Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ

Jai Jagadeesh Assault Case: ನಟ ಜೈ ಜಗದೀಶ್​ ಅವರು ಬೆಳ್ಳೂರು ಠಾಣೆಗೆ ಆಗಮಿಸಿದ್ದಾರೆ. ತಮ್ಮ ವಿರುದ್ಧ ಮಾಡಲಾಗಿರುವ ಹಲ್ಲೆ ಆರೋಪದ ಸಂಬಂಧ ಅವರು ವಿಚಾರಣೆ ಎದುರಿಸಿದ್ದಾರೆ.

Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ
Follow us
TV9 Web
| Updated By: ಮದನ್​ ಕುಮಾರ್​

Updated on:Jun 12, 2022 | 12:58 PM

ಹಿರಿಯ ನಟ ಜೈ ಜಗದೀಶ್​ (Jai Jagadeesh) ಅವರ ವಿರುದ್ಧ ಹಲ್ಲೆ ಆರೋಪ ಎದುರಾಗಿದೆ. ಜೂನ್​ 5ರಂದು ಅವರು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಪೊಲೀಸರು ಸೂಚಿಸಿದ್ದರು. ಅದರ ಅನ್ವಯ ಇಂದು (ಜೂನ್​ 12) ಜೈ ಜಗದೀಶ್​ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸ್​ ಠಾಣೆಗ ಬಂದ ಅವರು ಅಂದಿನ ಘಟನೆಯ ವಿವರ ನೀಡಿದ್ದಾರೆ. ಬೆಳ್ಳೂರು ಕ್ರಾಸ್ ಟೋಲ್ ಬಳಿ ಜೈ ಜಗದೀಶ್​ ಗಲಾಟೆ ಮಾಡಿಕೊಂಡಿದ್ದರು. ತಮ್ಮ ಕಾರಿನ ಮೇಲೆ ಬಾಟಲ್ ಎಸೆದಿದ್ದಾರೆಂದು ವ್ಯಕ್ತಿಯೊಬ್ಬರ ಜೊತೆ ಅವರು ಜಗಳವಾಡಿದ್ದರು. ಟೋಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್​ನ ಕಿಟಕಿಯಿಂದ ತಂಪು ಪಾನೀಯ ಬಾಟಲ್ ಎಸೆಯಲಾಗಿತ್ತು. ಈ ವೇಳೆ ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಜೈ ಜಗದೀಶ್​ ಅವರು ಹಲ್ಲೆ (Assault) ಮಾಡಿದರು ಎಂಬ ಆರೋಪ ಎದುರಾಗಿದೆ.

ನನ್ನದೇನೂ ತಪ್ಪಿಲ್ಲ ಎಂದ ನಟ:

‘ಬಾಟಲಿಯನ್ನ ಕಾರಿನ ಮೇಲೆ ಎಸೆದಿದ್ದ ವ್ಯಕ್ತಿಯನ್ನು ಪ್ರಶ್ನಿಸಿದೆ. ಈ ವೇಳೆ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ಟೋಲ್ ಬಳಿ ಗಲಾಟೆಯಾಗಿತ್ತು. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಹಲ್ಲೆ ಮಾಡಿಲ್ಲ’ ಎಂದು ಜೈ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

‘ನಡೆದಿರುವುದು ಸಣ್ಣ ಘಟನೆ. ಅದಕ್ಕೆ ರೆಕ್ಕೆ-ಪುಕ್ಕ ಕಟ್ಟಲಾಗಿದೆ. ಈ ಘಟನೆಯ ಹಿಂದೆ ಯಾರೆಲ್ಲ ಇದ್ದಾರೋ ಗೊತ್ತಿಲ್ಲ. ಬಾಟಲಿ ಆ ಕಡೆ ಎಸೆಯಪ್ಪ ಅಂತ ಹೇಳಿದ್ದಕ್ಕೆ ಆತ ಕೆಟ್ಟ ಮಾತುಗಳಿಂದ ನಿಂದಿಸಿದ. 10 ವರ್ಷದ ಹಿಂದೆ ಆಗಿದ್ರೆ ಈ ಮಾತು ಹೇಳಿದಾಗ ಹಕ್ಕೊಂಡು ಜಡಿದಿರುತ್ತಿದ್ದೆ. ಆದ್ರೆ ಈಗ ನಾನು ಹಾಗಿಲ್ಲ. ನನಗೂ ವಯಸ್ಸಾಗಿದೆ. ನಾನೇನು ಮಾತನಾಡಲಿ? ಸೀನಿಯರ್​ ಆರ್ಟಿಸ್ಟ್ ಅಂತ ಜನರು ಮರ್ಯಾದೆ ಕೊಡ್ತಾರೆ. ಅದನ್ನು ಉಳಿಸಿಕೊಳ್ಳುವ ಸಲುವಾಗಿ ಏನೂ ಮಾತನಾಡದೇ ನಾನು ಆಚೆ ಬಂದೆ’ ಎಂದು ಜೈ ಜಗದೀಶ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:32 pm, Sun, 12 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ