವರ ವಿರುದ್ಧವೂ ಅಪಸ್ವರ ಎದ್ದಿದೆ. ಅರಣ್ಯ ಇಲಾಖೆ ನೋಟಿಸ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santosh) ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನೇಕ ಹೀರೋಗಳು ಕತ್ತಲ್ಲಿ ಹುಲಿ ಉಗುರು ಧರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳಲಾಗುತ್ತಿದೆ. ಈಗ ಜಗ್ಗೇಶ್ ಕತ್ತಲ್ಲೂ ಹುಲಿ ಉಗುರು ಇದೆಯಂತೆ. ಸ್ವತಃ ಅವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದರು.
ಖಾಸಗಿ ಸುದ್ದಿ ಸಂಸ್ಥೆ ಒಂದಕ್ಕೆ ಜಗ್ಗೆಶ್ ಅವರು ಸಂದರ್ಶನ ನಿಡಿದ್ದರು. ಈ ವೇಳೆ ಅವರು ಈ ಮಾಹಿತಿ ಹಂಚಿಕೊಂಡಿದ್ದರು. ‘ನನಗೆ 20 ವರ್ಷ ತುಂಬಿದಾಗ ಅಮ್ಮ ಈ ಲಾಕೆಟ್ ನೀಡಿದ್ದರು. ಮಗ ಹುಲಿ ಇದ್ದಾಂಗೆ ಇರಬೇಕು ಎಂದು ಅಮ್ಮ ಈ ಲಾಕೆಟ್ನ ಹಾಕಿದ್ದರು’ ಎಂದು ಸಂದರ್ಶನದಲ್ಲಿ ಜಗ್ಗೇಶ್ ಹೇಳಿದ್ದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಅನೇಕರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಬಂಧನದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ ಮುಳುಬಾಗಿಲು ಬಳಿ 14-ಎಕರೆ ಫಾರ್ಮ್ಹೌಸ್ ಇದೆ
ನಟ ದರ್ಶನ್ ಹುಲಿ ಉಗುರು ಧರಿಸಿದ್ದಾರೆ. ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎನ್ನಲಾಗಿದೆ. ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈಗ ಜಗ್ಗೇಶ್ ಅವರ ವಿರುದ್ಧವೂ ಅಪಸ್ವರ ಎದ್ದಿದೆ. ಅರಣ್ಯ ಇಲಾಖೆ ನೋಟಿಸ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿಆರ್ ರಮೇಶ್ ಅವರು ದೂರು ನೀಡಿದ್ದಾರೆ. ಜಗ್ಗೇಶ್ ಹೇಳಿಕೆಯ ವೀಡಿಯೋವನ್ನು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ರವಾನೆ ಮಾಡಲಾಗಿದೆ. ನಟ ಜಗ್ಗೇಶ್ ಅವರನ್ನು ಇಲಾಖೆ ಅಧಿಕಾರಿಗಳು ಪ್ರಶ್ನೆ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್ಗೆ ಕೈದಿ ನಂಬರ್ ನೀಡಿದ ಜೈಲಿನ ಅಧಿಕಾರಿಗಳು
ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆಗೆ ತೆರಳಿದ್ದರು. ಅವರ ಕತ್ತಲ್ಲಿರುವ ಹುಲಿ ಉಗುರಿನ ಲಾಕೆಟ್ ಎಲ್ಲರ ಗಮನ ಸೆಳೆದಿತ್ತು. ಬಿಗ್ ಬಾಸ್ನಿಂದ ಅವರನ್ನು ಹೊರಕ್ಕೆ ಕರೆಸಿ ಬಂಧಿಸುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದರು. ಇದಾದ ಬಳಿಕ ಸೆಲೆಬ್ರಿಟಿಗಳು ಹುಲಿ ಉಗುರಿನ ಚೈನ್ ಧರಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:42 am, Wed, 25 October 23




