‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ.

‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್
ಧರಣಿ ಸಿನಿಮಾದ ಪೋಸ್ಟರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 17, 2023 | 2:22 PM

ಸಣ್ಣ ಸಣ್ಣ ವಿಚಾರಗಳನ್ನೇ ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದವರು ಅನೇಕರಿದ್ದಾರೆ. ಈಗ ಕೋಳಿ ಕಾಳಗದ ಮೇಲೆ ಸಿನಿಮಾ ಬರುತ್ತಿದೆ. ಆ ಚಿತ್ರಕ್ಕೆ ‘ಧರಣಿ’ (Dharani Movie) ಹೆಸರಿನ ಶೀರ್ಷಿಕೆ ಇಡಲಾಗಿದೆ. ‘ಟಕ್ಕರ್’ ಖ್ಯಾತಿಯ ಮನೋಜ್ (Actor Manoj) ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದು, ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ ಸಾಕಷ್ಟು ಗಮನ ಸೆಳೆಯುತ್ತಿದೆ.

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ. ಅವರು ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳೂ ಕೂಡ ಸಾಕಷ್ಟು ಇರಲಿವೆಯಂತೆ.

ಮನೋಜ್ ಅವರ ಜನ್ಮದಿನದ ಅಂಗವಾಗಿ ‘ಧರಣಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಮನೋಜ್​ ಭಯದಲ್ಲಿ ಕುಳಿತಿದ್ದಾರೆ. ಅವರ ಪಕ್ಕದಲ್ಲಿ ಇರುವ ಕೋಳಿ ಗಮನ ಸೆಳೆದಿದೆ. ಮೊದಲ ಪೋಸ್ಟರ್ ಮೂಲಕವೇ ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರಕ್ಕೆ ನಿರ್ದೇಶಕ ಸುಧೀರ್ ಶಾನುಭೋಗ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರು ಸಿನಿಮಾ ನಿರ್ದೇಶನ ಮಾಡಿ ಅನುಭವ ಪಡೆದಿದ್ದಾರೆ.

ಇದನ್ನೂ ಓದಿ:  ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

ವಿನಯ್ ರಾಜ್​ಕುಮಾರ್ ನಟನೆಯ ‘ಅನಂತು ವರ್ಸಸ್ ನುಸ್ರತ್’ ಚಿತ್ರ ಸದ್ದು ಮಾಡಿತ್ತು. ಈ ಚಿತ್ರಕ್ಕೆ ಸುಧೀರ್ ಅವರೇ ನಿರ್ದೇಶನ ಮಾಡಿದ್ದರು. ‘ಮಾರೀಚ’ ಚಿತ್ರವನ್ನು ಸುಧೀರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ‘ಅಳಿದು ಉಳಿದವರು’ ಸಿನಿಮಾಗೆ ಸುಧೀರ್ ಕಥೆ ಬರೆದಿದ್ದರು. ಜಿ.ಕೆ. ಉಮೇಶ್ ಹಾಗೂ ಕೆ. ಗಣೇಶ್ ಐತಾಳ್​ ಅವರು ಈ ಚಿತ್ರವನ್ನು ‘ಯಂಗ್ ಥಿಂಕರ್ಸ್ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅರುಣ್ ಸುರೇಶ್ ಅವರು ಕ್ಯಾಮೆರಾ ಹಿಡಿದ್ದಾರೆ. ಅರುಣೋದಯ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವ ಕುಮಾರ್ ಮಾವಲಿ ಅವರು ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು